Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಈಗಲಾದರೋ ದೇವರು ನಿಮ್ಮನ್ನು ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, ನಿರಪರಾಧಿಗಳನ್ನಾಗಿಯೂ ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಈಗಲಾದರೋ ಯೇಸುಕ್ರಿಸ್ತರ ದೈವಿಕ ಮರಣದ ಫಲವಾಗಿ ನಿಮಗೂ ದೇವರಿಗೂ ಸಂಧಾನ ನಡೆದಿದೆ. ಹೀಗೆ ದೇವರು ನಿಮ್ಮನ್ನು ತಮ್ಮ ಸನ್ನಿಧಿಗೆ ಸೇರಿಸಿಕೊಳ್ಳಲು ನೀವು ಪವಿತ್ರರೂ ನಿಷ್ಕಳಂಕರೂ ದೋಷರಹಿತರೂ ಆಗಿರುವಂತೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆತನು ನಿಮ್ಮನ್ನು ಸಹ ತನ್ನ ಕುಮಾರನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ಈಗ ಸಂಧಾನಪಡಿಸಿಕೊಂಡಿದ್ದಾನೆ; ಮತ್ತು ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಈಗಲಾದರೋ ಕ್ರಿಸ್ತನು ಶರೀರಧಾರಿಯಾಗಿ ಈ ಲೋಕದಲ್ಲಿದ್ದಾಗ ತನ್ನ ಪ್ರಾಣವನ್ನೇ ಕೊಡುವುದರ ಮೂಲಕ ನಿಮಗೂ ದೇವರಿಗೂ ಸಂಧಾನ ಮಾಡಿದ್ದಾನೆ. ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿಷ್ಕಳಂಕರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ದೇವರ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂಬುದೇ ಕ್ರಿಸ್ತನ ಉದ್ದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಈಗಲಾದರೋ ದೇವರು ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿಂದಾರಹಿತರನ್ನಾಗಿಯೂ ತಮ್ಮ ಸನ್ನಿಧಿಯಲ್ಲಿ ನಿಲ್ಲಿಸಿಕೊಳ್ಳುವಂತೆ, ಕ್ರಿಸ್ತನ ಮಾಂಸದೇಹದ ಮರಣದಿಂದ ಈಗ ನಿಮ್ಮನ್ನು ಸಂಧಾನಪಡಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅತ್ತಾ ತರಬಿ ಕ್ರಿಸ್ತ್ ಮಾನುಸ್ ಹೊವ್ನ್ ಹ್ಯಾ ಜಗಾತ್ ರಾತಾನಾ ಅಪ್ಲೊ ಜಿವ್ ದಿಲ್ಲ್ಯಾ ವೈನಾ ತುಮ್ಕಾ ಅನಿ ದೆವಾಕ್ ರಾಜಿ ಕರ್‍ಲ್ಯಾನ್, ತುಮ್ಕಾ ಪವಿತ್ರ್, ನಿರ್ದೊಸಿ ಅನಿ ಚುಕ್ ನಸಲ್ಲೆ ಸಾರ್ಕೆ ಕರುನ್, ದೆವಾಚ್ಯಾ ಇದ್ರಾಕ್ ಇಬೆ ಕರುಚೆ ಮನ್ತಲಿ ಇಚ್ಛ್ಯಾ ಹೊಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:22
21 ತಿಳಿವುಗಳ ಹೋಲಿಕೆ  

ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.


ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,


ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.


ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತಿದ್ದೀರಿ. ದೇವರಿಗೆ ಫಲಕೊಡುವುದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತು ಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿದ್ದೀರಿ.


ಯಾಕೆಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿಸಿದ್ದೇನಲ್ಲ.


ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.


ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧರಾಗಿರುವುದಕ್ಕೆ ಕರೆದನು.


ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.


ನೋಡಿರಿ, ಆತನ ದೃಷ್ಟಿಯಲ್ಲಿ ಚಂದ್ರನಿಗಾದರೂ ಕಳೆಯಿಲ್ಲ, ನಕ್ಷತ್ರಗಳೂ ಶುದ್ಧವಲ್ಲ.


ಆಹಾ, ತನ್ನ ದೂತರಲ್ಲಿಯೂ ಆತನು ನಂಬಿಕೆಯಿಡುವುದಿಲ್ಲ, ಆಕಾಶವೂ ಆತನ ದೃಷ್ಟಿಯಲ್ಲಿ ನಿರ್ಮಲವಾಗಿರದು.


ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು. ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.


ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.


ಇವೆಲ್ಲವುಗಳು ದೇವರಿಂದಲೇ ಉಂಟಾದದ್ದು. ದೇವರು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಂಧಾನಪಡಿಸಿಕೊಂಡು, ಸಂಧಾನಮಾಡುವ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ;


ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು