Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವನ ಸಂತಾನದವರು ನನ್ನ ಧರ್ಮಶಾಸ್ತ್ರವನ್ನು ಬಿಟ್ಟು, ನನ್ನ ಆಜ್ಞೆಗಳಲ್ಲಿ ನಡೆಯದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅವನ ಕುವರರು ತೊರೆದರಾದರೆ ನನ್ನ ಧರ್ಮಶಾಸ್ತ್ರವನು I ಉಲ್ಲಂಘಿಸಿ ನಡೆದರಾದರೆ ನನ್ನ ಆಜ್ಞಾವಿಧಿಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವನ ಸಂತಾನದವರು ನನ್ನ ಧರ್ಮಶಾಸ್ತ್ರವನ್ನು ಬಿಟ್ಟು ನನ್ನ ಆಜ್ಞೆಗಳಲ್ಲಿ ನಡೆಯದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅವನ ಸಂತತಿಯವರು ನನ್ನ ಧರ್ಮಶಾಸ್ತ್ರವನ್ನು ತೊರೆದುಬಿಟ್ಟು ನನ್ನ ಆಜ್ಞೆಗಳಿಗೆ ಅವಿಧೇಯರಾದರೆ ಅವರನ್ನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ಆತನ ಸಂತತಿಯು ನನ್ನ ನಿಯಮವನ್ನು ಬಿಟ್ಟು, ನನ್ನ ಶಾಸನಗಳನ್ನು ಅನುಸರಿಸಿ ನಡೆಯದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:30
15 ತಿಳಿವುಗಳ ಹೋಲಿಕೆ  

ನಾನು ಅವನಿಗೆ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ಅವನು ತಪ್ಪು ಮಾಡಿದರೆ ತಂದೆ ಮಗನಿಗೆ ಬೆತ್ತದಿಂದ ಶಿಕ್ಷೆಯನ್ನು ಕೊಡುವೆನು ಮತ್ತು ನರಪುತ್ರರಂತೆ ಅವನನ್ನು ದಂಡಿಸುವೆನು.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, ಕೈಕೊಳ್ಳುವವರು ಅವರನ್ನು ಎದುರಿಸುವರು.


ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ, ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವುದಾದರೆ, ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕುಳಿತುಕೊಳ್ಳುವರು.”


ನಿನ್ನ ಧರ್ಮಶಾಸ್ತ್ರ ಭ್ರಷ್ಟರಾದ ದುಷ್ಟರಿಗಾಗಿ, ಕೋಪಗೊಂಡಿದ್ದೇನೆ.


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ನಾನು ನಿಮ್ಮ ದೇವರಾದ ಯೆಹೋವನು; ನೀವು ನನ್ನ ಆಜ್ಞೆಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನಡೆಯಿರಿ.


ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನು ಕೇಳದೆ, ಲಾಭಕ್ಕೆ ಹಣಕೊಡದೆ, ನನ್ನ ವಿಧಿಗಳನ್ನು ಆಚರಿಸಿ, ನನ್ನ ನಿಯಮಗಳನ್ನು ಅನುಸರಿಸಿದರೆ ತನ್ನ ತಂದೆಯ ಅಧರ್ಮದ ನಿಮಿತ್ತ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.


ನಾನು ನಿಮಗೆ ಸುಬೋಧೆಯನ್ನು ಮಾಡುವೆನು, ನನ್ನ ಉಪದೇಶವನ್ನು ಬಿಡಬೇಡಿರಿ.


ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು, ಸತ್ಯಪರನಾಗಿಯೇ ನಡೆದರೆ ಇಂಥವನು ಸದ್ಧರ್ಮಿಯಾಗಿರುವುದರಿಂದ ಖಂಡಿತವಾಗಿ ಜೀವಿಸುವನು” ಇದು ಕರ್ತನಾದ ಯೆಹೋವನ ನುಡಿ.


ಹೀಗೆ ಮಾಡಿದರೆ ಭೂಮಿಯ ಮೇಲೆ ಆಕಾಶವು ಎಷ್ಟು ಕಾಲ ಇರುವುದೋ, ಅಷ್ಟು ಕಾಲದ ವರೆಗೆ ನೀವೂ ಮತ್ತು ನಿಮ್ಮ ಸಂತತಿಯವರೂ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ಆ ದೇಶದಲ್ಲಿ ಬಾಳುವಿರಿ.


ಯೆಹೋವನೇ, ಗಗನವು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವುದು; ನಿನ್ನ ಸತ್ಯವನ್ನು ಪರಿಶುದ್ಧರ ಸಭೆಯಲ್ಲಿ ಕೀರ್ತಿಸುವೆನು.


ಯೆಹೋವನು ಇಂತೆನ್ನುತ್ತಾನೆ, “ದಾವೀದನ ವಂಶವು ನಿಂತು ಹೋಗದೆ ಆ ಸಂತಾನದವರು ಇಸ್ರಾಯೇಲರ ಸಿಂಹಾಸನದಲ್ಲಿ ತಪ್ಪದೆ ಆಸೀನರಾಗುತ್ತಾ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು