Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 90:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನೇ, ಮನಸ್ಸನ್ನು ಬೇರೆ ಮಾಡಿಕೋ; ಎಷ್ಟರವರೆಗೆ ಕೋಪ ಮಾಡುವಿ? ನಿನ್ನ ಸೇವಕರ ಮೇಲೆ ಕರುಣೆಯಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಪ್ರಭು, ತಿರುಗಿ ಬಾ, ಕೋಪವೆಷ್ಟರ ತನಕ? I ನಿನ್ನೀ ಸೇವಕರ ಮೇಲಿರಲಿ ಮರುಕ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನೇ, ಮನಸ್ಸನ್ನು ಬೇರೆ ಮಾಡಿಕೋ; ಎಷ್ಟರವರೆಗೂ [ಕೋಪ ಮಾಡುವಿ]? ನಿನ್ನ ಸೇವಕರ ಮೇಲೆ ಅಂತಃಕರಣವಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನೇ, ನಮ್ಮ ಬಳಿಗೆ ಹಿಂತಿರುಗಿ ಬಾ. ನಿನ್ನ ಸೇವಕರ ಮೇಲೆ ಅಂತಃಕರಣವಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರೇ, ಮನಸ್ಸು ಮಾರ್ಪಡಿಸಿಕೊಳ್ಳಿರಿ. ನೀವು ಎಷ್ಟರವರೆಗೆ ಬೇಸರಗೊಳ್ಳುವಿರಿ? ನಿಮ್ಮ ಸೇವಕರ ವಿಷಯದಲ್ಲಿ ಅನುಕಂಪ ತೋರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 90:13
20 ತಿಳಿವುಗಳ ಹೋಲಿಕೆ  

ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.


ನಿಜವಾಗಿ ಯೆಹೋವನು ತನ್ನ ಪ್ರಜೆಯ ನ್ಯಾಯವನ್ನು ಸ್ಥಾಪಿಸುವನು, ತನ್ನ ಸೇವಕರನ್ನು ಕನಿಕರಿಸುವನು.


ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.


ಸೇನಾಧೀಶ್ವರನಾದ ದೇವರೇ, ಅಭಿಮುಖನಾಗಬೇಕು; ನೀನು ಪರಲೋಕದಿಂದ ಕಟಾಕ್ಷಿಸಿ, ಈ ದ್ರಾಕ್ಷಾಲತೆಯನ್ನು ಪರಾಂಬರಿಸು.


ದೇವರು ಒಂದು ವೇಳೆ ಮನಮರುಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು” ಎಂಬುದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.


ಕರ್ತನಾದ ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.


ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.


ಯೆಹೋವನೇ, ಇನ್ನೆಷ್ಟರವರೆಗೆ ಮರೆಯಾಗಿರುವಿ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಸದಾ ಉರಿಯುತ್ತಿರಬೇಕೋ?


ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ನಾನು ಕನಿಕರವುಳ್ಳವನಾಗಿ ಯೆರೂಸಲೇಮಿಗೆ ಹಿಂದಿರುಗಿದ್ದೇನೆ; ನನ್ನ ಆಲಯವು ಪುನಃ ಅಲ್ಲಿ ಕಟ್ಟಲ್ಪಡುವುದು; ಯೆರೂಸಲೇಮಿನಲ್ಲಿ ನೂಲು ಎಳೆಯಲ್ಪಡುವುದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನೋಡಿರಿ, ನಾನು ಅವರನ್ನು ಕಿತ್ತುಹಾಕಿದ ಮೇಲೆ ತಿರುಗಿ ಅವರ ಮೇಲೆ ಕನಿಕರಪಟ್ಟು ಪ್ರತಿಯೊಬ್ಬನನ್ನೂ ಅವನವನ ಸ್ವತ್ತಿಗೂ, ಅವನವನ ದೇಶಕ್ಕೂ ಪುನಃ ಬರಮಾಡುವೆನು.


ದೇವರೇ, ವಿರೋಧಿಗಳು ಇನ್ನೆಲ್ಲಿಯ ತನಕ ನಿಂದಿಸುತ್ತಿರಬೇಕು? ವೈರಿಗಳು ನಿನ್ನ ನಾಮವನ್ನು ಸದಾಕಾಲವೂ ತಿರಸ್ಕರಿಸಬಹುದೋ?


ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿಕೊಂಡನು.


ಐಗುಪ್ತ್ಯರು ನಿನ್ನ ವಿಷಯದಲ್ಲಿ, ‘ಯೆಹೋವನು ಕೇಡು ಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದನಲ್ಲಾ. ಅವರನ್ನು ಬೆಟ್ಟಗಳಲ್ಲಿ ಸಾಯಿಸಲಿಕ್ಕೂ ಭೂಮಿಯಿಂದ ನಿರ್ಮೂಲ ಮಾಡುವುದಕ್ಕೂ ಅವರನ್ನು ಕರೆದುಕೊಂಡು ಹೋದನೆಂದು ಹೇಳಿಕೊಳ್ಳುವುದೇತಕ್ಕೆ?’ ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬದಲು ಮಾಡಿಕೋ.


ಅದು ನಿಂತಾಗ ಅವನು, “ಯೆಹೋವನೇ, ಇಸ್ರಾಯೇಲರ ಲಕ್ಷಾಂತರ ಕುಟುಂಬಗಳ ಮಧ್ಯದಲ್ಲಿ ಮರಳಿ ಆಗಮಿಸು” ಎಂದು ಹೇಳುವನು.


ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ; ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು?


ನಿನ್ನ ಬಲಗೈ ನೆಟ್ಟು, ಸಾಕಿ, ಬೆಳೆಸಿದ ಸಸಿಯನ್ನು ಕಾಪಾಡು.


ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನಪಡಿಸುವುದೇಕೆ? ನಿನ್ನ ಸೇವಕರ ನಿಮಿತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು