Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕೆಳ ಪಾತಾಳವೊಂದೇ ಗತಿ ದುಷ್ಟರಿಗೆ I ದೇವರನು ಕೈಬಿಟ್ಟಾ ರಾಷ್ಟ್ರಗಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದೇವರನ್ನು ಅಲಕ್ಷ್ಯ ಮಾಡುವ ಜನರೆಲ್ಲ ಕೆಟ್ಟವರು. ಅವರು ಮರಣದ ಸ್ಥಳಕ್ಕೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ದುಷ್ಟರು ಪಾತಾಳಕ್ಕೆ ತಿರುಗುವರು, ದೇವರನ್ನು ಮರೆಯುವ ರಾಷ್ಟ್ರಗಳ ಅಂತ್ಯವೂ ಹಾಗೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:17
22 ತಿಳಿವುಗಳ ಹೋಲಿಕೆ  

ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ.


ದೇವರನ್ನು ಮರೆತು ಬಿಟ್ಟವರೆಲ್ಲರ ಗತಿಯು ಹೀಗೆಯೇ ಇರುವುದು; ಭ್ರಷ್ಟನ ನಿರೀಕ್ಷೆಯು ನಿರರ್ಥಕವಾಗುವುದು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.


ನನ್ನ ಜನರೋ ನನ್ನನ್ನು ಮರೆತು ವ್ಯರ್ಥ ವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ, ಸರಿಯಲ್ಲದ ಸೀಳು ದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.


ನೀನು ನನ್ನನ್ನು ಮರೆತು ಸುಳ್ಳನ್ನು ನಂಬಿದ್ದರಿಂದ ಇದೇ ನಿನ್ನ ಪಾಲು, ಇದೇ ನಾನು ನಿನಗೆ ಅಳೆದುಕೊಟ್ಟ ಭಾಗ ಎಂದು ಯೆಹೋವನು ನುಡಿಯುತ್ತಾನೆ.


ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವುದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.


ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.


ಹೀಗಿರುವುದರಿಂದ ಪಾತಾಳವು ಹೆಚ್ಚು ಆತುರದಿಂದ ಅಗಾಧವಾಗಿ ಬಾಯಿ ತೆರೆಯಲು, ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲವುಗಳು ಅದರೊಳಗೆ ಬಿದ್ದುಹೋಗುವವು.


ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು, ಆತನ ನಡೆಸುವಿಕೆಗೆ ಕಾದಿರದೆ,


ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರು ನೇರವಾಗಿ ಪಾತಾಳಕ್ಕೆ ಇಳಿದುಹೋಗುವರು, ಅವರಿಗೆ ನಿವಾಸವಿಲ್ಲದ ಹಾಗೆ, ಪಾತಾಳವು ಅವರ ರೂಪವನ್ನು ನಾಶಮಾಡುವುದು.


ನಾವು ನಮ್ಮ ದೇವರ ಹೆಸರನ್ನು ಮರೆತು, ಅನ್ಯದೇವತೆಗಳಿಗೆ ಕೈಯೆತ್ತಿದ್ದರೆ,


ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಶೃಂಗರಿಸಿಕೊಂಡು, ವ್ಯಭಿಚಾರಿಗಳ ಹಿಂದೆ ಹೋಗಿ ಬಾಳ್ ದೇವತೆಗಳ ಉತ್ಸವ ದಿನಗಳಲ್ಲಿ ಧೂಪಹಾಕಿದ್ದಕ್ಕೆ ನಾನು ಅವಳನ್ನು ದಂಡಿಸುವೆನು, ಇದು ಯೆಹೋವನ ನುಡಿ.”


ಆಹಾ, ಬೋಳುಗುಡ್ಡಗಳಲ್ಲಿ ಒಂದು ಶಬ್ದ! ತಾವು ಡೊಂಕು ದಾರಿಯನ್ನು ಹಿಡಿದು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟಿದ್ದೇವೆಂದು ಇಸ್ರಾಯೇಲರು ಕಣ್ಣೀರು ಸುರಿಸಿ ದೇವರ ಕೃಪೆಯನ್ನು ಬೇಡುತ್ತಿದ್ದಾರಲ್ಲಾ.


ನಾವು ನಿನ್ನನ್ನು ಮರೆಯದೆಯೂ, ನಿನ್ನ ನಿಬಂಧನೆಗಳನ್ನು ಮೀರದೆಯೂ ಇದ್ದರೂ; ಇದೆಲ್ಲಾ ನಮ್ಮ ಮೇಲೆ ಬಂದಿದೆಯಲ್ಲಾ!


ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡಿದುಕೊಂಡು, ವಕ್ರಬುದ್ಧಿಯುಳ್ಳವರ ಆಲೋಚನೆಯನ್ನು ನಿರರ್ಥಕ ಮಾಡುತ್ತಾನೆ.


ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.


ಜನಾಂಗಗಳ ಕಣ್ಣೆದುರಿಗೆ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವಿ; ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು