Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಅವನ ವಿರೋಧಿಗಳ ಹಸ್ತವನ್ನು ಉನ್ನತಪಡಿಸಿದ್ದೀ; ಅವನ ವೈರಿಗಳಿಗೆಲ್ಲಾ ಆನಂದವಾಗುವಂತೆ ಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಮೇಲಾಗಿಸಿರುವೆ ಅವನ ವಿರೋಧಿಗಳ ಕೈಯನು I ಉಲ್ಲಾಸಗೊಳಿಸಿರುವೆ ಅವನೆಲ್ಲಾ ವೈರಿಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಅವನ ವಿರೋಧಿಗಳ ಹಸ್ತವನ್ನು ಉನ್ನತಪಡಿಸಿದ್ದೀ; ಅವನ ವೈರಿಗಳಿಗೆಲ್ಲಾ ಆನಂದವಾಗುವಂತೆ ಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಅವನ ಶತ್ರುಗಳಿಗೆಲ್ಲಾ ನೀನು ಸಂತೋಷವನ್ನುಂಟು ಮಾಡಿರುವೆ. ಅವನ ಶತ್ರುಗಳಿಗೆ ಯುದ್ಧದಲ್ಲಿ ಜಯವಾಗುವಂತೆ ಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಅವನ ವೈರಿಗಳ ಬಲಗೈ ಉನ್ನತವಾಗಿದೆ. ಅವನ ವೈರಿಗಳೆಲ್ಲಾ ಆನಂದಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:42
10 ತಿಳಿವುಗಳ ಹೋಲಿಕೆ  

ನಮ್ಮನ್ನು ಸುತ್ತಣ ಜನಾಂಗಗಳ ದಿಕ್ಕಾರಕ್ಕೂ, ಶತ್ರುಗಳ ನಿಂದೆಗೂ ಗುರಿಯನ್ನಾಗಿ ಮಾಡಿದಿ.


ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ. ಆದರೆ ಲೋಕವು ಸಂತೋಷಿಸುವುದು. ನಿಮಗೆ ದುಃಖವಾಗುವುದು ಆದರೆ ನಿಮ್ಮ ದುಃಖವು ಹೋಗಿ ಆನಂದ ಬರುವುದು.


ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ ನಿನ್ನನ್ನು ಕೆಡವಿ, ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.


ನಾನು ಇನ್ನೆಷ್ಟರವರೆಗೆ ಹಗಲೆಲ್ಲಾ ದುಃಖಾಕ್ರಾಂತನಾಗಿದ್ದು, ಆಲೋಚಿಸಿಕೊಳ್ಳುತ್ತಾ ಇರಬೇಕು? ಇನ್ನೆಲ್ಲಿಯ ತನಕ ವಿರೋಧಿಯು ನನಗೆ ದೊರೆಯಾಗಿರಬೇಕು?


ನಿಮ್ಮ ಮಧ್ಯದಲ್ಲಿರುವ ಅನ್ಯರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಿಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.


ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.


ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನೆಯನ್ನು ಮೀರಿದ್ದರಿಂದ ಆ ಕತ್ತಿಯು ಪ್ರತಿದಂಡನೆಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗ ಉಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.


ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.


ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ; ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು