ಕೀರ್ತನೆಗಳು 89:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ, “ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹಿಂದೊಮ್ಮೆ ನೀ ದರ್ಶನವಿತ್ತು ಇಂತೆಂದೆ ನಿನ್ನ ಭಕ್ತರಿಗೆ: I “ರಕ್ಷಾಬಲವನು ಅನುಗ್ರಹಿಸಿರುವೆ ಶೂರವೀರನೋರ್ವನಿಗೆ I ಪ್ರಜೆಗಳಲೊರ್ವ ಯುವಕನನು ಏರಿಸಿರುವೆ ಉನ್ನತಸ್ಥಾನಕೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನಂದರೆ - ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನೀನು ನಿನ್ನ ಸದ್ಭಕ್ತರೊಂದಿಗೆ ದರ್ಶನದಲ್ಲಿ ಮಾತಾಡಿದ್ದೇನೆಂದರೆ: “ಯುದ್ಧವೀರನೊಬ್ಬನಿಗೆ ಬಲವನ್ನು ಅನುಗ್ರಹಿಸಿದೆ. ಜನಸಮೂಹದಿಂದ ಒಬ್ಬ ಯೌವನಸ್ಥನನ್ನು ಆರಿಸಿಕೊಂಡು ಗಣ್ಯವ್ಯಕ್ತಿಯನ್ನಾಗಿ ಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆ ಕಾಲದಲ್ಲಿ ನೀವು ದರ್ಶನದಲ್ಲಿ ನಿಮ್ಮ ಭಕ್ತರಿಗೆ ಹೇಳಿದ್ದೇನೆಂದರೆ: “ಒಬ್ಬ ಶೂರನಿಗೆ ನಾನು ಬಲವನ್ನು ಅನುಗ್ರಹಿಸಿದ್ದೇನೆ. ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತ ಸ್ಥಾನದಲ್ಲಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |
ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.