Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕ್ರಿಸ್ತನು ಅದೃಶ್ಯನಾದ ದೇವರ ಪ್ರತಿರೂಪನೂ, ಸೃಷ್ಟಿಗೆಲ್ಲಾ ಜೇಷ್ಠಪುತ್ರನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅದೃಶ್ಯ ದೇವನ ಸದೃಶ್ಯರೂಪನು ಕ್ರಿಸ್ತ, ಸೃಷ್ಟಿಗೆಲ್ಲ ಜೇಷ್ಠಪುತ್ರನಾತ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಸೃಷ್ಟಿಗೆಲ್ಲಾ ಜ್ಯೇಷ್ಠಪುತ್ರನ ಸ್ಥಾನಹೊಂದಿದವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದೇವರನ್ನು ನೋಡಲು ಯಾವ ವ್ಯಕ್ತಿಗೂ ಸಾಧ್ಯವಿಲ್ಲ. ಆದರೆ ಯೇಸುವು ದೇವರ ಪ್ರತಿರೂಪಿಯಾಗಿದ್ದಾನೆ. ಸೃಷ್ಟಿಸಲ್ಪಟ್ಟವುಗಳಿಗೆಲ್ಲಾ ಯೇಸು ಅಧಿಪತಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕ್ರಿಸ್ತ ಯೇಸು ಅದೃಶ್ಯರಾದ ದೇವರ ಸ್ವರೂಪವೂ ಸರ್ವಸೃಷ್ಟಿಗು ಜ್ಯೇಷ್ಠ ಪುತ್ರರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಕ್ರಿಸ್ತ್ ಕೊನಾಕ್ಬಿ ದಿಸಿನಸಲ್ಲ್ಯಾ ದೆವಾಚೊ ಪ್ರತಿರುಪ್ ಹೊವ್ನ್ ಹಾಯ್, ರಚುನ್ ಹೊಲ್ಲ್ಯಾ ಸಗ್ಳ್ಯಾಕ್ ಜೆಜು ಮುಳ್ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:15
23 ತಿಳಿವುಗಳ ಹೋಲಿಕೆ  

ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ?


ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು.


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.


ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.


ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.


ಆತನು ದೇವಸ್ವರೂಪನಾಗಿದ್ದರೂ, ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ,


ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.


ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನಾಗಿಯೂ, ಭೂರಾಜರಲ್ಲಿ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.


ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.


“ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ, ನಂಬಿಗಸ್ತನೂ, ಸತ್ಯ ಸಾಕ್ಷಿಯೂ, ದೇವರ ಸೃಷ್ಟಿಗೆ ಮೂಲನೂ ಆಗಿರುವ ‘ಆಮೆನ್’ ಎಂಬಾತನು ಹೇಳುವುದೇನಂದರೆ,


ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ “ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ.


ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್.


ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಅದ್ಭುತಕಾರ್ಯಗಳನ್ನು ನೋಡಿದ್ದಾರೆ, ಆದರೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸಿದ್ದಾರೆ


“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.


ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು.


ನಂಬಿಕೆಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೇ ಐಗುಪ್ತದೇಶವನ್ನು ಬಿಟ್ಟುಹೋದನು. ಏಕೆಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನಂತೆ ದೃಢಚಿತ್ತನಾಗಿದ್ದನು.


ನಾನು ಅವನ ಸಂಗಡ ಗುಪ್ತವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರುದ್ಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?” ಎಂದನು.


ಅವರಿಗೆ ಇಸ್ರಾಯೇಲರ ದೇವರ ದರ್ಶನವಾಯಿತು. ಅವರು ದೇವರನ್ನು ನೋಡಿದರು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು