Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅನ್ಯಜನಗಳ ವಿಷಯವಾದ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ ತಿಳಿಸಲಿಕ್ಕೆ ಮನಸ್ಸು ಮಾಡಿಕೊಂಡನು. ಈ ಮರ್ಮವು ಏನಂದರೆ ಕ್ರಿಸ್ತನು ನಿಮ್ಮಲ್ಲಿದ್ದು ಪ್ರಭಾವದ ನಿರೀಕ್ಷೆಗೆ ಆಧಾರಭೂತನಾಗಿರುವದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮಹಿಮಾತಿಶಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲು ದೇವರು ತೀರ್ಮಾನಿಸಿದನು. ಈ ಮಹಾಸತ್ಯವು ಎಲ್ಲಾ ಜನರಿಗಾಗಿ ಪ್ರಕಟವಾಯಿತು. ನಿಮ್ಮಲ್ಲಿರುವ ಕ್ರಿಸ್ತನೇ ಆ ಸತ್ಯವಾಗಿದ್ದಾನೆ. ದೇವರ ಮಹಿಮೆಯಲ್ಲಿ ಪಾಲುಹೊಂದಲು ಆತನೇ ನಮಗಿರುವ ಏಕೈಕ ನಿರೀಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೆಹೂದ್ಯರಲ್ಲದವರಲ್ಲಿ ಆ ರಹಸ್ಯದ ಮಹಿಮೆಯ ಐಶ್ವರ್ಯವು ಎಷ್ಟೆಂಬುದನ್ನು ದೇವರು ತಮ್ಮ ಜನರಿಗೆ ಪ್ರಕಟಿಸುವುದಕ್ಕೆ ಮನಸ್ಸು ಮಾಡಿದ್ದಾರೆ. ಆ ರಹಸ್ಯವು ಏನೆಂದರೆ, ನಿಮ್ಮಲ್ಲಿರುವ ಕ್ರಿಸ್ತ ಯೇಸು ಮಹಿಮೆಯ ನಿರೀಕ್ಷೆಯಾಗಿದ್ದಾರೆ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಹಿಮೆನ್ ಭರುನ್ ಹೊತ್ತೆ ಹೆ ಖರೆ, ದುಸ್ರ್ಯಾ ಲೊಕಾಕ್ನಿ ಕಳ್ವುಕ್ ದೆವಾನ್ ನಿರ್ದಾರ್ ಕರ್‍ಲ್ಯಾನ್, ಹೆ ಮೊಟೆ ಖರೆ ಸಗ್ಳ್ಯಾ ಲೊಕಾಕ್ನಿ ಪರ್ಗಟ್ ಹೊಲೆ. ತುಮ್ಚ್ಯಾಕ್ಡೆ ಹೊತ್ತೊ ಕ್ರಿಸ್ತುಚ್ ತೆ ಖರೆ ಹೊವ್ನ್ ಹಾಯ್ ದೆವಾಚ್ಯಾ ಮಹಿಮೆತ್ ವಾಟೊ ಘೆವ್ಕ್ ತೊಚ್ ಅಮ್ಕಾ ಹೊತ್ತೊ ಎಕ್ ಬರೊಸೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:27
39 ತಿಳಿವುಗಳ ಹೋಲಿಕೆ  

ನಾನು ನನ್ನ ತಂದೆಯಲ್ಲಿಯೂ, ನೀವು ನನ್ನಲ್ಲಿಯೂ ಮತ್ತು ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.


ಆದರೆ ಕ್ರಿಸ್ತನು ನಿಮ್ಮಲ್ಲಿರುವುದಾದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ, ಆತ್ಮವು ನೀತಿಯ ದೆಸೆಯಿಂದ ಜೀವಸ್ವರೂಪವಾಗಿರುತ್ತದೆ.


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.


ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.


ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?


ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.


ಆ ಸಹಾಯಕನು ಯಾರೆಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.


ನನ್ನ ಪ್ರಿಯರಾದ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಾನು ನಿಮಗಾಗಿ ಪ್ರಸವವೇದನೆ ಪಡುತ್ತಿರುವೆನು.


ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.


ನಮ್ಮ ರಕ್ಷಕನಾದ ದೇವರ ನಮ್ಮ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತ ಯೇಸುವಿನ ಆಜ್ಞೆಯ ಮೇರೆಗೆ ನೇಮಿಸಲ್ಪಟ್ಟ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು


ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ.


ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.


ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.


ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.


ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ. ಇನ್ನೂ ತಿಳಿಸುವೆನು. ಏಕೆಂದರೆ, ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ಮತ್ತು ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ” ಎಂದನು.


ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ.


ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿದಿದ್ದಾನೋ ಅವನು ನನ್ನಲ್ಲಿ ನೆಲೆಸಿರುತ್ತಾನೆ; ನಾನು ಅವನಲ್ಲಿ ನೆಲೆಸಿರುತ್ತೇನೆ.


ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.


ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು.


ಮತ್ತು ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.


ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.


ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ.


ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.


‘ಇಗೋ ಇಲ್ಲಿ ಇದೆ, ಅಗೋ ಅಲ್ಲಿ ಅದೆ’ ಎಂದು ಹೇಳುವುದಕ್ಕಾಗದು. ದೇವರ ರಾಜ್ಯವು ನಿಮ್ಮಲ್ಲಿಯೇ ಅದೆ ಎಂದು ತಿಳಿದುಕೊಳ್ಳಿರಿ” ಎಂದು ಹೇಳಿದನು.


ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.


ಕ್ರಿಸ್ತನ ಮುಖಾಂತರ ನಮ್ಮನ್ನು ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ.


ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.


ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?


ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ವಿಶ್ವಾಸಾರ್ಹವಾದದ್ದೂ ಸ್ಥಿರವಾದದ್ದೂ ಆದ ಲಂಗರವಾಗಿದೆ. ಅದು ಅತಿ ಪರಿಶುದ್ಧ ಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು