Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 88:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿನ್ನ ಕೋಪಜ್ವಾಲೆಯು ನನ್ನನ್ನು ಕವಿದಿದೆ; ನಿನ್ನಿಂದುಂಟಾದ ದಿಗಿಲಿನಿಂದ ಹಾಳಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನನ್ನನು ಆವರಿಸಿಕೊಂಡಿದೆ ನಿನ್ನ ಕಡುಕೋಪಾಗ್ನಿಯು I ನನ್ನ ಹಾಳುಮಾಡುತ್ತಿದೆ ನಿನ್ನ ಭಯಂಕರ ದಾಳಿಯು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿನ್ನ ಕೋಪಜ್ವಾಲೆಯು ನನ್ನನ್ನು ಕವಿದದೆ. ನಿನ್ನಿಂದುಂಟಾದ ದಿಗಿಲಿನಿಂದ ಹಾಳಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೀನು ನನ್ನ ಮೇಲೆ ಕೋಪಗೊಂಡಿದ್ದರಿಂದ ನಿನ್ನ ದಂಡನೆಯು ನನ್ನನ್ನು ಕೊಲ್ಲುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನನ್ನ ಮೇಲೆ ನಿಮ್ಮ ಬೇಸರವು ಆವರಿಸಿದೆ. ನಿಮ್ಮ ದಂಡನೆಗಳು ನನ್ನನ್ನು ಬಾಧಿಸಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 88:16
13 ತಿಳಿವುಗಳ ಹೋಲಿಕೆ  

ಏಕೆಂದರೆ ಅವರ ಕೋಪಾಗ್ನಿಯು ಕಾಣಿಸುವ ಮಹಾ ದಿನವು ಬಂದಿದೆ, ಅದರ ಮುಂದೆ ನಿಲ್ಲುವುದಕ್ಕೆ ಯಾರಿಂದಾದೀತು?” ಎಂದು ಹೇಳಿದರು.


ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.


ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?


ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.


ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ತೆಗೆದುಹಾಕಲ್ಪಟ್ಟಿದ್ದಾನೆ. ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು?


ಇದಕ್ಕೆಲ್ಲಾ ನಿನ್ನ ಕೋಪ, ರೌದ್ರಗಳೇ ಕಾರಣ, ನೀನು ನನ್ನನ್ನು ಎತ್ತಿ ಒಗೆದುಬಿಟ್ಟಿದ್ದಿಯಲ್ಲಾ!


ನಿನ್ನ ಕೋಪದ ಬಲವನ್ನೂ, ಭಯಭಕ್ತಿಗೆ ಕಾರಣವಾಗಿರತಕ್ಕ ನಿನ್ನ ರೌದ್ರವನ್ನೂ ಗ್ರಹಿಸುವವರಾರು?


ನಿನ್ನ ಕೋಪದಿಂದ ನಾವು ಇಲ್ಲವಾದೆವು; ನಿನ್ನ ರೌದ್ರದಿಂದ ತಲ್ಲಣಗೊಂಡೆವು.


ಯೆಹೋವನೇ, ಇನ್ನೆಷ್ಟರವರೆಗೆ ಮರೆಯಾಗಿರುವಿ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಸದಾ ಉರಿಯುತ್ತಿರಬೇಕೋ?


ಅಪಾಯಗಳು ನನ್ನ ಮೇಲೆ ತಿರುಗಿಬಿದ್ದು; ನನ್ನ ಮಾನವನ್ನು ಗಾಳಿಯಂತೆ ಹೊಡೆದುಕೊಂಡು ಹೋಗುತ್ತಿವೆ; ನನ್ನ ಕ್ಷೇಮವು ಮೇಘದ ಹಾಗೆ ಹರಿದು ಹೋಯಿತು.


ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ. ಆಯಿನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು