Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 90:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕರ್ತನೇ, ತಲತಲಾಂತರಗಳಿಂದಲೂ ನಮ್ಮ ಆಶ್ರಯಸ್ಥಾನವು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪ್ರಭೂ, ತಲತಲಾಂತರಕ್ಕೆ I ಶ್ರೀನಿವಾಸ ನೀನೆಮಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕರ್ತನೇ, ತಲತಲಾಂತರಗಳಿಂದಲೂ ನಮ್ಮ ವಾಸಸ್ಥಾನವು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ತಲತಲಾಂತರಗಳಿಂದಲೂ ನೀನೇ ನಮ್ಮ ವಾಸಸ್ಥಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ತಲತಲಾಂತರಗಳಲ್ಲಿ ನೀವು ನಮ್ಮ ವಾಸಸ್ಥಾನವಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 90:1
15 ತಿಳಿವುಗಳ ಹೋಲಿಕೆ  

ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು “ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ” ಎಂದು ಆಜ್ಞಾಪಿಸಿದನು;


ನಾನು ಯಾವಾಗಲೂ ಮರೆಹೋಗುವ ಆಶ್ರಯಗಿರಿಯಾಗಿರು; ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ. ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ.


ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.


ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.


“ಆದಕಾರಣ ನೀನು ಹೀಗೆ ಸಾರು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ದೂರವಾಗಿ ತೊಲಗಿಸಿ, ಜನಾಂಗಗಳಲ್ಲಿ ಮತ್ತು ಅನ್ಯದೇಶದ ಜನಾಂಗಗಳಲ್ಲಿ ಚದರಿಸಿದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಸ್ವಲ್ಪ ಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.’


ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿದಿದ್ದಾನೋ ಅವನು ನನ್ನಲ್ಲಿ ನೆಲೆಸಿರುತ್ತಾನೆ; ನಾನು ಅವನಲ್ಲಿ ನೆಲೆಸಿರುತ್ತೇನೆ.


ಯೆಹೋವನೇ ನನ್ನ ಶರಣನು! ಅತ್ಯುನ್ನತನಾದ ದೇವರನ್ನು ನಿವಾಸಸ್ಥಾನ ಮಾಡಿಕೊಂಡಿದ್ದಿಯಲ್ಲಾ.


ಯೆಹೋವನೇ, ನಿತ್ಯವೂ ನಿನ್ನ ಕೃಪಾತಿಶಯವನ್ನು ಹಾಡಿಹರಸುವೆನು; ನನ್ನ ಬಾಯಿ ನಿನ್ನ ಸತ್ಯವನ್ನು, ಮುಂದಣ ಸಂತಾನದವರೆಲ್ಲರಿಗೂ ತಿಳಿಯಮಾಡುವುದು.


ಆತನು ಆಶ್ರಯವಾಗುವನು; ಆದರೆ ಇಸ್ರಾಯೇಲಿನ ಎರಡು ಮನೆತನಕ್ಕೆ ಎಡವುವ ಕಲ್ಲೂ, ಮುಗ್ಗರಿಸುವ ಬಂಡೆಯೂ ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಪಂಜರವಾಗುವುದು.


ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.


ಆಗ ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಹಾಕುವುದಕ್ಕಾಗಿ ಯಜ್ಞವೇದಿಯ ಹತ್ತಿರ ನಿಂತುಕೊಂಡಿದ್ದನು


ದೇವಪುರುಷನಾದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಾಯೇಲರ ವಿಷಯವಾಗಿ ಹೇಳಿದ ಆಶೀರ್ವಾದವು:


ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾಮಿಯೇ, ನೀನು ಅನಾದಿಯಿಂದಿದ್ದೀಯಲ್ಲಾ, ನಾವು ಖಂಡಿತ ಸಾಯುವುದಿಲ್ಲ. ಯೆಹೋವನೇ ನಮ್ಮ ನ್ಯಾಯತೀರ್ಪಿಗಾಗಿ ಅವರನ್ನು ನೇಮಿಸಿರುವೆ; ಶರಣನೇ, ನಮ್ಮನ್ನು ಶಿಕ್ಷಿಸುವುದಕ್ಕಾಗಿ ಅವರನ್ನು ನಮ್ಮ ಮುಂದೆ ನಿಲ್ಲಿಸಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು