Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 83:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ದೇವರೇ, ಅವರನ್ನು ಸುಂಟರ ಗಾಳಿಯಲ್ಲಿ ಸುತ್ತಾಡುವ ಧೂಳಿನಂತೆಯೂ, ಹಾರಿಹೋಗುವ ಹೊಟ್ಟಿನಂತೆಯೂ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮಾಡಿವರನು ದೇವಾ, ಗಾಳಿಗೆ ತೂರುವ ಹೊಟ್ಟಿನಂತೆ I ಸುಂಟರಗಾಳಿಯಲಿ ಮೇಲೇಳುವ ದೂಳೀಪಟದಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನ್ನ ದೇವರೇ, ಅವರನ್ನು ಗಾಳಿಯಲ್ಲಿ ಸುತ್ತಿಯಾಡುವ ಧೂಳಿನಂತೆಯೂ ಹಾರಿಹೋಗುವ ಹೊಟ್ಟಿನಂತೆಯೂ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಗಾಳಿಗೆ ತೂರಿಹೋಗುವ ಮೊಟಕುಬೇರಿನ ಕಳೆಯಂತೆ ಅವರನ್ನು ಮಾಡು. ಗಾಳಿಯು ಹೊಟ್ಟನ್ನು ಚದರಿಸುವಂತೆ ಅವರನ್ನು ಚದರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನನ್ನ ದೇವರೇ, ಅವರನ್ನು ಚಕ್ರದ ಹಾಗೆಯೂ, ಗಾಳಿಯ ಮುಂದಿರುವ ಕಸದ ಹಾಗೆಯೂ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 83:13
15 ತಿಳಿವುಗಳ ಹೋಲಿಕೆ  

ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ; ಯೆಹೋವನ ದೂತನು ಅವರನ್ನು ಅಟ್ಟಿಬಿಡಲಿ.


ಅವರು ಗಾಳಿಗೆ ಸಿಕ್ಕಿಬಿದ್ದ ಹುಲ್ಲಿನಂತೆ ಆದದ್ದು ಎಷ್ಟು ಸಾರಿ? ಎಷ್ಟು ಸಾರಿ ಬಿರುಗಾಳಿಯು ಕೊಚ್ಚಿಕೊಂಡು ಹೋಗುವ ಹೊಟ್ಟಿನಂತಿದ್ದರು?


ಆದಕಾರಣ ಬಿರುಗಾಳಿಯು ಬಡಿದುಕೊಂಡು ಹೋಗುವ ಒಣ ಹುಲ್ಲನ್ನೋ ಎಂಬಂತೆ ನಾನು ಅವರನ್ನು ಚದರಿಸಿಬಿಡುವೆನು.


ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವುದು.


ಹಾರಿಹೋಗುವ ಎಲೆಯನ್ನು ನಡುಗಿಸುವಿಯಾ? ಒಣಗಿದ ಹೊಟ್ಟನ್ನು ಅಟ್ಟಿಬಿಡುವಿಯಾ?


ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.


ಮೂಡಣದಿಂದ ಒಬ್ಬನನ್ನು ಎಬ್ಬಿಸಿ, ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು, ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು, ಅವನನ್ನು ರಾಜರ ಮೇಲೆ ಆಳುವಂತೆ ಮಾಡಿ, ಅವರ ಕತ್ತಿಯನ್ನು ಧೂಳನ್ನಾಗಿಯೂ, ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಹುಲ್ಲನ್ನಾಗಿಯೂ ಅವರನ್ನು ಮಾಡಿದನು.


ದೇವರೇ, ನೀನೇ ನನ್ನ ಅರಸನು; ಯಾಕೋಬನಿಗೆ ಜಯವನ್ನು ಆಜ್ಞಾಪಿಸಿದಾತನು.


ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಏಕೆ ನನಗೆ ಸಹಾಯಮಾಡದೆಯೂ, ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ?


ನೀನು ಅತ್ಯಧಿಕ ಮಹತ್ವವುಳ್ಳವನಾಗಿ ನಿನ್ನೆದುರಿಗೆ ನಿಲ್ಲುವವರನ್ನು ಕೆಡವಿಬಿಟ್ಟಿರುವೆ. ನಿನ್ನ ಕೋಪಾಗ್ನಿಯು ಹೊರಟು ಅವರನ್ನು ಒಣಗಿದ ಹುಲ್ಲನ್ನೋ ಎಂಬಂತೆ ಸುಟ್ಟು ಭಸ್ಮಮಾಡಿ ಬಿಟ್ಟಿದೆ.


ನೀನು, “ಈ ಎರಡು ಜನಾಂಗಗಳೂ ಈ ಎರಡು ದೇಶಗಳೂ ನನ್ನ ವಶವಾಗುವವು” ಎಂದೂ ಹೇಳಿದ್ದರಿಂದ, ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ ಎಂದು ಅಂದುಕೊಂಡು, ಅಲ್ಲಿ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದರಿಂದ,


ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ಶತ್ರುವು ನಿಮ್ಮನ್ನು ನೋಡಿ, “ಆಹಾ!” ಎನ್ನುತ್ತಾ, ಈ ಪುರಾತನ ದುರ್ಗಗಳು ನಮ್ಮ ವಶವಾಗಿವೆ’” ಎಂದು ಹೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು