Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 96:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ವನದ ಎಲ್ಲಾ ಮರಗಳು ಉತ್ಸಾಹಧ್ವನಿ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಉಲ್ಲಾಸಿಸಲಿ ಹೊಲಗದ್ದೆಗಳು, ಪೈರುಪಚ್ಚೆಗಳು I ಹರ್ಷಧ್ವನಿಗೈಯಲಿ ಕಾಡಿನ ಫಲವೃಕ್ಷಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೊಲಗಳೂ ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಎಲ್ಲಾ ಮರಗಳು ಉತ್ಸಾಹಧ್ವನಿ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಹೊಲಗಳೇ ಮತ್ತು ಅವುಗಳ ಮೇಲೆ ಬೆಳೆದಿರುವ ಸಮಸ್ತವೇ, ಸಂತೋಷದಿಂದಿರಿ! ಅರಣ್ಯದ ಮರಗಳೇ, ಹಾಡಿರಿ ಮತ್ತು ಸಂತೋಷಪಡಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಹೊಲಗಳೂ, ಅವುಗಳಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಆಗ ಅಡವಿಯ ಮರಗಳೆಲ್ಲಾ ಯೆಹೋವ ದೇವರ ಮುಂದೆಯೇ ಉತ್ಸಾಹಧ್ವನಿ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 96:12
7 ತಿಳಿವುಗಳ ಹೋಲಿಕೆ  

ಅರಣ್ಯವೂ, ಮರುಭೂಮಿಯೂ ಆನಂದಿಸುವವು; ಒಣನೆಲವು ಹರ್ಷಿಸಿ ತಾವರೆಯಂತೆ ಕಳಕಳಿಸುವುದು.


ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.


ಅದು ಸಮೃದ್ಧಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ, ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ, ನಮ್ಮ ದೇವರ ವೈಭವವನ್ನೂ ಕಾಣುವವು.


ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು