Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅದೇನೆಂದರೆ, ಅವನ ಸಂತತಿಯು ಶಾಶ್ವತವಾಗಿ ಇರುವುದು; ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ರವಿಯಂತಿರುವುದು ಎನ್ನ ಮುಂದೆ ಅವನ ಗಾದಿ I ಚಿರ ಶಾಶ್ವತವಾಗಿರುವುದು ಅವನ ಸಂತತಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅವನ ಸಂತತಿಯು ಶಾಶ್ವತವಾಗಿ ಇರುವದು; ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ದಾವೀದನ ಕುಟುಂಬವು ಶಾಶ್ವತವಾಗಿರುವುದು. ಅವನ ರಾಜ್ಯವು ಸೂರ್ಯನು ಇರುವವರೆಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆತನ ಸಂತತಿಯು ಯುಗಯುಗಕ್ಕೂ ಇರುವುದು. ಆತನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:36
14 ತಿಳಿವುಗಳ ಹೋಲಿಕೆ  

ಸೂರ್ಯನು, ಚಂದ್ರನು ಇರುವವರೆಗೂ, ತಲತಲಾಂತರಗಳವರೆಗೂ ಅವರು ನಿನಗೆ ಭಯಪಡಲಿ.


ಅವನ ಸಂತಾನವನ್ನು ಯಾವಾಗಲೂ ಉಳಿಸುವೆನು. ಅವನ ಸಿಂಹಾಸನವು ಆಕಾಶವಿರುವವರೆಗೂ ಇರುವುದು.


ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; “ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ, ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ” ಎಂದು ಯೆಹೋವನು ಹೇಳುತ್ತಾನೆ.


ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.


ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರದು” ಎಂದು ಹೇಳಿದನು.


ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.


‘ಶಾಶ್ವತವಾಗಿ ನಿನ್ನ ಸಂತತಿಯನ್ನು ಸ್ಥಾಪಿಸುವೆನು, ತಲತಲಾಂತರಗಳಿಗೂ ನಿನ್ನ ಸಿಂಹಾಸನವನ್ನು ಸ್ಥಿರಪಡಿಸುವೆನು ಎಂದು ಹೇಳಿದ್ದೇನೆ’” ಎಂಬುವುದೇ. ಸೆಲಾ


ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು’” ಎಂದು


ಅದಕ್ಕೆ ಆ ಜನರು, “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು.


“ಯೆಹೋವನು ಇಂತೆನ್ನುತ್ತಾನೆ, ನೀವು ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ ಹಗಲನ್ನು, ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಬಹುದಾದರೆ,


ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;


ನಾನು ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದ ವರೆಗಿರುವ ಎಲ್ಲಾ ಇಸ್ರಾಯೇಲರಲ್ಲಿಯೂ, ಯೆಹೂದ್ಯರಲ್ಲಿಯೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸಿ,


ಆಗ ನನ್ನ ದಾಸನಾದ ದಾವೀದನಿಗೂ, ನನ್ನ ಸೇವಕರಾಗಿರುವ ಲೇವಿಯರಾದ ಯಾಜಕರಿಗೂ ನಾನು ಮಾಡಿದ ನಿಬಂಧನೆಯು ನಿಂತು ಹೋಗಿ ದಾವೀದನ ಸಿಂಹಾಸನಾಸೀನನಾಗಿ ಆಳತಕ್ಕ ಅವನ ಸಂತಾನದವನೊಬ್ಬನೂ ಉಳಿಯದೆ ಹೋದಾನು.


ಕರ್ತನಾದ ಯೆಹೋವನು ತನ್ನ ಪರಿಶುದ್ಧತ್ವದ ಮೇಲೆ ಆಣೆಯಿಟ್ಟು: “ಇಗೋ ನಿಮ್ಮನ್ನು ಕೊಂಡಿಗಳಿಂದಲೂ, ನಿಮ್ಮಲ್ಲಿ ಉಳಿದವರನ್ನು ಮೀನುಗಾಳಗಳಿಂದಲೂ, ಎಳೆದುಕೊಂಡು ಹೋಗುವ ದಿನಗಳು ನಿಮಗೆ ಬರುತ್ತವೆ ಎಂದು ಪ್ರಮಾಣ ಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು