Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲದಿಂದ ಇದಕ್ಕೊಸ್ಕರವೇ ಶ್ರಮಿಸಿ ಹೋರಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನನ್ನನ್ನು ಚೇತನಗೊಳಿಸುತ್ತಿರುವ ಯೇಸುಕ್ರಿಸ್ತರ ಶಕ್ತಿಯಿಂದ ಈ ಗುರಿಯನ್ನು ಸಾಧಿಸಲು ಶ್ರಮವಹಿಸಿ ಹೋರಾಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲವನ್ನು ಪ್ರಯೋಗಮಾಡಿ ಇದಕ್ಕೋಸ್ಕರವೇ ಹೋರಾಡುತ್ತೇನೆ, ಪ್ರಯಾಸಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಕ್ರಿಸ್ತನು ನನಗೆ ನೀಡಿರುವ ಬಲದಿಂದ ಇದಕ್ಕೋಸ್ಕರವೇ ಕೆಲಸ ಮಾಡುತ್ತೇನೆ ಮತ್ತು ಹೋರಾಡುತ್ತೇನೆ. ಆ ಬಲವೇ ನನ್ನ ಜೀವನದಲ್ಲಿ ಕಾರ್ಯಮಾಡುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನನ್ನಲ್ಲಿ ಬಲದಿಂದ ಕಾರ್ಯ ಮಾಡುವ ಕ್ರಿಸ್ತನ ಶಕ್ತಿಗೆ ಅನುಸಾರವಾಗಿ, ನಾನೂ ಸಹ ಪ್ರಯಾಸ ಪಡುತ್ತಾ ಈ ಗುರಿಗಾಗಿ ಹೋರಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಹೆಚ್ಯಾಸಾಟಿಚ್ ಕ್ರಿಸ್ತಾನ್ ದಿಲ್ಲ್ಯಾ ಬಳಾನ್ ಕಾಮ್ ಕರ್‍ತಾ ಅನಿ ಹೊರಾಟ್ ಕರ್‍ತಾ, ತೊ ಬಳುಚ್ ಮಾಜ್ಯಾ ಜಿವನಾತ್ ಕಾಮ್ ಕರುನ್ಗೆತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:29
28 ತಿಳಿವುಗಳ ಹೋಲಿಕೆ  

ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.


ಮತ್ತು ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ.


ದೇವರು ತನ್ನ ಶಕ್ತಿಯ ಪ್ರಯೋಗದ ಮೂಲಕ ನನಗೆ ಕೊಡಲ್ಪಟ್ಟ ಆತನ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.


ಯಾಕೆಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಮತ್ತು ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ.


ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಹಾಗೂ ನನ್ನನ್ನು ಮುಖಾಮುಖಿಯಾಗಿ ನೋಡದಿರುವವರೆಲ್ಲರಿಗಾಗಿಯೂ,


ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ, ನಿಮ್ಮಲ್ಲಿ ಯಾರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನ ಮಾಡಿದೆವು.


ಸಹೋದರರೇ, ನಾವು ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳು ದುಡಿಯುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು. ಆ ನಮ್ಮ ಕಷ್ಟವೂ ಪ್ರಯಾಸಗಳು ನಿಮ್ಮ ನೆನಪಿನಲ್ಲಿರಲಿ.


ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.


ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು.


ಆದರೆ ಈ ಎಲ್ಲವುಗಳಲ್ಲಿ ಕಾರ್ಯ ಮಾಡುವ ಆ ಒಬ್ಬ ಆತ್ಮನೇ ವರಗಳನ್ನೆಲ್ಲಾ ತನ್ನ ಚಿತ್ತಾನುಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುವವನಾಗಿದ್ದಾನೆ.


ಮತ್ತೊಬ್ಬರು ಹಾಕಿದ ಅಸ್ತಿವಾರದ ಮೇಲೆ ಕಟ್ಟಬಾರದೆಂದು ಮನಸ್ಸಿನಲ್ಲಿ ತೀರ್ಮಾನಿಸಿ ಕ್ರಿಸ್ತನ ಹೆಸರನ್ನು ತಿಳಿಸಿದ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವುದಿಲ್ಲವೆಂಬುದಾಗಿ ನಿಶ್ಚಯಮಾಡಿಕೊಂಡೆನು.


ನೀನು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡರೂ ಬಿದ್ದುಹೋಗದೆ ಇದ್ದುದನ್ನು ನಾನು ಬಲ್ಲೆನು.


ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ.


ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನ ಕುರಿತಾಗಿ ಕೇಳುವಂಥ ಅದೇ ಹೋರಾಟವು ನಿಮಗೂ ಉಂಟು.


ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ


ಕ್ರಿಸ್ತನು ನನ್ನಲ್ಲಿ ಮಾತನಾಡುತ್ತಾನೆಂಬುವುದಕ್ಕೆ ನೀವು ಸಾಕ್ಷಿ ಕೇಳಿದ್ದರಿಂದ ನಾನು ಹೀಗೆ ಹೇಳುತ್ತೇನೆ. ಆತನು ನಿಮ್ಮನ್ನು ಕುರಿತು ದುರ್ಬಲನಾಗಿರದೆ ಶಕ್ತನೇ ಆಗಿದ್ದಾನೆ. ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ.


ಅವರು ಕ್ರಿಸ್ತನ ಸೇವಕರೋ? ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ ಕ್ರಿಸ್ತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಯ ವಾಸವನ್ನು ಅನುಭವಿಸಿದ್ದೇನೆ, ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ. ಅನೇಕ ಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡಿದ್ದೇನೆ.


ದೊಂಬಿ, ಕಲಹ, ಸೆರೆಮನೆ, ಶಿಕ್ಷೆ ಇವುಗಳನ್ನು ಅನುಭವಿಸಿದ್ದೇವೆ. ಮೈಮುರಿದು ಕೆಲಸ ಮಾಡಿದ್ದೇವೆ. ನಿದ್ದೆಗೆಟ್ಟು ಬಳಲಿದ್ದೇವೆ; ಹಸಿವಿನಲ್ಲಿ ಸೊರಗಿದ್ದೇವೆ; ಈ ಎಲ್ಲಾ ವಿಷಯಗಳಲ್ಲಿ ಬಹು ಸಮಾಧಾನವನ್ನು ತೋರಿಸಿದ್ದೇವೆ.


ಆದ್ದರಿಂದ ನಾವು ದೇಹವೆಂಬ ಮನೆಯಲ್ಲಿದ್ದರೂ ಸರಿಯೇ ಅಥವಾ ಅದನ್ನು ಬಿಟ್ಟಿದ್ದರೂ ಸರಿಯೇ, ಕರ್ತನನ್ನು ಮೆಚ್ಚಿಸುವವರಾಗಿರಬೇಕೆಂಬುದೇ ನಮ್ಮ ಗುರಿಯಾಗಿದೆ.


ಕಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು ಆದರೆ ಸರ್ವರಲ್ಲಿಯೂ ಸರ್ವ ಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ.


ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಬಲವಾಗಿ ವಿಜ್ಞಾಪಿಸಿಕೊಳ್ಳಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನಿಂದಾಗುವ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಆತನು ಅವರಿಗೆ, “ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ.


ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ ರಕ್ತವನ್ನು ಸುರಿಸುವಷ್ಟು ಹೋರಾಡಲಿಲ್ಲವಲ್ಲ.


ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟಿದ್ದೀರಿ, ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ಆತನ ಜೊತೆಯಲ್ಲಿ ನೀವು ಎದ್ದು ಬಂದಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು