Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನನ್ನ ಒಡಂಬಡಿಕೆಯನ್ನು ಭಂಗಪಡಿಸುವುದಿಲ್ಲ; ನನ್ನ ಮಾತನ್ನು ಬದಲಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಭಂಗಪಡಿಸೆನು ಎನ್ನ ಒಡಂಬಡಿಕೆಯನು I ಮೀರೆನು ನಾನವನಿಗೆ ಕೊಟ್ಟ ಮಾತನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನನ್ನ ಒಡಂಬಡಿಕೆಯನ್ನು ಭಂಗಪಡಿಸುವದಿಲ್ಲ; ನನ್ನ ಮಾತನ್ನು ಬದಲಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನಾನು ದಾವೀದನೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಹಾಕುವುದೂ ಇಲ್ಲ, ಬದಲಾಯಿಸುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನನ್ನ ಒಡಂಬಡಿಕೆಯನ್ನು ನಾನು ಮುರಿಯೆನು. ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:34
11 ತಿಳಿವುಗಳ ಹೋಲಿಕೆ  

ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?


ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.


“ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ. ಆದುದರಿಂದ ಯಾಕೋಬ ಸಂತತಿಯವರೇ ನೀವು ಅಳಿಯದೆ ಉಳಿದಿದ್ದೀರಿ.”


ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.


ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ. ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು.


ಆದರೂ ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವುದಿಲ್ಲ, ತಾತ್ಸಾರಮಾಡುವುದಿಲ್ಲ; ನಾನು ಅವರಿಗೆ ಮಾಡಿದ ಒಡಂಬಡಿಕೆಯನ್ನು ಮೀರುವುದಿಲ್ಲ, ಅವರನ್ನು ಇಲ್ಲದಂತೆ ಮಾಡುವುದಿಲ್ಲ; ನಾನು ಅವರ ದೇವರಾದ ಯೆಹೋವನಲ್ಲವೇ.


“ಯೆಹೋವನು ಇಂತೆನ್ನುತ್ತಾನೆ, ನೀವು ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ ಹಗಲನ್ನು, ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಬಹುದಾದರೆ,


ಆದರೂ ನನ್ನ ನಿಷ್ಠೆಯ ಒಡಂಬಡಿಕೆಯು ಸೌಲನನ್ನು ಬಿಟ್ಟು ಹೋದ ಹಾಗೆ ಅವನನ್ನು ಬಿಟ್ಟು ಹೋಗುವುದಿಲ್ಲ. ನಾನು ಸೌಲನನ್ನು ನಿನ್ನೆದುರಿನಿಂದ ಹೊರಡಿಸಿಬಿಟ್ಟೆನಲ್ಲಾ


ದಾವೀದನ ಸಂತಾನದವರನ್ನು ಅವರ ಪಾಪದ ನಿಮಿತ್ತ ತಲೆತಗ್ಗಿಸುವಂತೆ ಮಾಡಿ ಕುಗ್ಗಿಸುವೆನು. ಆದರೆ ಸದಾಕಾಲಕ್ಕೂ ಅದು ಮುಂದುವರಿಯುವುದಿಲ್ಲ” ಎಂದು ಹೇಳಿದನು.


ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ನನ್ನ ಕೃಪೆಯನ್ನು ನಿನಗಿಂತ ಮುಂಚೆ ಇದ್ದವನಿಂದ ತೆಗೆದು ಹಾಕಿದ ಹಾಗೆ ಅವನಿಂದ ತೆಗೆಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು