ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.
ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ, ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.
ಗಿಲ್ಬೋವ ಗುಡ್ಡಗಳೇ, ನಿಮ್ಮ ಮೇಲೆ ಮಂಜು, ಮಳೆಯು, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ.