Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀವು ಕ್ರಿಸ್ತ ಯೇಸುವಿನಲ್ಲಿ ಇಟ್ಟಿರುವ ನಂಬಿಕೆ ಹಾಗು ದೇವಜನರೆಲ್ಲರಲ್ಲಿ ನೀವು ಇಟ್ಟಿರುವ ಪ್ರೀತಿಯ ಬಗ್ಗೆ ನಾವು ಕೇಳಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾವು ದೇವರಿಗೆ ಸ್ತೋತ್ರ ಮಾಡಲು ಕಾರಣವೇನೆಂದರೆ ಕ್ರಿಸ್ತ ಯೇಸುವಿನಲ್ಲಿ ನಿಮಗಿರುವ ನಂಬಿಕೆಯ ಬಗ್ಗೆ, ದೇವಜನರೆಲ್ಲರ ಮೇಲೆ ನಿಮಗಿರುವ ಪ್ರೀತಿಯ ಬಗ್ಗೆ ಕೇಳಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ, ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆ ಹಾಗೂ ದೇವಜನರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿ ನಾವು ಕೇಳಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಕಶ್ಯಾಕ್ ಮಟ್ಲ್ಯಾರ್ ಕ್ರಿಸ್ತಾ ಜೆಜುಚ್ಯಾ ವರ್‍ತಿ ತುಮ್ಕಾ ಹೊತ್ತೊ ವಿಶ್ವಾಸ್ ಅನಿ ದೆವಾಚ್ಯಾ ಲೊಕಾಂಚ್ಯಾ ವರ್‍ತಿ ತುಮ್ಕಾ ಹೊತ್ತ್ಯಾ ಪ್ರೆಮಾಚ್ಯಾ ವಿಶಯಾತ್ ಅಮಿ ಆಯಿಕ್ಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:4
18 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಮತ್ತು ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯ ವಿಷಯವನ್ನು ಕೇಳಿ,


ಸಹೋದರರೇ, ನಾವು ಯಾವಾಗಲೂ ನಿಮ್ಮನ್ನು ಕುರಿತು ದೇವರಿಗೆ ಕೃತಜ್ಞತಾಸ್ತುತಿ ಮಾಡುವುದಕ್ಕೆ ಬದ್ಧರಾಗಿದ್ದೇವೆ, ಹಾಗೆ ಮಾಡುವುದು ಯೋಗ್ಯವಾಗಿದೆ. ಏಕೆಂದರೆ ನೀವು ನಂಬಿಕೆಯಲ್ಲಿ ಬಹಳ ಅಭಿವೃದ್ಧಿ ಹೊಂದುತ್ತಾ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚಾಗುತ್ತಿದೆ.


ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.


ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.


ನನ್ನ ಪ್ರಾರ್ಥನೆಗಳಲ್ಲಿ ಯಾವಾಗಲೂ ನಿನ್ನನ್ನು ನೆನಪು ಮಾಡಿಕೊಂಡು ನಾನು ದೇವರಿಗೆ ಸ್ತೋತ್ರವನ್ನು ಸಲ್ಲಿಸುತ್ತೇನೆ, ನಿನಗಾಗಿ ವಿಜ್ಞಾಪನೆ ಮಾಡುತ್ತೇನೆ.


ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.


ದೇವರ ಆಜ್ಞೆ ಯಾವುದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ.


ಆದರೆ ತಿಮೊಥೆಯನು ನಿಮ್ಮ ಬಳಿಯಿಂದ ಬಂದು ನಿಮ್ಮ ನಂಬಿಕೆ ಮತ್ತು ಪ್ರೀತಿಯ ಕುರಿತಾಗಿ ಶುಭವರ್ತಮಾನವನ್ನು ಹೇಳಿ, ನೀವು ನಮ್ಮನ್ನು ಯಾವಾಗಲೂ ಪ್ರೀತಿಪೂರ್ವಕವಾಗಿ ನೆನಪುಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ಸಹ ನಮ್ಮನ್ನು ನೋಡುವುದಕ್ಕಾಗಿ ಅಪೇಕ್ಷಿಸುತ್ತಿದ್ದೀರೆಂಬುದನ್ನು ತಿಳಿಸಿದ್ದಾನೆ.


ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,


ಅವನ ಬರುವಿಕೆಯಿಂದ ಮಾತ್ರವಲ್ಲದೆ ನಿಮ್ಮಿಂದ ಅವನು ಬಹಳ ಸಮಾಧಾನವನ್ನು ಹೊಂದಿದೆನೆಂದೂ, ನಿಮ್ಮ ಹಂಬಲ, ನಿಮ್ಮ ದುಃಖ, ನನ್ನ ಮೇಲಿರುವ ನಿಮ್ಮ ಕಾಳಜಿ; ಇವುಗಳನ್ನು ನಮಗೆ ತಿಳಿಸಿದಾಗ ನಾನು ಇನ್ನೂ ಹೆಚ್ಚಾಗಿ ಸಂತೋಷಪಟ್ಟೆನು.


ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.


ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು