Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮೇಘಮಂಡಲದಲ್ಲಿ ಯೆಹೋವನಿಗೆ ಸಮಾನರು ಯಾರು? ದೇವದೂತರಲ್ಲಿ ಯೆಹೋವನಿಗೆ ಸರಿಯಾದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮೇಘಮಂಡಲದಲಿ ಸಮಾನನಾರು ಪ್ರಭುವಿಗೆ I ದೇವದೂತರೊಳು ಹೋಲಿಕೆ ಯಾವುದು ಆತನಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮೇಘಮಂಡಲದಲ್ಲಿ ಯೆಹೋವನಿಗೆ ಸಮಾನರು ಯಾರು? ದೇವದೂತರಲ್ಲಿ ಯೆಹೋವನಿಗೆ ಸರಿಯಾದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪರಲೋಕದಲ್ಲಿ ಯಾವನೂ ಯೆಹೋವನಿಗೆ ಸಮಾನನಲ್ಲ. ಯಾವ ದೇವರುಗಳನ್ನೂ ಯೆಹೋವನಿಗೆ ಹೋಲಿಸಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪ್ರಪಂಚದಲ್ಲಿ ಯೆಹೋವ ದೇವರಿಗೆ ಸಮಾನನಾದವನು ಯಾರು? ಪರಲೋಕ ಜೀವಿಗಳಲ್ಲಿ ಯೆಹೋವ ದೇವರಿಗೆ ಸಮಾನನಾದವನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:6
10 ತಿಳಿವುಗಳ ಹೋಲಿಕೆ  

ಕರ್ತನೇ, ದೇವರುಗಳಲ್ಲಿ ನಿನಗೆ ಸಮಾನನೇ ಇಲ್ಲ; ನಿನ್ನ ಕೃತ್ಯಗಳಿಗೆ ಸರಿಯಾದದ್ದು ಇನ್ನೊಂದಿಲ್ಲ.


ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ತರವಾದ ಕೃತ್ಯಗಳನ್ನು ನಡೆಸಿದ ದೇವರೇ, ನಿನಗೆ ಸಮಾನರು ಯಾರು?


ಯೆಹೋವನೇ, ನಿನ್ನ ಸಮಾನನು ಯಾರು ಇಲ್ಲ; ನೀನು ಮಹೋನ್ನತನು, ನಿನ್ನ ನಾಮವು ಸಾಮರ್ಥ್ಯದಿಂದ ಕೂಡಿ ಮಹೋನ್ನತವಾಗಿದೆ.


ನಮ್ಮ ಯೆಹೋವ ದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ,


ದೇವದೂತರುಗಳಿರಾ, ಪರಮಪ್ರಭಾವವು, ಯೆಹೋವನದೇ, ಯೆಹೋವನದೇ ಎಂದು ಹೇಳಿ ಕೊಂಡಾಡಿರಿ.


ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ನಿನ್ನ ಹಾಗೆ ಪರಿಶುದ್ಧತ್ವದಲ್ಲಿ ಸರ್ವೋತ್ತಮನು ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ?


ಪರಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರು ಅವಶ್ಯ? ಇಹಲೋಕದಲ್ಲಿ ನಿನ್ನನ್ನಲ್ಲದೆ ಇನ್ನಾರನ್ನೂ ಬಯಸುವುದಿಲ್ಲ.


ಯೆಹೋವನೇ, ಸೇನಾಧೀಶ್ವರನಾದ ದೇವರೇ, ನಿನಗೆ ಸಮಾನರು ಯಾರು? ಯಾಹುವೇ, ನೀನು ಶಕ್ತನು, ಸತ್ಯತೆಯಿಂದ ಆವರಿಸಲ್ಪಟ್ಟವನು.


ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? ದೇವರ ಕೃಪೆಯು ಯಾವಾಗಲೂ ಇರುವುದು.


ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ, ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ; ಅವು ಅಸಂಖ್ಯಾತವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು