ಕೊಲೊಸ್ಸೆಯವರಿಗೆ 1:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಶಿಲುಬೆಯಿಂದಾತ ಹರಿಸಿದ ರಕುತದಿಂದ ಆಗುತಲಿದೆ ಶಾಂತಿಸಮಾಧಾನ, ನಡೆದಿದೆ ದೇವರೊಡನೆ ಸಂಧಾನ, ಇಹಪರಗಳೆಲ್ಲಕ್ಕೂ ಆತನ ಮುಖೇನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಆತನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ನಿಷ್ಕರ್ಷೆಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ಸಮಾಧಾನವನ್ನು ಉಂಟುಮಾಡಿ ಭೂಪರಲೋಕಗಳಲ್ಲಿರುವ ಸಮಸ್ತವನ್ನು ತನಗೆ ಸಂಧಾನಪಡಿಸಿಕೊಳ್ಳಬೇಕೆಂಬುದೂ ದೇವರ ಚಿತ್ತವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಕ್ರಿಸ್ತ ಯೇಸು ಶಿಲುಬೆಯ ಮೇಲೆ ಸುರಿಸಿದ ರಕ್ತದ ಮೂಲಕವಾಗಿ, ದೇವರು ಸಮಾಧಾನವನ್ನು ಉಂಟುಮಾಡಿ, ಕ್ರಿಸ್ತನ ಮೂಲಕವೇ ಭೂಪರಲೋಕಗಳಲ್ಲಿರುವ ಎಲ್ಲವನ್ನೂ ತಮ್ಮೊಂದಿಗೆ ಸಂಧಾನಪಡಿಸಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಅನಿ ತೆನಿ ಕುರ್ಸಾರ್ ವೊತಲ್ಲ್ಯಾ ರಗ್ತಾ ವೈನಾ ಸಮಾದಾನ್ ಹಾನುನ್ ಸರ್‍ಗಾರ್ ಅನಿ ಜಮ್ನಿ ವರ್‍ತಿ ಹೊತ್ತೆ ಹರ್ ಎಕ್ಬಿ ತೆಚ್ಯಾ ವೈನಾ ರಾಜಿ ಕರುನ್ ಘೆವ್ಚೆ ಮನ್ತಲಿ ದೆವಾಚಿ ಇಚ್ಚಾ ಹೊತ್ತಿ. ಅಧ್ಯಾಯವನ್ನು ನೋಡಿ |