Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸಮುದ್ರದಿಂದ ನದಿಗಳವರೆಗೂ ಅವನ ಹಸ್ತಕ್ಕೆ ಅಧಿಕಾರವನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ತೊರೆನದಿಗಳಿಂದ ಸಾಗರದವರೆಗೆ I ಅಧಿಕಾರ ನೀಡುವೆ ಅವನ ಕೈಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಸಮುದ್ರದಿಂದ ನದಿಗಳವರೆಗೂ ಅವನ ಹಸ್ತಕ್ಕೆ ಅಧಿಕಾರವನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಾನು ಆರಿಸಿಕೊಂಡ ರಾಜನನ್ನು ಸಮುದ್ರದ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ಅವನು ನದಿಗಳನ್ನು ಹತೋಟಿಯಲ್ಲಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಸಮುದ್ರ ಹಾಗು ನದಿಗಳ ಮೇಲೆ ಅವನ ಬಲಗೈಯನ್ನೂ ಇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:25
7 ತಿಳಿವುಗಳ ಹೋಲಿಕೆ  

ಅದರ ಕೊಂಬೆಗಳು ಸಮುದ್ರದವರೆಗೂ, ಅದರ ಚಿಗುರುಗಳು ಮಹಾನದಿಯವರೆಗೂ ಹರಡಿಕೊಂಡವು.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು; ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು.


ಸೊಲೊಮೋನನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.


“ಯೆಹೋವನನ್ನು ವಿರೋಧಿಸುವವರು ಮುರಿಯಲ್ಪಡುತ್ತಾರೆ; ಆತನು ಆಕಾಶದಿಂದ ಅವರ ಮೇಲೆ ಗರ್ಜಿಸುತ್ತಾನೆ. ಯೆಹೋವನು ಭೂಮಿಯ ಕಟ್ಟಕಡೆಯಲ್ಲಿರುವವರಿಗೂ ನ್ಯಾಯತೀರಿಸುವನು. ತಾನು ನೇಮಿಸಿದ ಅರಸನಿಗೆ ಬಲವನ್ನು ಅನುಗ್ರಹಿಸುವನು; ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು.”


ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇಮಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು