Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 99:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತನಾಡುತ್ತಿದ್ದನು; ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮೇಘಸ್ತಂಭದಲಿದ್ದು ಅವರೊಡನೆ ಮಾತಾಡಿದನು I ಕೈಗೊಂಡರು ಅವರು ಆತನಿತ್ತ ವಿಧಿನಿಯಮಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತಾಡುತ್ತಿದ್ದನು; ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆತನು ಮೇಘಸ್ತಂಭದಿಂದ ಅವರೊಂದಿಗೆ ಮಾತಾಡಿದನು. ಅವರು ಆಜ್ಞೆಗಳಿಗೆ ವಿಧೇಯರಾದರು. ಆತನು ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮೇಘಸ್ತಂಭದಿಂದ ಅವರ ಸಂಗಡ ಮಾತನಾಡಿದರು. ದೇವರು ಅವರಿಗೆ ಕೊಟ್ಟ ಶಾಸನಗಳನ್ನೂ ತೀರ್ಪುಗಳನ್ನೂ ಅವರು ಕೈಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 99:7
12 ತಿಳಿವುಗಳ ಹೋಲಿಕೆ  

ಮೋಶೆಯು ಆ ಗುಡಾರದೊಳಕ್ಕೆ ಹೋದಕೂಡಲೆ ಮೇಘಸ್ತಂಭವು ಇಳಿದು ಆ ಗುಡಾರದ ಬಾಗಿಲಲ್ಲಿ ನಿಲ್ಲುತ್ತಿತ್ತು ಹಾಗು ಯೆಹೋವನು ಮೋಶೆಯ ಸಂಗಡ ಮಾತನಾಡುತ್ತಿದ್ದನು.


ಯೆಹೋವನು ಮೇಘಸ್ತಂಭದೊಳಗೆ ಇಳಿದು ಬಂದು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನ್ನು ಮತ್ತು ಮಿರ್ಯಾಮಳನ್ನು ಹತ್ತಿರಕ್ಕೆ ಕರೆದನು. ಅವರು ಮುಂದೆ ಬಂದರು.


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ, ಯೇಸುವೂ ತನ್ನನ್ನು ನೇಮಕ ಮಾಡಿರುವಾತನಿಗೆ ನಂಬಿಗಸ್ತನಾಗಿದ್ದಾನೆ.


ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.


ಆತನು ಕತ್ತಲೆಯನ್ನು ಕಳುಹಿಸಲು ಕತ್ತಲೆಯಾಯಿತು. ಐಗುಪ್ತ್ಯರು ಆತನ ಆಜ್ಞೆಗಳನ್ನು ಅನುಸರಿಸಲಿಲ್ಲ.


ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲಾ.


ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು.


ಯೆಹೋವನು ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತನಾಡುವಾಗ, ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಮೇಘದೊಳಗಿನಿಂದ ನಿನ್ನ ಬಳಿಗೆ ಬರುತ್ತೇನೆ” ಎಂದು ಹೇಳಿದನು. ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ತಿಳಿಸಿದನು.


ಅದಕ್ಕೆ ಮೋಶೆಯು ಬಹಳ ಕೋಪಗೊಂಡು ಯೆಹೋವನಿಗೆ, “ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ” ಎಂದು ಮನವಿಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು