Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆಗ ನಾನು ಅವರ ದ್ರೋಹಕ್ಕಾಗಿ ಅವರನ್ನು ಬೆತ್ತದಿಂದ ಹೊಡೆಯುವೆನು; ಅವರ ಅಪರಾಧಕ್ಕಾಗಿ ಪೆಟ್ಟುಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ದಂಡಿಸುವೆನವರ ದ್ರೋಹವನು ದಂಡದಿಂದ I ಶಿಕ್ಷಿಸುವೆನವರ ಅಪರಾಧವನು ಚಾಟಿಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನಾನು ಅವರ ದ್ರೋಹಕ್ಕಾಗಿ ಅವರನ್ನು ಬೆತ್ತದಿಂದ ಹೊಡೆಯುವೆನು; ಅವರ ಅಪರಾಧಕ್ಕಾಗಿ ಪೆಟ್ಟುಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನಾನು ಅವರನ್ನು ಅವರ ದ್ರೋಹಕ್ಕಾಗಿ ಬಹು ಕಠಿಣವಾಗಿ ಶಿಕ್ಷಿಸುವೆನು. ಅವರ ಅಪರಾಧಕ್ಕಾಗಿ ಬೆತ್ತದಿಂದ ಹೊಡೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಕೋಲಿನಿಂದ ಅವರ ದ್ರೋಹವನ್ನೂ ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:32
13 ತಿಳಿವುಗಳ ಹೋಲಿಕೆ  

ನಾನು ಅವನಿಗೆ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ಅವನು ತಪ್ಪು ಮಾಡಿದರೆ ತಂದೆ ಮಗನಿಗೆ ಬೆತ್ತದಿಂದ ಶಿಕ್ಷೆಯನ್ನು ಕೊಡುವೆನು ಮತ್ತು ನರಪುತ್ರರಂತೆ ಅವನನ್ನು ದಂಡಿಸುವೆನು.


ಭೂಮಿಯ ಸಕಲ ಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಆರಿಸಿಕೊಂಡಿದ್ದೇನೆ. ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನೀವು ಅನುಭವಿಸುವಂತೆ ಮಾಡುವೆನು.


ದಾವೀದನ ಸಂತಾನದವರನ್ನು ಅವರ ಪಾಪದ ನಿಮಿತ್ತ ತಲೆತಗ್ಗಿಸುವಂತೆ ಮಾಡಿ ಕುಗ್ಗಿಸುವೆನು. ಆದರೆ ಸದಾಕಾಲಕ್ಕೂ ಅದು ಮುಂದುವರಿಯುವುದಿಲ್ಲ” ಎಂದು ಹೇಳಿದನು.


ಯೆಹೋವನು ಎದೋಮ್ಯನೂ, ರಾಜಪುತ್ರನೂ ಆದ ಹದದನನ್ನು ಸೊಲೊಮೋನನಿಗೆ ವಿರುದ್ಧವಾಗಿ ಎಬ್ಬಿಸಿದನು.


ನನ್ನ ಮೇಲೆ ಎತ್ತಿರುವ ತನ್ನ ದಂಡವನ್ನು ಆತನು ತೆಗೆದುಹಾಕಲಿ, ಆತನಿಂದಾಗುವ ದಿಗಿಲು ನನ್ನನ್ನು ಹೆದರಿಸದಿರಲಿ.


ಅವನು ಯಾರೊಬ್ಬಾಮನಿಗೆ, “ನೀನು ಇವುಗಳಲ್ಲಿ ಹತ್ತು ತುಂಡುಗಳನ್ನು ತೆಗೆದುಕೋ. ಇಸ್ರಾಯೇಲ್ ದೇವರಾದ ಯೆಹೋವನು ರಾಜ್ಯವನ್ನು ಸೊಲೊಮೋನನಿಂದ ಕಿತ್ತುಕೊಂಡು,


ಅವನ ತಂದೆಯಾದ ದಾವೀದನು ಪೂರ್ಣಮನಸ್ಸಿನಿಂದ ಯೆಹೋವನನ್ನು ಸೇವಿಸಿದಂತೆ ಅವನು ಸೇವಿಸಲಿಲ್ಲ.


ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡೆಸಿಕೊಂಡು ಹೋಗು. ನೋಡು, ನನ್ನ ದೂತನು ನಿನ್ನ ಮುಂದೆ ನಡೆದು ಮುನ್ನಡೆಸುವನು, ಆದರೂ ನನ್ನ ನ್ಯಾಯತೀರ್ಪಿನ ದಿನದಲ್ಲಿ ನಾನು ಅವರ ಪಾಪಕ್ಕೆ ತಕ್ಕಂತೆ ಅವರನ್ನು ದಂಡಿಸುವೆನು.”


ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳದೆ, ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಕೈಮುಗಿಯುವುದಾದರೆ


ನಾವು ನಿನಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು; ನೀನು ನಿನ್ನ ಸೇವಕನಾದ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿನ್ಯಾಯಗಳನ್ನು ನಾವು ಕೈಗೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು