ಕೀರ್ತನೆಗಳು 94:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ದುಷ್ಟರಿಗೆ ವಿರುದ್ಧವಾಗಿ ನನಗೋಸ್ಕರ ಏಳುವವರು ಯಾರು? ಕೆಡುಕರಿಗೆ ವಿರುದ್ಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ದುರುಳರಿಗೆದುರಾಗಿ ನನ್ನ ಪಕ್ಷ ವಹಿಸುವರಾರು? I ಕೆಡುಕರಿಗೆ ವಿರುದ್ಧ ನನ್ನ ಪರ ನಿಲ್ಲುವವರಾರು? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ದುಷ್ಟರಿಗೆ ವಿರೋಧವಾಗಿ ನನಗೋಸ್ಕರ ಏಳುವವರು ಯಾರು? ಕೆಡುಕರಿಗೆ ವಿರೋಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದುಷ್ಟರಿಗೆ ವಿರೋಧವಾಗಿ ಯಾರೂ ನನಗೆ ಸಹಾಯಮಾಡಲಿಲ್ಲ. ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯಾರೂ ನನ್ನೊಂದಿಗೆ ನಿಂತುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನನಗೋಸ್ಕರ ದುರ್ಮಾರ್ಗಿಗಳಿಗೆ ವಿರೋಧವಾಗಿ ಏಳುವವನ್ಯಾರು? ಅಪರಾಧ ಮಾಡುವವರಿಗೆ ವಿರೋಧವಾಗಿ ನನಗೋಸ್ಕರ ನಿಂತು ಕೊಳ್ಳುವವನ್ಯಾರು? ಅಧ್ಯಾಯವನ್ನು ನೋಡಿ |
ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ, ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿ, “ನಿನ್ನ ವಿಷಯದಲ್ಲಿ, ನನ್ನ ಹೃದಯವು ಯಥಾರ್ಥವಾಗಿರುವಂತೆ ನಿನ್ನ ಹೃದಯವು ಯಥಾರ್ಥವಾಗಿರುವುದೋ?” ಎಂದು ಕೇಳಿದನು. ಅವನು, “ಹೌದು” ಎಂದು ಉತ್ತರ ಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಯನ್ನು ಕೊಡು” ಎನ್ನಲು ಅವನು ತನ್ನ ಕೈಯನ್ನು ಕೊಟ್ಟನು. ಯೇಹುವು ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.