Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 99:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ಯೆಹೋವನ ಭಯಂಕರವಾದ ಮಹಾನಾಮವನ್ನು ಕೊಂಡಾಡಲಿ; ಆತನು ಪರಿಶುದ್ಧನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆತ ಪರಮ ಪವಿತ್ರನು, ಸ್ತುತಿಸಲಿ ಅವರೆಲ್ಲರು I ಆತ ಘನಗಂಭೀರನು, ಸ್ತುತಿಸಲಿ ಆತನ ಶ್ರೀನಾಮವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ಯೆಹೋವನ ಪೂಜ್ಯವಾದ ಮಹಾನಾಮವನ್ನು ಕೊಂಡಾಡಲಿ; ಆತನು ಪರಿಶುದ್ಧನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರೆಲ್ಲರೂ ನಿನ್ನ ಭಯಂಕರವಾದ ಹೆಸರನ್ನು ಕೊಂಡಾಡಲಿ. ಆತನೇ ಪರಿಶುದ್ಧನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿಮ್ಮ ಅತಿಶಯವಾದ ಹೆಸರನ್ನು ಜನರು ಕೊಂಡಾಡಲಿ. ದೇವರು ಪರಿಶುದ್ಧರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 99:3
20 ತಿಳಿವುಗಳ ಹೋಲಿಕೆ  

ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು.


ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರವಾಕ್ಯಗಳನ್ನೆಲ್ಲಾ ನೀವು ಅನುಸರಿಸದೆ ನಿಮ್ಮ ದೇವರಾದ ಯೆಹೋವನೆಂಬ ಮಹಾಮಹಿಮೆಯುಳ್ಳ ಅದ್ಭುತ ನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿ ನಡೆಯದೆ ಹೋದರೆ,


ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನು ಉಂಟುಮಾಡಿದ್ದಾನೆ; ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; ಆತನ ನಾಮವು ಪರಿಶುದ್ಧವೂ, ಮಹೋನ್ನತವೂ ಆಗಿದೆ.


ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, “ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು.


ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.


ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು, ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆ ತೋರಿಸುವವನು.


ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;


ಆಗ ನಾನು ಅವರನ್ನು ಸಂದರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ, ಅಧಿಕಾರಿಗಳನ್ನೂ, ಉಳಿದ ಜನರನ್ನೂ ಉದ್ದೇಶಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ, ಭಯಂಕರನೂ ಆಗಿರುವ ಕರ್ತನನ್ನು ನೆನಪುಮಾಡಿಕೊಂಡು ನಿಮ್ಮ ಸಹೋದರರಿಗಾಗಿಯೂ, ಗಂಡು ಹೆಣ್ಣು ಮಕ್ಕಳಿಗಾಗಿಯೂ, ಹೆಂಡತಿಯರಿಗಾಗಿಯೂ, ನಿಮ್ಮ ಮನೆಗಳಿಗೋಸ್ಕರವೂ ಹೋರಾಡಿರಿ” ಎಂದು ಹೇಳಿದೆನು.


ಆ ವಿಜ್ಞಾಪನೆಗಳಲ್ಲಿ ನಾನು, “ಯೆಹೋವನೇ, ಮಹೋನ್ನತನೂ, ಭಯಭಕ್ತಿಗೂ ಪಾತ್ರನಾಗಿರುವ ಪರಲೋಕದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,


ಆಗ ಯೆಹೋಶುವನು ಅವರಿಗೆ, “ನೀವು ಯೆಹೋವನನ್ನು ಸೇವಿಸಲು ಶಕ್ತರಲ್ಲ. ಯೆಹೋವನು ಪರಿಶುದ್ಧನು; ತನಗೆ ಸಲ್ಲಿಸಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಪಾಪ, ಅಪರಾಧಗಳನ್ನೂ, ಕ್ಷಮಿಸುವುದಿಲ್ಲ.


ನೀವು ಅವರಿಗೆ ಹೆದರಿಕೊಳ್ಳಬೇಡಿರಿ; ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿದ್ದಾನೆ; ಆತನು ನಮ್ಮ ಭಕ್ತಿಗೆ ಪ್ರತಿಕಾರವಾಗಿ ವಿಸ್ಮಯ ಹುಟ್ಟಿಸುವ ದೇವರಾಗಿದ್ದಾನೆ.


ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು; ಇಸ್ರಾಯೇಲರಲ್ಲಿ ಆತನ ನಾಮವು ದೊಡ್ಡದು.


“ಯೆಹೋವನಂಥ ಪರಿಶುದ್ಧನು ಇಲ್ಲವೇ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ ನಮ್ಮ ದೇವರಂತಹ ಸಮಾನವಾದ ಆಶ್ರಯವಿಲ್ಲ.


ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದುದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು. ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತ ಅವಮಾನಕ್ಕೆ ಒಳಗಾಗುವರು.


ಆತನು ಭೂಪತಿಗಳಿಗೆ ಭಯಪ್ರದರಾಗಿದ್ದ ಪ್ರಭುಗಳ ಅಹಂಭಾವವನ್ನು ಮುರಿದುಬಿಡುವನು.


ನಮ್ಮ ದೇವರೇ, ಮಹೋನ್ನತನೂ, ಪರಾಕ್ರಮಿಯೂ, ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೂ ನಮ್ಮ ಅರಸರಿಗೂ, ಪ್ರಭುಗಳಿಗೂ, ಯಾಜಕರಿಗೂ, ಪ್ರವಾದಿಗಳಿಗೂ, ಪೂರ್ವಿಕರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದು ಎಣಿಸಬೇಡ.


ಆನಂತರ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬುವವರು, “ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವನ್ನು ಸಲ್ಲಿಸಿರಿ. ಯೆಹೋವನೇ, ಸರ್ವಸ್ತುತಿ ಕೀರ್ತನೆಗಳಿಗೂ ಮೀಗಿಲಾಗಿರುವ ನಿನ್ನ ಮಹಾನಾಮಕ್ಕೆ ಮಹಿಮೆಯುಂಟಾಗಲಿ.


ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ, ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರಗಳನ್ನು ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ.


ನನ್ನ ಮನವೇ, ಯೆಹೋವನನ್ನು ಕೊಂಡಾಡು; ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು