Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 81:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನು ಐಗುಪ್ತ ದೇಶವನ್ನು ಬಾಧಿಸಲಿಕ್ಕೆ ಹೊರಟಾಗ, ನೆನಪಿಗಾಗಿ ಯೋಸೇಫ್ಯರಲ್ಲಿ ಈ ಕಟ್ಟಳೆಯನ್ನು ನೇಮಿಸಿದನು. ಪರಿಚಯವಿಲ್ಲದವನ ಮಾತು ನನಗೆ ಕೇಳಿಸುತ್ತದೆ; ಏನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಈಜಿಪ್ಟರಿಗೆದುರಾಗಿ ತೆರಳಿದಂದು I ಜೋಸೆಪ್ಯರಿಗಾತ ವಿಧಿಸಿದಾಜ್ಞೆಯದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆತನು ಐಗುಪ್ತದೇಶವನ್ನು ಬಾಧಿಸಲಿಕ್ಕೆ ಹೊರಟಾಗ ನೆನಪಿಗಾಗಿ ಯೋಸೇಫ್ಯರಲ್ಲಿ ಇದನ್ನು ನೇವಿುಸಿದನು. ಗುರುತಿಲ್ಲದವನ ಮಾತು ನನಗೆ ಕೇಳಿಸುತ್ತದೆ; ಏನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆತನು ಯೋಸೇಫನನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಾಗ ಅವನೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡನು. ಈಜಿಪ್ಟಿನಲ್ಲಿ ನಾವು ಕೇಳಿದ್ದು ನಮಗೆ ಅರ್ಥವಾಗದ ಭಾಷೆಯನ್ನೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೇವರು ಈಜಿಪ್ಟಿಗೆ ವಿರೋಧವಾಗಿ ಹೊರಟಾಗ, ಅದನ್ನು ಯೋಸೇಫನಲ್ಲಿ ಸಾಕ್ಷಿಯಾಗಿ ನೇಮಿಸಿದನು. ನಾವು ತಿಳಿಯದ ಭಾಷೆಯನ್ನು ಕೇಳಿದಾಗ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 81:5
17 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಐಗುಪ್ತ ದೇಶವನ್ನೂ, ಯಾಕೋಬನ ಮನೆತನದವರು ಅನ್ಯಜನಾಂಗವನ್ನು ಬಿಟ್ಟ ಮೇಲೆ,


ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು. ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ.


ರಣಹದ್ದು ಹೇಗೆ ದೂರದಿಂದ ಹಾರಿಬರುವುದೋ ಹಾಗೆಯೇ ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.


ಯಾಕೋಬ ಮತ್ತು ಯೋಸೇಫರ ವಂಶದವರಾದ ನಿನ್ನ ಪ್ರಜೆಯನ್ನು, ಭುಜಬಲದಿಂದ ಬಿಡುಗಡೆಮಾಡಿದಿ. ಸೆಲಾ


ಹೌದು, ತೊದಲು ಮಾತಿನವರು, ಅನ್ಯಭಾಷಿಗಳು ಇವರ ಮೂಲಕವಾಗಿಯೇ ಯೆಹೋವನು ಈ ಜನರೊಂದಿಗೆ ಮಾತನಾಡುವನು.


ನೀವು ಅವರಿಗೆ, ‘ಯೆಹೋವನು ಐಗುಪ್ತ್ಯರನ್ನು ಸಂಹರಿಸಿದಾಗ ಐಗುಪ್ತ ದೇಶದಲ್ಲಿದ್ದ ಇಸ್ರಾಯೇಲರ ಮನೆಗಳಲ್ಲಿ ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮ ಮನೆಯವರನ್ನು ಉಳಿಸಿದ್ದರಿಂದ ನಾವು ಯೆಹೋವನ ಪಸ್ಕವೆಂಬ ಈ ಆಚರಣೆಯನ್ನು ನಡೆಸಲೇಬೇಕು ಎಂದು ಹೇಳಬೇಕು’” ಎಂದನು. ಆಗ ಜನರು ತಲೆಬಾಗಿ ಯೆಹೋವನಿಗೆ ನಮಸ್ಕರಿಸಿದರು.


ಆ ರಾತ್ರಿ ನಾನು ಐಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೊಚ್ಚಲಾಗಿರುವುದನ್ನೆಲ್ಲಾ ಸಂಹರಿಸುವೆನು. ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ನ್ಯಾಯತೀರಿಸುವೆನು. ನಾನೇ ಯೆಹೋವನು.


ಆಗ ಮೋಶೆ ಫರೋಹನಿಗೆ, “ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಾನು ಮಧ್ಯರಾತ್ರಿಯಲ್ಲಿ ಐಗುಪ್ತ್ಯರ ನಡುವೆ ಹಾದುಹೋಗುವೆನು.


ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ ಮತ್ತು ಉತ್ತಮ ಅಭಿಷೇಕ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡುವುದಿಲ್ಲ.


ನಾನು ನೇಮಿಸಿದ ಸಬ್ಬತ್ ದಿನಗಳನ್ನು ನನ್ನ ಪರಿಶುದ್ಧ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂದು ನೀವು ತಿಳಿದುಕೊಳ್ಳುವಂತೆ ಅವು ನಿಮಗೂ ಮತ್ತು ನನಗೂ ಗುರುತಾಗಿರುವುವು” ಎಂದು ಹೇಳಿದೆನು.


ಇದರಿಂದ ಅವು ಅವರ ಮುಂದಿನ ಪೀಳಿಗೆಗೆ ಗೊತ್ತಾಗಿ, ಅವರ ಮಕ್ಕಳು ಅವುಗಳನ್ನು ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳಿಗೆ ತಿಳಿಸುತ್ತಾ ಹೋಗುವರು.


ಇಸ್ರಾಯೇಲರು ಐಗುಪ್ತ ದೇಶದಿಂದ ಬಂದಾಗ ಮೋಶೆಯು ಇಸ್ರಾಯೇಲರಿಗೆ ತಿಳಿಸಿದ ಆಜ್ಞಾವಿಧಿನಿಯಮಗಳು ಇವೇ.


ಮಧ್ಯರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಐಗುಪ್ತ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಸಂಹಾರ ಮಾಡಿದನು. ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು