Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 86:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕರ್ತನೇ, ನಿನ್ನ ಸೇವಕನ ಹೃದಯವನ್ನು ಆನಂದಗೊಳಿಸು; ನಿನ್ನನ್ನೇ ನಿರೀಕ್ಷಿಸುತ್ತಿರುವೆನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ದಾಸನಿಗೆ ನೀಡು ಮನದಾನಂದವನು I ನಿನಗೆ ಅಭಿಮುಖವಾಗಿಸಿರುವೆ ಎನ್ನಾತ್ಮವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕರ್ತನೇ, ನಿನ್ನ ಸೇವಕನ ಹೃದಯವನ್ನು ಆನಂದಗೊಳಿಸು; ನಿನ್ನನ್ನೇ ನಿರೀಕ್ಷಿಸುತ್ತಿರುವೆನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನೇ, ನನ್ನ ಜೀವಿತವನ್ನು ನಿನ್ನ ಕೈಗಳಲ್ಲಿಟ್ಟಿದ್ದೇನೆ. ನಿನ್ನ ಸೇವಕನಾದ ನನ್ನನ್ನು ಸಂತೋಷಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಮ್ಮ ಸೇವಕನ ಪ್ರಾಣವನ್ನು ಸಂತೋಷಪಡಿಸಿರಿ. ಯೆಹೋವ ದೇವರೇ, ನಿಮ್ಮಲ್ಲೇ ನನ್ನ ಪ್ರಾಣವನ್ನು ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 86:4
7 ತಿಳಿವುಗಳ ಹೋಲಿಕೆ  

ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ; ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ. ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು; ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.


ಯೆಹೋವನೇ, ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.


ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು.


ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.


ಜನರೇ, ಯಾವಾಗಲೂ ಆತನನ್ನೇ ನಂಬಿ, ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; ದೇವರು ನಮ್ಮ ಆಶ್ರಯವು. ಸೆಲಾ


ನಾನು ಮಾಡುವ ಸೃಷ್ಟಿಕಾರ್ಯದಲ್ಲಿಯೇ ಹರ್ಷಗೊಂಡು ಸದಾ ಉಲ್ಲಾಸಿಸಿರಿ; ಆಹಾ, ನಾನು ಯೆರೂಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಯೂ, ಅದರ ಜನರನ್ನು ಹರ್ಷಭರಿತರನ್ನಾಗಿಯೂ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು