Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 87:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ, “ಪ್ರತಿಯೊಂದರ ವಿಷಯ ಇದು ಅಲ್ಲಿಯೇ ಹುಟ್ಟಿದ್ದು” ಎಂದು ಬರೆಯುವನು. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪ್ರಭು ಪಟ್ಟಿಮಾಡುವಾಗ ಸಕಲ ಜಾತಿಜನಾಂಗಗಳನು I ನಿನ್ನ ಜನಾಂಗವೆಂದೇ ಪರಿಗಣಿಸುವನು ಪ್ರತಿಯೊಂದನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ [ಪ್ರತಿಯೊಂದರ ವಿಷಯ] - ಇದು ಅಲ್ಲಿಯೇ ಹುಟ್ಟಿದ್ದು ಎಂದು ಬರೆಯುವನು. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ತನ್ನ ಜನರೆಲ್ಲರ ಬಗ್ಗೆ ಪಟ್ಟಿಮಾಡಿದ್ದಾನೆ. ಪ್ರತಿಯೊಬ್ಬನ ಹುಟ್ಟಿದ ಸ್ಥಳವು ದೇವರಿಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಜನಾಂಗಗಳ ಗ್ರಂಥದಲ್ಲಿ ಬರೆಯುವಾಗ, “ಚೀಯೋನಿನಲ್ಲಿ ಇವನು ಹುಟ್ಟಿದನು,” ಎಂದು ಬರೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 87:6
11 ತಿಳಿವುಗಳ ಹೋಲಿಕೆ  

ಆಗ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಮತ್ತು ಯೆರೂಸಲೇಮಿನಲ್ಲಿ ವಾಸಿಸುವರೆಂದು ದಾಖಲೆಗೊಂಡ ಪ್ರತಿಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡುವನು.


ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು.


ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.


ನನ್ನ ನಿಜವಾದ ಜೊತೆ ಸೇವಕನೇ, ಆ ಸ್ತ್ರೀಯರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಜೊತೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿವೆ.


‘ಮಿಥ್ಯ ದರ್ಶನಹೊಂದಿ, ಸುಳ್ಳು ಕಣಿ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರೀಸಭೆಯಲ್ಲಿ ಸೇರಬಾರದು, ಇಸ್ರಾಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರುಗಳು ಲಿಖಿತವಾಗಬಾರದು, ಅವರು ಇಸ್ರಾಯೇಲ್ ದೇಶದಲ್ಲಿ ಪ್ರವೇಶಿಸಲೂಬಾರದು; ನಾನೇ ಕರ್ತನಾದ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.


ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು, ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.


“ಇಸ್ರಾಯೇಲೇ, ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಆರಿಸಿಕೊಂಡು, ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತ ಜನಾಂಗಗಳ ಬಾಧ್ಯತೆಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ‘ತಂದೆ’ ಎನ್ನುವಿ ಅಂದುಕೊಂಡೆನು.


ಆತನನ್ನು ಸೇವಿಸುವವರ ಸಂತಾನದವರು ಯೆಹೋವನ ಸಂತಾನದವರೆಂದು ಎಣಿಸಲ್ಪಡವರು.


ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು