ಕೀರ್ತನೆಗಳು 96:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನು ದೊಡ್ಡವನೂ, ಬಹು ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವರುಗಳಲ್ಲಿ ಆತನೇ ಮಹಾದೇವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಏಕೆನೆ ಮಹಾತ್ಮನು ಪ್ರಭು, ಬಲು ಸ್ತುತ್ಯರ್ಹನು I ಸಕಲ ದೇವರುಗಳಿಗಿಂತಲೂ ಘನಗಂಭೀರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋವನು ದೊಡ್ಡವನೂ ಬಹಳವಾಗಿ ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವರುಗಳಲ್ಲಿ ಆತನೇ ಭಯಂಕರನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನು ದೊಡ್ಡವನೂ ಸ್ತುತಿಗೆ ಯೋಗ್ಯನೂ ಆಗಿದ್ದಾನೆ. ಬೇರೆಲ್ಲ ದೇವರುಗಳಿಗಿಂತ ಆತನೇ ಭಯಂಕರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೆಹೋವ ದೇವರು ಮಹೋನ್ನತರಾಗಿದ್ದಾರೆ, ಬಹು ಸ್ತುತಿಗೆ ಪಾತ್ರರೂ ಆಗಿದ್ದಾರೆ; ಅವರು ಎಲ್ಲಾ ದೇವರುಗಳಿಗಿಂತ ಬಹುಭಯಭಕ್ತಿಗೆ ಪಾತ್ರರಾಗಿದ್ದಾರೆ. ಅಧ್ಯಾಯವನ್ನು ನೋಡಿ |
ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ, ಇಸ್ರಾಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ, ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೂ, ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವುದಕ್ಕೂ, ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಯ ದಿನಗಳಲ್ಲಿಯೂ, ನಮ್ಮ ದೇವರಾದ ಯೆಹೋವನ ಹಬ್ಬಗಳಲ್ಲಿಯೂ ಇವುಗಳಲ್ಲಿ ಸರ್ವಾಂಗಹೋಮವನ್ನರ್ಪಿಸುವುದಕ್ಕೂ ಈ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.