Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 88:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸತ್ತವನ ಹಾಗೆ ನನ್ನನ್ನು ಹೊರಗೆ ಹಾಕಿದ್ದಾರೆ; ಹತನಾದವನಂತೆ ಸಮಾಧಿಯಲ್ಲಿ ಬಿದ್ದಿದ್ದೇನೆ. ಹತರಾದವರು ನಿನ್ನ ಪರಿಪಾಲನೆ ಇಲ್ಲದವರು; ಅಂಥವರನ್ನು ನೀನು ನೆನಪು ಮಾಡಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇರುವೆ ಹತನಾಗಿ ಸಮಾಧಿ ಸೇರಿದವನಂತೆ I ಮೃತರಾದವರೊಳು ನಿರಾಕೃತನಾದವನಂತೆ II ನಿನ್ನಾ ನೆನಕೆಯಿಂದ ಅಳಿದು ಹೋದವನಂತೆ I ನಿನ್ನಾ ಪಾಲನೆಯಿಂದ ದೂರವಾದವನಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸತ್ತವನ ಹಾಗೆ ನನ್ನನ್ನು ಹೊರಗೆ ಹಾಕಿದ್ದಾರೆ; ಸಮಾಧಿಯಲ್ಲಿ ಬಿದ್ದಿರುವ ಹತರಂತಿದ್ದೇನೆ. ಅವರು ನಿನ್ನ ಪರಿಪಾಲನೆಗೆ ಹೊರಗಾದವರು; ಅಂಥವರನ್ನು ನೀನು ಜ್ಞಾಪಿಸುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸತ್ತವರ ಮಧ್ಯದಲ್ಲಿ ನನಗಾಗಿ ಹುಡುಕು. ಸಮಾಧಿಯಲ್ಲಿ ಬಿದ್ದಿರುವ ಶವದಂತಾಗಿದ್ದೇನೆ, ನೀನು ಮರೆತುಬಿಟ್ಟ ಸತ್ತ ಜನರಂತೆ ಆಗಿದ್ದೇನೆ. ನಿನ್ನಿಂದಲೂ ನಿನ್ನ ಪರಿಪಾಲನೆಯಿಂದಲೂ ದೂರವಾದವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹತರಾದವರು ಸಮಾಧಿಯಲ್ಲಿ ಮಲಗಿದಂತೆ ನಾನೂ ಸತ್ತವರೊಂದಿಗೆ ಸೇರಿರುತ್ತೇನೆ. ಅವರನ್ನು ನೀನೆಂದೂ ಜ್ಞಾಪಿಸಿಕೊಳ್ಳುವುದಿಲ್ಲ. ನಿಮ್ಮ ಪರಿಪಾಲನೆಯಿಂದ ದೂರವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 88:5
15 ತಿಳಿವುಗಳ ಹೋಲಿಕೆ  

ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ತೆಗೆದುಹಾಕಲ್ಪಟ್ಟಿದ್ದಾನೆ. ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು?


ನಾನಂತೂ ಭಯಭ್ರಾಂತನಾಗಿ, “ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನು” ಎಂದು ಅಂದುಕೊಂಡೆನು; ಆದರೂ ನಾನು ಮೊರೆಯಿಡಲು ನೀನು ಕೇಳಿದಿ.


ನಾವು ದೀನಾವಸ್ಥೆಯಲ್ಲಿ ಇದ್ದಾಗ ನಮ್ಮನ್ನು ನೆನಪುಮಾಡಿಕೊಂಡನು, ಆತನ ಪ್ರೀತಿಯು ಶಾಶ್ವತವಾದದ್ದು.


ನಿನ್ನ ಕೋಪಜ್ವಾಲೆಯು ನನ್ನನ್ನು ಕವಿದಿದೆ; ನಿನ್ನಿಂದುಂಟಾದ ದಿಗಿಲಿನಿಂದ ಹಾಳಾದೆನು.


ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು; ಒಡೆದ ಬೋಕಿಯಂತಿದ್ದೇನೆ.


ಆತನು ಹಾದುಹೋದರೂ, ಸೆರೆಯಲ್ಲಿಟ್ಟರೂ, ನ್ಯಾಯವಿಚಾರಣೆಗೆ ಕರೆದರೂ ಆತನನ್ನು ತಳ್ಳಿಬಿಡುವವರು ಯಾರು?


ನಾನು ನಾಶವಾಗುವುದು ದೇವರಿಗೆ ಮೆಚ್ಚಿಕೆಯಾಗುವುದಾದರೆ, ತನ್ನ ಕೈ ಚಾಚಿ ನನ್ನನ್ನು ಸಂಹರಿಸಿದರೆ ಒಳ್ಳೆಯದು.


ದೇವರು ಆ ಪ್ರದೇಶದ ಪಟ್ಟಣಗಳನ್ನು ನಾಶಮಾಡಿದಾಗ, ಅಬ್ರಹಾಮನನ್ನು ನೆನಪುಮಾಡಿಕೊಂಡನು. ಲೋಟನು ವಾಸವಾಗಿದ್ದ ಪಟ್ಟಣಗಳನ್ನು ಹಾಳುಮಾಡಿ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿ ಪಾರುಮಾಡಿದನು.


ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.


“ನನ್ನ ಉಸಿರು ಕಟ್ಟುತ್ತಿದೆ, ನನ್ನ ಆಯಷ್ಕಾಲವು ಮುಗಿದಿವೆ, ಗೋರಿಯು ನನಗಾಗಿ ಕಾದಿದೆ.


ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; ಕೇಳದೆ ಇರಬೇಡ. ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ.


ಆಮೇಲೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಮನೆತನಗಳೇ; ಇಗೋ, ಆ ಮನೆತನದವರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಸಂಪೂರ್ಣವಾಗಿ ನಾಶವಾದೆವು’” ಅಂದುಕೊಳ್ಳುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು