Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 81:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಊದಿರಿ ಕೊಂಬನು ಅಮವಾಸ್ಯೆಯಲಿ I ಉತ್ಸವದಿನವಾದ ಪೂರ್ಣಿಮೆಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅಮಾವಾಸ್ಯೆಯಲ್ಲಿಯೂ ನಮ್ಮ ಉತ್ಸವದಿನವಾಗಿರುವ ಪೂರ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಮಾವಾಸ್ಯೆಯಲ್ಲಿಯೂ ನಮ್ಮ ರಜಾಕಾಲವಾದ ಪೂರ್ಣಿಮೆಯಲ್ಲಿಯೂ ತುತ್ತೂರಿಯನ್ನು ಊದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಮಾವಾಸ್ಯೆಯಲ್ಲಿಯೂ ಉತ್ಸವ ದಿವಸವಾಗಿರುವ ಪೂರ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 81:3
23 ತಿಳಿವುಗಳ ಹೋಲಿಕೆ  

ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ, ಇಸ್ರಾಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ, ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೂ, ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವುದಕ್ಕೂ, ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಯ ದಿನಗಳಲ್ಲಿಯೂ, ನಮ್ಮ ದೇವರಾದ ಯೆಹೋವನ ಹಬ್ಬಗಳಲ್ಲಿಯೂ ಇವುಗಳಲ್ಲಿ ಸರ್ವಾಂಗಹೋಮವನ್ನರ್ಪಿಸುವುದಕ್ಕೂ ಈ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.


ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಆಡುಕುರಿ ಹಿಂಡುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸರ್ವಾಂಗಹೋಮ ಮಾಡುವುದಕ್ಕೂ, ಹರಕೆಸಲ್ಲಿಸುವುದಕ್ಕೂ, ಕೃತಜ್ಞತೆಯನ್ನು ತೋರಿಸುವುದಕ್ಕೂ, ಹಬ್ಬವನ್ನು ಆಚರಿಸುವುದಕ್ಕೂ ಸಮಾಧಾನಯಜ್ಞಮಾಡಿದರೆ,


ಯೆಹೂದ್ಯರು ತಿರುಗಿಕೊಂಡು ತಮ್ಮ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾಗಿರುವುದನ್ನು ಕಂಡು ಯೆಹೋವನಿಗೆ ಮೊರೆಯಿಟ್ಟರು, ಯಾಜಕರು ತುತ್ತೂರಿಗಳನ್ನು ಊದಿದರು.


ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿದ್ದಾನೆ; ನಿಮಗೆ ವಿರುದ್ಧವಾಗಿ ಅರ್ಭಟದಿಂದ ಊದತಕ್ಕ ತುತ್ತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿದ್ದಾರೆ. ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಜಯಿಸಲಾರಿರಿ” ಎಂದು ಕೂಗಿ ಹೇಳಿದನು.


ಹಾಗೂ ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನರೂ ಇವರ ಮಕ್ಕಳೂ, ಸಹೋದರರೂ ನಾರುಮಡಿಗಳನ್ನು ಧರಿಸಿಕೊಂಡು, ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನು ನುಡಿಸುತ್ತಾ ಯಜ್ಞವೇದಿಯ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು. ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರೂ ತುತ್ತೂರಿಗಳನ್ನು ಊದುತ್ತಾ ಇದ್ದರು.


ಹೇಮಾನ್ ಮತ್ತು ಯೆದುತೂನರ ಹತ್ತಿರ ವಾದ್ಯಗಾರರಿಗಾಗಿ ತುತ್ತೂರಿ, ತಾಳ ಮೊದಲಾದ ವಾದ್ಯಗಳೂ ಮತ್ತು ದೇವಕೀರ್ತನಾ ಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿ ನೇಮಿಸಲ್ಪಟ್ಟರು.


ಬೆನಾಯ, ಯೆಹಜೀಯೇಲ್ ಎಂಬ ಯಾಜಕರು ದೇವರ ಒಡಂಬಡಿಕೆ ಮಂಜೂಷದ ಮುಂದೆ ನಿತ್ಯವೂ ತುತ್ತೂರಿಗಳನ್ನು ಊದುವುದಕ್ಕೆ ನೇಮಕವಾದರು.


ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ ಮತ್ತು ಎಲೀಯೆಜೆರ್ ಎಂಬ ಯಾಜಕರು ತುತ್ತೂರಿಗಳನ್ನು ಊದುತ್ತಾ ದೇವ ಮಂಜೂಷದ ಮುಂದೆ ಹೋಗುವವರು. ಓಬೇದೆದೋಮ್ ಮತ್ತು ಯೆಹೀಯ ಎಂಬುವವರು ಮಂಜೂಷದ ದ್ವಾರಪಾಲಕರಾಗಿದ್ದರು.


ಅದಕ್ಕೆ ಅವನು, “ಇದು ಅಮಾವಾಸ್ಯೆಯಲ್ಲ, ಸಬ್ಬತ್ತಲ್ಲ. ಈ ಹೊತ್ತು ಯಾಕೆ ಹೋಗುತ್ತೀ?” ಎಂದನು. ಅದಕ್ಕೆ ಆಕೆಯು, “ಎಲ್ಲವು ಸರಿಯೇ” ಎಂದು ಹೇಳಿದಳು.


ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಮತ್ತು ಬೇರೆ ಎಲ್ಲಾ ಕೆಲಸಗಳನ್ನೂ ಆತನು ಸಫಲ ಮಾಡಿದ್ದರಿಂದ ನೀವು ಬಹಳ ಆನಂದದಿಂದಿರಬೇಕು.


“‘ಪ್ರತಿ ತಿಂಗಳ ಆರಂಭದಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ದೋಷವಿಲ್ಲದ ಕುರಿಮರಿಗಳು ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.


ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ.


ನೋಡಿರಿ ಆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪರ್ವತಗಳ ಮೇಲೆ ಸಾರುವ ದೂತನ ಪಾದಗಳು ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟರು ಇನ್ನು ಮುಂದೆ ನಿನ್ನನ್ನು ಮುತ್ತಿಗೆ ಹಾಕಿ ಸೋಲಿಸಲು ಸಾಧ್ಯವಿಲ್ಲ, ಏಕೆಂದರೆ ಅವನು ಸಂಪೂರ್ಣ ನಾಶವಾಗಿದ್ದಾನೆ.


ತನ್ನ ಸಾನ್ನಿಧ್ಯದ ಗುಡಾರವನ್ನು ತೋಟದ ಗುಡಿಸಲನ್ನೋ ಎಂಬಂತೆ ಹಾಳುಮಾಡಿ, ತನ್ನ ಉತ್ಸವಸ್ಥಾನವನ್ನು ನಾಶಪಡಿಸಿದ್ದಾನೆ; ಮಹೋತ್ಸವಗಳು ಮತ್ತು ಸಬ್ಬತ್ ದಿನಗಳು ಚೀಯೋನಿನಲ್ಲಿ ಯಾರ ನೆನಪಿಗೂ ಬಾರದಂತೆ ಮಾಡಿ ಯೆಹೋವನು ಅತಿರೋಷಗೊಂಡು ರಾಜನನ್ನೂ ಮತ್ತು ಯಾಜಕರನ್ನೂ ಧಿಕ್ಕರಿಸಿದ್ದಾನೆ.


ತುತ್ತೂರಿಗಳನ್ನೂ, ಕೊಂಬನ್ನೂ ಊದುತ್ತಾ, ಯೆಹೋವರಾಜನಿಗೆ ಜಯಘೋಷಮಾಡಿರಿ.


ಮೋಶೆಯ ಆಜ್ಞೆಯಂತೆ ಸಬ್ಬತ್ ದಿನ, ಅಮಾವಾಸ್ಯೆ, ವಾರೋತ್ಸವ ಜಾತ್ರೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬ, ಪಂಚಾಶತ್ತಮ ದಿನದ ಹಬ್ಬ, ಪರ್ಣಶಾಲೆ ಹಬ್ಬ ಎಂಬ ಮೂರು ವಾರ್ಷಿಕ ಹಬ್ಬಗಳಲ್ಲಿಯೂ ಆಯಾ ದಿನಗಳಿಗೆ ನೇಮಕವಾದ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.


ಆಗ ದಾವೀದನು ಲೇವಿಯರ ಪ್ರಧಾನರಿಗೆ, “ಗಾಯಕರಾದ ನಿಮ್ಮ ಸಹೋದರರನ್ನು ಸ್ವರಮಂಡಲ, ಕಿನ್ನರಿ, ತಾಳ ಮೊದಲಾದ ವಾದ್ಯಗಳಿಂದ ಉತ್ಸಾಹಧ್ವನಿ ಮಾಡುವುದಕ್ಕಾಗಿ ನೇಮಿಸಿರಿ” ಎಂದು ಆಜ್ಞಾಪಿಸಿದನು.


ಗಾಯಕರಾದ ಹೇಮಾನ್, ಆಸಾಫ್ ಮತ್ತು ಏತಾನರು ಗಟ್ಟಿಯಾಗಿ ಕಂಚಿನ ತಾಳಗಳನ್ನು ಬಾರಿಸಿವವರು.


ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ,


ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ; ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ಸಂಕೀರ್ತಿಸಿರಿ.


ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು