Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 91:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ರಾತ್ರಿಯಲ್ಲಿ ಭಯಹುಟ್ಟಿಸುವ ಯಾವುದಕ್ಕೂ, ಹಗಲಲ್ಲಿ ಹಾರಿಬರುವ ಬಾಣಕ್ಕೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀನು ಅಂಜಬೇಕಾಗಿಲ್ಲ ಇರುಳಿನ ದುರಿತಕೆ I ಹಗಲಿನಲಿ ಹಾರಿಬರುವ ಬಿರುಸು ಬಾಣಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇರುಳಲ್ಲಿ ಭಯಹುಟ್ಟಿಸುವ ಯಾವದಕ್ಕೂ ಹಗಲಲ್ಲಿ ಹಾರಿಬರುವ ಬಾಣಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇರುಳಲ್ಲಿ ನೀನು ಯಾವುದಕ್ಕೂ ಭಯಪಡಬೇಕಿಲ್ಲ; ಹಗಲಲ್ಲಿ ಶತ್ರುಗಳ ಬಾಣಗಳಿಗೂ ನೀನು ಹೆದರಬೇಕಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ರಾತ್ರಿಯ ಭಯಂಕರತೆಗೆ ನೀನು ಅಂಜಬೇಕಾಗಿಲ್ಲ, ಹಗಲಿನಲ್ಲಿ ಹಾರುವ ಬಾಣಕ್ಕೂ ಹೆದರಬೇಕಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 91:5
19 ತಿಳಿವುಗಳ ಹೋಲಿಕೆ  

ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.


ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.


ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ, ಅವನ ಮನಸ್ಸು ಸ್ಥಿರವಾಗಿರುವುದು.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.


ಆದುದರಿಂದ ಭೂಮಿಯು ಮಾರ್ಪಟ್ಟರೂ, ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ, ನಮಗೇನೂ ಭಯವಿಲ್ಲ.


ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.


ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು, “ಇಸ್ರಾಯೇಲರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧವಾಗಿ ಕರೆದುತಂದಿದ್ದಾರೆ” ಅಂದುಕೊಂಡು,


ಕಳ್ಳನು ಬರುವ ಗಳಿಗೆಯು ಮನೆ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು, ತನ್ನ ಮನೆಗೆ ಕನ್ನಾ ಹಾಕಗೊಡಿಸುತ್ತಿರಲಿಲ್ಲವೆಂದು ತಿಳಿದುಕೊಳ್ಳಿರಿ.


“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.


ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ನಡುಕವು ನನ್ನನ್ನು ಆವರಿಸಿಕೊಂಡಿದೆ, ನಾನು ಅಪೇಕ್ಷಿಸುತ್ತಿದ್ದ ರಾತ್ರಿಯು ನನಗೆ ಭಯವಾಗಿ ಪರಿಣಮಿಸಿದೆ.


ಯುದ್ಧಪ್ರವೀಣರಾದ ಇವರೆಲ್ಲರೂ ಕೈಯಲ್ಲಿ ಕತ್ತಿಯನ್ನು ಹಿಡಿದಿದ್ದಾರೆ. ರಾತ್ರಿಯ ಅಪಾಯದ ನಿಮಿತ್ತ ಪ್ರತಿಯೊಬ್ಬನೂ ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾನೆ.


ಸರ್ವಶಕ್ತನಾದ ದೇವರ ಬಾಣಗಳು ನನ್ನಲ್ಲಿ ನಾಟಿರುತ್ತವೆ, ನನ್ನ ಆತ್ಮವು ಅವುಗಳ ವಿಷವನ್ನು ಹೀರಿಕೊಳ್ಳುತ್ತದೆ; ದೇವರು ಕಳುಹಿಸಿದ ಅಪಾಯಗಳು ನನಗೆ ವಿರುದ್ಧವಾಗಿ ವ್ಯೂಹಕಟ್ಟಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು