ಕೀರ್ತನೆಗಳು 93:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ವಹಿಸಿಹನು ಪ್ರಭು, ರಾಜ್ಯಾಧಿಕಾರವನು I ಧರಿಸಿಹನು ಘನತೆಯ ವಸ್ತ್ರ ಲಾಂಛನವನು I ತೊಟ್ಟಿಹನು ಶೌರ್ಯವೆಂಬ ನಡುಕಟ್ಟನು I ಸ್ಥಿರಪಡಿಸಿಹನು ಕದಲದಂತೆ ಜಗವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಮಹಿಮಾವಸ್ತ್ರವನ್ನು ಧರಿಸಿದ್ದಾನೆ, ಧರಿಸಿದ್ದಾನೆ. ಶೌರ್ಯವನ್ನು ನಡುಕಟ್ಟಾಗಿ ಬಿಗಿದಿದ್ದಾನೆ; ಭೂಲೋಕವು ಸ್ಥಿರವಾಗಿರುವದು, ಕದಲುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನೇ ರಾಜನು. ಆತನು ವೈಭವವನ್ನೂ ಬಲವನ್ನೂ ವಸ್ತ್ರದಂತೆ ಧರಿಸಿಕೊಂಡಿದ್ದಾನೆ. ಆತನು ಸಿದ್ಧನಾಗಿರುವುದರಿಂದ ಇಡೀ ಪ್ರಂಪಚವೇ ಸುರಕ್ಷಿತವಾಗಿರುವುದು. ಅದು ಕದಲುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಆಳಿಕೆ ಮಾಡುತ್ತಿದ್ದಾರೆ. ಘನತೆಯನ್ನು ಹೊದ್ದುಕೊಂಡಿದ್ದಾರೆ. ಬಲದಿಂದ ತಮ್ಮ ನಡುವನ್ನು ಕಟ್ಟಿಕೊಂಡಿದ್ದಾರೆ. ಆದುದರಿಂದ ಲೋಕವು ಸಹ ಸ್ಥಿರವಾಗಿದೆ, ಕದಲುವುದಿಲ್ಲ. ಅಧ್ಯಾಯವನ್ನು ನೋಡಿ |