Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 84:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವದೇವರು ಸೂರ್ಯನೂ ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವ ದೇವರು ನಮ್ಮ ಸಂರಕ್ಷಕನೂ ಮಹಿಮಾ ಪೂರ್ಣನಾದ ರಾಜನೂ ಆಗಿದ್ದಾನೆ. ಯೆಹೋವನು ನಮಗೆ ದಯೆಯನ್ನೂ ಘನತೆಯನ್ನೂ ಅನುಗ್ರಹಿಸುವನು. ಆತನು ಎಲ್ಲಾ ಒಳ್ಳೆಯವುಗಳನ್ನು ತನ್ನ ಭಕ್ತರಿಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರು ಸೂರ್ಯನಂತೆ ಪ್ರಕಾಶಿಸುವವವರೂ ಗುರಾಣಿಯೂ ಆಗಿದ್ದಾರೆ. ಯೆಹೋವ ದೇವರು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾರೆ. ನಿಷ್ಕಳಂಕವಾಗಿ ನಡೆದುಕೊಳ್ಳುವವರಿಗೆ ಅವರು ಒಳ್ಳೆಯದನ್ನು ಮಾಡಲು ಹಿಂದೆಗೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 84:11
29 ತಿಳಿವುಗಳ ಹೋಲಿಕೆ  

ಆತನು ಯಥಾರ್ಥಚಿತ್ತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು. ದೋಷವಿಲ್ಲದೆ ನಡೆಯುವವರಿಗೆ ಗುರಾಣಿಯಾಗಿದ್ದು,


ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು.


ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; ನಮ್ಮ ದೇಶವು ತನ್ನ ಬೆಳೆ ಕೊಡುವುದು.


ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು, ವಕ್ರಮಾರ್ಗಿಯು ಬೈಲಿಗೆ ಬೀಳುವನು.


ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.


ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು” ಎಂದು ಹೇಳಿದನು.


ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿಯೂ; ನೀನು ನನ್ನ ಗೌರವಕ್ಕೆ ಆಧಾರನೂ, ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.


ಸನ್ಮಾರ್ಗಿಗೆ ಉದ್ಧಾರ, ವಕ್ರಮಾರ್ಗಿಗೆ ತಟ್ಟನೆ ಸೋಲು.


ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?


ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.


ಅವನು ಸಜ್ಜನನೂ, ನೀತಿವಂತನೂ, ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು.


ಯೇಸು ಕ್ರಿಸ್ತನ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.


ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.


ನನ್ನ ಆಶ್ರಯವೂ, ಗುರಾಣಿಯೂ ನೀನೇ, ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನೆ.


ವಕ್ರಮಾರ್ಗಿಯಾದ ಐಶ್ವರ್ಯವಂತನಿಗಿಂತ, ನಿರ್ದೋಷವಾಗಿ ನಡೆಯುವ ದರಿದ್ರನು ಶ್ರೇಷ್ಠನು.


ಯಾಕೋಬ ವಂಶವೇ, “ಯೆಹೋವನ ಆತ್ಮವು ತಾಳ್ಮೆಯಿಲ್ಲದ್ದೋ? ಇಂಥ ಕೃತ್ಯಗಳು ಆತನವೋ” ಎಂದು ಏಕೆ ಹೇಳುತ್ತೀ? ನನ್ನ ನುಡಿಗಳು ಸನ್ಮಾರ್ಗಿಗಳಿಗೆ ಹಿತಕರವಷ್ಟೇ.


ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, “ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?”


ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು; ನಿನ್ನ ಅಭಿಷಿಕ್ತನ ಮುಖವನ್ನು ಕಟಾಕ್ಷಿಸು.


ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.


ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.


ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. ಆತನೇ ಸರ್ವೋನ್ನತನು.


ಸ್ವದೇಶಸ್ಥರೊಂದಿಗೂ ಅವರಿಗೆ ಸ್ವತ್ತು ದೊರೆಯುವುದಿಲ್ಲ; ಯೆಹೋವನು ಅವರಿಗೆ ಹೇಳಿದಂತೆ ತಾನೇ ಅವರಿಗೆ ಸ್ವತ್ತಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು