Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:49 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಕರ್ತನೇ, ನೀನು ನಿನ್ನ ಸತ್ಯತೆಯಲ್ಲಿ ಆಣೆಯಿಟ್ಟು, ದಾವೀದನಿಗೆ ವಾಗ್ದಾನಮಾಡಿ ನಡೆಸುತ್ತಿದ್ದ ಹಿಂದಿನ ಕೃಪಾಕಾರ್ಯಗಳು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ದಾವೀದನಿಗೆ ಪ್ರಭು, ನೀನಿತ್ತ ವಾಗ್ದಾನವೆಲ್ಲಿ? I ಗತಕಾಲದಲಿ ನೀ ತೋರಿದಚಲ ಪ್ರೀತಿಯೆಲ್ಲಿ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಕರ್ತನೇ, ನೀನು ನಿನ್ನ ಸತ್ಯತೆಯಲ್ಲಿ ಆಣೆಯಿಟ್ಟು ದಾವೀದನಿಗೆ ವಾಗ್ದಾನಮಾಡಿ ನಡಿಸುತ್ತಿದ್ದ ಮುಂಚಿನ ಕೃಪಾಕಾರ್ಯಗಳು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಯೆಹೋವನೇ, ಹಿಂದಿನಕಾಲದಲ್ಲಿ ನೀನು ತೋರಿದ ಪ್ರೀತಿ ಎಲ್ಲಿ ಹೋಯಿತು? ದಾವೀದ ಕುಟುಂಬಕ್ಕೆ ನಂಬಿಗಸ್ತನಾಗಿರುತ್ತೇನೆಂದು ನೀನು ವಾಗ್ದಾನ ಮಾಡಿದೆಯಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಯೆಹೋವ ದೇವರೇ, ನಿಮ್ಮ ಸತ್ಯದಲ್ಲಿ ನೀವು ದಾವೀದನಿಗೆ ಆಣೆಯಿಟ್ಟೆ. ನಿಮ್ಮ ಮೊದಲಿನ ಮಹಾ ಪ್ರೀತಿ ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:49
12 ತಿಳಿವುಗಳ ಹೋಲಿಕೆ  

ಆದರೂ ನನ್ನ ನಿಷ್ಠೆಯ ಒಡಂಬಡಿಕೆಯು ಸೌಲನನ್ನು ಬಿಟ್ಟು ಹೋದ ಹಾಗೆ ಅವನನ್ನು ಬಿಟ್ಟು ಹೋಗುವುದಿಲ್ಲ. ನಾನು ಸೌಲನನ್ನು ನಿನ್ನೆದುರಿನಿಂದ ಹೊರಡಿಸಿಬಿಟ್ಟೆನಲ್ಲಾ


ಆತನಾದರೋ, ಪ್ರತಿಜ್ಞೆಯೊಡನೆ ಯಾಜಕನಾಗಿ ಮಾಡಲ್ಪಟ್ಟನು. ಆದರೆ ದೇವರು ಆತನಿಗೆ “‘ನೀನು ಸದಾಕಾಲವೂ ಯಾಜಕನಾಗಿದ್ದೀ’ ಎಂದು ನಾನು ಪ್ರಮಾಣಮಾಡಿ ನುಡಿದಿದ್ದೇನೆ ಮತ್ತು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ” ಎಂಬುದಾಗಿ ಹೇಳಿದ್ದಾನೆ.


ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ನನ್ನ ಪವಿತ್ರತ್ವದಲ್ಲಿ ಆಣೆಯಿಟ್ಟು ಒಂದು ಸಂಗತಿಯನ್ನು ಹೇಳಿದ್ದೇನೆ; ಅದರ ವಿಷಯದಲ್ಲಿ ನಾನು ದಾವೀದನಿಗೆ ಸುಳ್ಳುಗಾರನಾಗುವುದಿಲ್ಲ.


ನನ್ನ ಕೆಡುಕಿಗೆ ಸಮಯ ನೋಡುವವರು ತಾವೇ ಕೇಡನ್ನು ಅನುಭವಿಸಲಿ. ನೀನು ನಂಬಿಗಸ್ತನಲ್ಲವೇ; ಅವರನ್ನು ನಿರ್ಮೂಲಮಾಡು.


ನಾನು ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದ ವರೆಗಿರುವ ಎಲ್ಲಾ ಇಸ್ರಾಯೇಲರಲ್ಲಿಯೂ, ಯೆಹೂದ್ಯರಲ್ಲಿಯೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸಿ,


ಅವನ ಪ್ರಾಣವು ಶಾಶ್ವತವಾಗಿ ಉಳಿಯಲು, ಅಪಾರ ಹಣವನ್ನು ಕೊಟ್ಟು ಬಿಡಿಸಲಾರನು.


ಸುಜ್ಞಾನಿಗಳು ಸಾಯುವುದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು