Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 97:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿ ಚೀಯೋನ್ ಪಟ್ಟಣವು ಹರ್ಷಿಸಿತು; ಯೆಹೂದ ಪ್ರಾಂತ್ಯದ ಊರುಗಳು ಸಂತೋಷಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪ್ರಭು, ನಿನ್ನ ನ್ಯಾಯತೀರ್ಪನು ಕುರಿತು I ಸಿಯೋನ್ ನಗರವು ಆನಂದಪಟ್ಟಿತು I ಜುದೇಯ ಪ್ರಾಂತ್ಯವು ಹರ್ಷಗೊಂಡಿತು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿ ಚೀಯೋನ್ ಪಟ್ಟಣವು ಹರ್ಷಿಸಿತು; ಯೆಹೂದ ಪ್ರಾಂತದ ಊರುಗಳು ಸಂತೋಷಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಚೀಯೋನೇ, ಕೇಳಿ ಸಂತೋಷಪಡು! ಯೆಹೂದದ ಪಟ್ಟಣಗಳೇ, ಆನಂದಿಸಿರಿ. ಯಾಕೆಂದರೆ ಯೆಹೋವನ ತೀರ್ಪುಗಳು ನ್ಯಾಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರೇ, ನಿಮ್ಮ ನ್ಯಾಯಗಳನ್ನು ಚೀಯೋನ್ ಪಟ್ಟಣವು ಕೇಳಿ ಸಂತೋಷಿಸಿತು; ಯೆಹೂದದ ಪುತ್ರಿಯರು ಸಹ ಉಲ್ಲಾಸಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 97:8
13 ತಿಳಿವುಗಳ ಹೋಲಿಕೆ  

ಚೀಯೋನ್ ಪಟ್ಟಣದವರು ಹರ್ಷಿಸಲಿ; ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ, ಯೆಹೂದ ಸೀಮೆಯ ನಿವಾಸಿಗಳು ಆನಂದಪಡಲಿ.


ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


“ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ” ಎಂಬುದಾಗಿ ಯೆಹೋವನು ಭೂಮಿಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ.


ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ, ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು. ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು.


ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ, ಅವರ ರಕ್ತದಲ್ಲಿ ಕಾಲಾಡಿಸುವರು.


ನೀತಿವಂತರು ಅದನ್ನು ನೋಡಿ ಭಯಪಡುವರು; ಅವರು ಪರಿಹಾಸ್ಯಮಾಡುತ್ತಾ,


ಯೆಹೋವನೆಂಬಾತನು ನಮ್ಮ ದೇವರು, ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.


ಚೀಯೋನ್ ಸಂಸ್ಥಾನದ ಸುತ್ತಲೂ ಸಂಚರಿಸಿ, ಅದರ ಬುರುಜುಗಳನ್ನು ಲೆಕ್ಕಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು