Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಾವು ಆತನನ್ನು ಪ್ರಸಿದ್ಧಿಪಡಿಸುವವರಾಗಿ ಸಕಲರಿಗೂ ಬುದ್ಧಿಹೇಳುತ್ತಾ ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವದಕ್ಕೆ ಪ್ರಯತ್ನಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದ್ದರಿಂದಲೇ ನಾವು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುವವರಾಗಿದ್ದೇವೆ. ಪ್ರತಿಯೊಬ್ಬರನ್ನೂ ಬಲಪಡಿಸುವುದಕ್ಕಾಗಿ ಪ್ರತಿಯೊಬ್ಬರಿಗೂ ಉಪದೇಶಿಸುವುದಕ್ಕಾಗಿ ನಮ್ಮ ಜ್ಞಾನವನ್ನೆಲ್ಲಾ ಉಪಯೋಗಿಸುತ್ತೇವೆ. ಪ್ರತಿಯೊಬ್ಬರನ್ನು ಕ್ರಿಸ್ತನಲ್ಲಿ ಸಂಪೂರ್ಣ ಆತ್ಮಿಕರನ್ನಾಗಿ ಮಾಡಿ ದೇವರ ಸನ್ನಿಧಿಗೆ ತರಲು ಪ್ರಯತ್ನಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಈ ಕ್ರಿಸ್ತ ಯೇಸುವನ್ನೇ ನಾವು ಸಾರುವವರಾಗಿದ್ದೇವೆ; ಪ್ರತಿಯೊಬ್ಬರೂ ಕ್ರಿಸ್ತ ಯೇಸುವಿನಲ್ಲಿ ಪರಿಪಕ್ವತೆಯುಳ್ಳವರಾಗಿ ಸಮರ್ಪಿಸುವಂತೆ, ಪ್ರತಿಯೊಬ್ಬರನ್ನೂ ಎಚ್ಚರಿಸಿ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬರಿಗೂ ಬೋಧಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತಸೆ ಹೊವ್ನುಚ್ ಅಮಿ ಕ್ರಿಸ್ತಾಚ್ಯಾ ವಿಶಯಾತ್ ಲೊಕಾಕ್ನಿ ಕಳ್ವುತಲೆ ಹೊವ್ನ್ ಹಾಂವ್. ಹರ್ ಎಕ್ಲ್ಯಾಕ್ಬಿ ಉಮ್ಮೆದ್ ಭರುಕ್ ಅನಿ ಹರ್ ಎಕ್ಲ್ಯಾಕ್ಬಿ ಶಿಕ್ವುಸಾಟ್ನಿ ಅಮ್ಚಿ ಬುದ್ದ್ ಫುರಾ ವಾಪರ್ತಾಂವ್, ಹರ್ ಎಕ್ಲ್ಯಾಕ್ಬಿ ಕ್ರಿಸ್ತಾಕ್ಡೆ ಫುರಾ ಆತ್ಮಿಕ್ ಸಾರ್ಕೆ ಕರುನ್ ದೆವಾಚ್ಯಾ ಇದ್ರಾಕ್ ಹಾನುಕ್ ಖಟ್ಪಟ್ ಕರ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:28
54 ತಿಳಿವುಗಳ ಹೋಲಿಕೆ  

ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ದಯಪಾಲಿಸುವೆನು; ಅವರು ನಿಮ್ಮನ್ನು ಜ್ಞಾನ ಮತ್ತು ವಿವೇಕಗಳಿಂದ ಪೋಷಿಸುವರು.


ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.


ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.


ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.


ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ.


ಈಗಲಾದರೋ ದೇವರು ನಿಮ್ಮನ್ನು ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, ನಿರಪರಾಧಿಗಳನ್ನಾಗಿಯೂ ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ.


ಯಾಕೆಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿಸಿದ್ದೇನಲ್ಲ.


ನಮ್ಮನ್ನೇ ನಾವು ಪ್ರಚಾರಮಾಡಿಕೊಳ್ಳದೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಘೋಷಿಸುತ್ತೇವೆ.


ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.


ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು.


ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಪರಿಪೂರ್ಣರನ್ನಾಗಿ ಮಾಡಿದ್ದಾನೆ.


ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು.


ಆತನು ಎಲ್ಲಾ ದೊರೆತನಗಳಿಗೂ ಹಾಗೂ ಅಧಿಕಾರಿಗಳಿಗೂ ತಲೆಯಾಗಿರುವುದರಿಂದ ಆತನಲ್ಲಿದ್ದುಕೊಂಡೇ ನೀವು ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ.


ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು


ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ


ನಾವು ಕ್ರಿಸ್ತನ ಸುವಾರ್ತೆಯನ್ನು ಸಾರುತ್ತಾ ಇತರರಿಗಿಂತ ಮೊದಲು ನಿಮ್ಮ ಬಳಿಗೆ ಬಂದದ್ದರಿಂದ ನಿಮ್ಮ ಮೇಲೆ ಅಧಿಕಾರವಿಲ್ಲದವರಂತೆ ಮೇರೆಯನ್ನು ಅತಿಕ್ರಮಿಸಿಹೋಗುತ್ತಿಲ್ಲ.


ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೆಂದು ಸಾರುತ್ತಿರುವಲ್ಲಿ, ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನವೇ ಇಲ್ಲವೆಂದು ಹೇಳುವುದಾದರೂ ಹೇಗೆ?


ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.


ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ಪವಿತ್ರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿವೇಚಿಸಿ ತಿಳಿದುಕೊಳ್ಳುತ್ತಾನೆ; ಆದರೆ ಅವನಿಗೆ ಯಾರೂ ವಿವೇಚಿಸಿ ತಿಳಿಸಿಕೊಡಬೇಕಾಗಿಲ್ಲ.


ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ.


ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,


ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ “ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ” ಸ್ಥಿರಪಡಿಸಿದನು.


ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.


ಅವನು ಕೂಡಲೇ, ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವುದಕ್ಕೆ ಪ್ರಾರಂಭಮಾಡಿದನು.


ಫಿಲಿಪ್ಪನು ಸಮಾರ್ಯವೆಂಬ ಪಟ್ಟಣಕ್ಕೆ ಹೋಗಿ ಕ್ರಿಸ್ತನ ವಿಷಯವಾಗಿ ಅಲ್ಲಿರುವವರಿಗೆ ಪ್ರಚುರಪಡಿಸಿದನು.


ಹಿರೀಸಭೆಯ ಎದುರಿನಿಂದ ಹೊರಟುಹೋಗಿ, ಪ್ರತಿದಿನ ಎಡೆಬಿಡದೆ ದೇವಾಲಯದಲ್ಲಿಯೂ, ಮನೆಮನೆಗಳಲ್ಲಿಯೂ, ಉಪದೇಶಮಾಡುತ್ತಾ ಕ್ರಿಸ್ತನಾದ ಯೇಸುವಿನ ಕುರಿತು ಶುಭವರ್ತಮಾನವನ್ನು ಸಾರುತ್ತಾ ಇದ್ದರು.


ಪುನರುಜ್ಜೀವನದ ಕಾಲಗಳು ಒದಗಿ ಆತನು ನಿಮಗೆ ನೇಮಕವಾಗಿರುವ ಕ್ರಿಸ್ತನಾದ ಯೇಸುವನ್ನು ಕಳುಹಿಸಿಕೊಡುವನು.


ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದನು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?


ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರ ಕಿವಿ ಮುಚ್ಚಲ್ಪಟ್ಟಿವೆ. ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.


ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು.


ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ.


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಇದೆ ಎಂದು ಪರಿಗಣಿಸಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ.


ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮಗೆ ಬುದ್ಧಿ ಹೇಳುವುದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.


“ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ.


ಅವರಲ್ಲಿ ಕುಪ್ರದ್ವೀಪದವರು ಕೆಲವರೂ, ಕುರೇನ್ಯದವರು ಕೆಲವರೂ, ಅಂತಿಯೋಕ್ಯಕ್ಕೆ ಬಂದು, ಗ್ರೀಕರೊಂದಿಗೆ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಸಾರಿದರು.


“ಆಹಾ, ದಂಡನೆಯ ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.


ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.


“ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಮತ್ತು ಪಂಚಾಯತರನ್ನೂ ನೇಮಿಸು. ಅವರು ಹೊಳೆಯಾಚೆಯ ಇಸ್ರಾಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.


ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ.


ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು