Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನಾಗಿಯೂ, ಭೂರಾಜರಲ್ಲಿ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಮಾಡುವೆನವನನು ಜೇಷ್ಠಪುತ್ರನನ್ನಾಗಿ I ಭೂರಾಜರುಗಳೊಳು ಅತ್ಯುನ್ನತನನ್ನಾಗಿ I

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನೂ ಭೂರಾಜರಲ್ಲಿ ಉನ್ನತನನ್ನೂ ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಾನು ಅವನನ್ನು ನನ್ನ ಚೊಚ್ಚಲು ಮಗನನ್ನಾಗಿ ಮಾಡುವೆನು. ಅವನು ಭೂಲೋಕದಲ್ಲಿ ಮಹಾರಾಜನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಾನು ಆತನನ್ನು ನನ್ನ ಚೊಚ್ಚಲ ಮಗನನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:27
17 ತಿಳಿವುಗಳ ಹೋಲಿಕೆ  

ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.


ಕ್ರಿಸ್ತನು ಅದೃಶ್ಯನಾದ ದೇವರ ಪ್ರತಿರೂಪನೂ, ಸೃಷ್ಟಿಗೆಲ್ಲಾ ಜೇಷ್ಠಪುತ್ರನೂ ಆಗಿದ್ದಾನೆ.


ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ ಹೆಸರು ಬರೆದಿದೆ.


ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.


ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಆತನನ್ನು ಸೇವಿಸಲಿ.


ತನ್ನ ತೊಟ್ಟಿಗಳಿಂದ ನೀರು ಹರಿಯುತ್ತಲೇ ಇದೆ, ಅವರ ಬಿತ್ತನೆಗೆ ಬೇಕಾದಷ್ಟು ನೀರು ಇರುವುದು. ಅವರ ಅರಸನು ಅಗಾಗ್ ರಾಜನಿಗಿಂತಲೂ ದೊಡ್ಡವನಾಗಿರುವನು. ಅವರ ರಾಜ್ಯವು ಅಭಿವೃದ್ಧಿಯಲ್ಲಿರುವುದು.


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ, ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ, “ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.”


ಆಗ ನೀನು ಫರೋಹನಿಗೆ, ‘ಇಸ್ರಾಯೇಲನು ನನ್ನ ಮಗನು, ನನಗೆ ಚೊಚ್ಚಲಮಗನು.


ಅದರ ಬೆಳಕಿನಿಂದ ಜನಾಂಗಗಳವರು ನಡೆದಾಡುವರು. ಭೂರಾಜರು ತಮ್ಮ ವೈಭವವನ್ನು ಅದರೊಳಗೆ ತರುವರು.


ಇದಲ್ಲದೆ ನಿನಗಿಂತ ಮೊದಲು ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ, ನಿನ್ನ ತರುವಾಯ ಯಾರಿಗೂ ಇರದಂಥ ಘನ, ಧನ, ಐಶ್ವರ್ಯಗಳನ್ನೂ ಅನುಗ್ರಹಿಸುವೆನು” ಎಂದನು.


ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.


ನಾನು ಅವನಿಗೆ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ಅವನು ತಪ್ಪು ಮಾಡಿದರೆ ತಂದೆ ಮಗನಿಗೆ ಬೆತ್ತದಿಂದ ಶಿಕ್ಷೆಯನ್ನು ಕೊಡುವೆನು ಮತ್ತು ನರಪುತ್ರರಂತೆ ಅವನನ್ನು ದಂಡಿಸುವೆನು.


ಯೆಹೋವನು ಚೈತನ್ಯಸ್ವರೂಪನು. ನನ್ನ ಶರಣನಿಗೆ ಸ್ತೋತ್ರ. ನನ್ನ ಆಶ್ರಯಗಿರಿಯಾಗಿರುವ ದೇವರಿಗೆ ಕೊಂಡಾಟ.


ನಾನು ಯಾವಾಗಲೂ ಮರೆಹೋಗುವ ಆಶ್ರಯಗಿರಿಯಾಗಿರು; ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ. ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು