Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 92:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನೀನಾದರೊ ಪ್ರಭು, ಸರ್ವದಾ ಇರುವೆ I ಮಹೋನ್ನತದೊಳು ವಿರಾಜಿಸುತ್ತಿರುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನೇ, ನೀನಾದರೋ ಸದಾಕಾಲ ಸನ್ಮಾನ ಹೊಂದುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರೇ, ನೀವಾದರೋ ಎಂದೆಂದಿಗೂ ಉನ್ನತರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 92:8
13 ತಿಳಿವುಗಳ ಹೋಲಿಕೆ  

ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.


ಆ ಸಮಯದಲ್ಲೇ ಅರಸನಾದ ಹೆರೋದನು ಸಭೆಯವರಲ್ಲಿ ಕೆಲವರನ್ನು ಹಿಂಸೆಪಡಿಸುವುದಕ್ಕೆ ಕೈಹಾಕಿದನು.


ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.


ಜಲರಾಶಿಗಳ ಘೋಷಕ್ಕಿಂತಲೂ, ಮಹಾತರಂಗಗಳ ಗರ್ಜನೆಗಿಂತಲೂ, ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು.


ಹೊಂಚುಹಾಕಿ ನನ್ನನ್ನು ನುಂಗಿಬಿಡಬೇಕೆಂದು ಯಾವಾಗಲೂ ಬಾಯ್ದೆರೆದಿದ್ದಾರೆ; ಸೊಕ್ಕಿನಿಂದ ನನ್ನ ಮೇಲೆ ಯುದ್ಧಕ್ಕೆ ನಿಂತವರು ಎಷ್ಟೋ ಜನರು.


ಯೆಹೋವನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ, ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ” ಅಂದನು.


ಅವರು ಹುಲ್ಲಿನಂತೆ ಬೇಗ ಒಣಗಿಹೋಗುವರು; ಹಸಿರು ಸಸಿಯಂತೆ ಬಾಡಿಹೋಗುವರು.


ಆದರೆ ದೇವಾಲಯಕ್ಕೆ ಹೋಗಿ ಅವರ ಅಂತ್ಯಾವಸ್ಥೆಯನ್ನು ಆಲೋಚಿಸಿದಾಗ ನನಗೆ ಗೊತ್ತಾಯಿತು.


ಹೌದು, ನೀನು ಅವರನ್ನು ಅಪಾಯಕರ ಸ್ಥಳದಲ್ಲಿಟ್ಟು, ಬೀಳಿಸಿ, ನಾಶಮಾಡಿಬಿಡುತ್ತೀ.


ಯೆಹೋವನು ಡೊಂಕುದಾರಿ ಹಿಡಿದವರನ್ನು, ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. ಇಸ್ರಾಯೇಲರಿಗೆ ಶುಭವುಂಟಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು