Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸತ್ಯ ವಾಕ್ಯದ, ಅಂದರೆ ಶುಭಸಂದೇಶದ ಮೂಲಕ ನೀವು ಕೇಳಿ ತಿಳಿದಂಥ ಹಾಗೂ ನಿರೀಕ್ಷಿಸುವಂಥ ಸೌಭಾಗ್ಯವನ್ನು ಸ್ವರ್ಗಲೋಕದಲ್ಲಿ ನಿಮಗಾಗಿ ಕಾದಿರಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5-6 ನಿಮಗೆ ನಿರೀಕ್ಷೆ ಇರುವುದರಿಂದಲೇ ಕ್ರಿಸ್ತನಲ್ಲಿ ನಂಬಿಕೆ ಇಟ್ಟಿದ್ದೀರಿ ಮತ್ತು ದೇವಜನರನ್ನು ಪ್ರೀತಿಸುತ್ತೀರಿ. ನೀವು ನಿರೀಕ್ಷಿಸುವಂಥವುಗಳು ನಿಮಗೋಸ್ಕರ ಪರಲೋಕದಲ್ಲಿ ಸಿದ್ಧ ಮಾಡಲ್ಪಟ್ಟಿವೆ ಎಂಬುದು ನಿಮಗೆ ತಿಳಿದಿದೆ. ನಿಮಗೆ ತಿಳಿಸಲಾದ ಸತ್ಯವಾಕ್ಯವನ್ನು ಅಂದರೆ ಸುವಾರ್ತೆಯನ್ನು ನೀವು ಕೇಳಿದಾಗ ಈ ನಿರೀಕ್ಷೆಯ ಬಗ್ಗೆ ತಿಳಿದುಕೊಂಡಿರಿ. ನೀವು ಸುವಾರ್ತೆಯನ್ನು ಕೇಳಿ ದೇವರ ಕೃಪೆಯ ಸತ್ಯಾರ್ಥವನ್ನು ತಿಳಿದುಕೊಂಡಂದಿನಿಂದ ಸುವಾರ್ತೆಯು ನಿಮ್ಮಲ್ಲಿ ವೃದ್ಧಿಯಾಗುತ್ತಿದೆ ಮತ್ತು ಜನರಿಗೆ ಆಶೀರ್ವಾದಕರವಾಗಿದೆ. ಅದೇ ರೀತಿ ಪ್ರಪಂಚದ ಎಲ್ಲಾ ಕಡೆಗಳಲ್ಲೂ ಸುವಾರ್ತೆಯು ವೃದ್ಧಿಯಾಗುತ್ತಿದೆ ಮತ್ತು ಆಶೀರ್ವಾದಕರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಲಾದ ನಿರೀಕ್ಷೆಯಿಂದಲೇ ಈ ವಿಶ್ವಾಸವೂ ಪ್ರೀತಿಯೂ ಬುಗ್ಗೆಯಾಗಿ ಒದಗಿಬರುತ್ತದೆ. ಈ ನಿರೀಕ್ಷೆಯ ಬಗ್ಗೆ ಸುವಾರ್ತೆಯ ಸತ್ಯ ಸಂದೇಶವನ್ನು ಮೊದಲೇ ನೀವು ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಸರ್‍ಗಾತ್ ತುಮ್ಚ್ಯಾಸಾಟ್ನಿ ಥವಲ್ಲ್ಯಾ ಹೊತ್ತಾ ಬರೊಸ್ಯಾಚ್ಯಾ ವಿಶಯಾತ್ ಬರಿ ಖಬರ್ ಮನ್ತಲ್ಯಾ ಖರ್‍ಯಾ ವೈನಾ ತುಮಿ ಅದ್ದಿಚ್ ಆಯಿಕ್ಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:5
33 ತಿಳಿವುಗಳ ಹೋಲಿಕೆ  

ನೀವು ಸಹ ನಿಮ್ಮ ರಕ್ಷಣಾ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ.


ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.


ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.


ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.


ಹೊಸದಾಗಿ ಹುಟ್ಟಿದ ಶಿಶುಗಳಂತೆ ನೀವು ದೇವರ ವಾಕ್ಯವೆಂಬ ಶುದ್ಧವಾದ ಆತ್ಮೀಕ ಹಾಲನ್ನು ಬಯಸಿರಿ. ಆದರಿಂದ ರಕ್ಷಣೆಯಲ್ಲಿ ಬೆಳೆಯುವಿರಿ.


ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.


ಕ್ರಿಸ್ತನಲ್ಲಿ ನಮಗಿರುವ ನಿರೀಕ್ಷೆಯು ಕೇವಲ ಈ ಬದುಕಿಗೆ ಮಾತ್ರ ಸೀಮಿತವಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ಹೀನರಾಗುತ್ತೇವೆ.


ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ ಉತ್ತಮವಾದ ಹೊಸ ನಿರೀಕ್ಷೆಯೊಂದು ಕೊಡಲ್ಪಟ್ಟಿದೆ.


ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.


ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ.


ನಾವಾದರೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ ನಿರೀಕ್ಷೆ ಸಫಲವಾಗುವುದೆಂದು ಎದುರುನೋಡುವವರಾಗಿದ್ದೇವೆ.


ಹೇಗೆಂದರೆ, ಕ್ರಿಸ್ತನಲ್ಲಿ ದೇವರು ಜಗತ್ತನ್ನು ತನ್ನೊಡನೆ ಸಂಧಾನಮಾಡಿಕೊಳ್ಳುತ್ತಿದ್ದಾನೆ; ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೇ, ಈ ಸಂಧಾನದ ಸಂದೇಶವನ್ನು ಎಲ್ಲರಿಗೂ ಸಾರುವಂತೆ ಅದನ್ನು ನಮ್ಮ ಮೇಲೆ ಹೊರಿಸಿದ್ದಾನೆ.


ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ, ಒಂದು ಪಾಲು ಫರಿಸಾಯರೂ, ಇರುವುದನ್ನು ಪೌಲನು ಕಂಡು; “ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು; ಸತ್ತವರು ಪುನರುತ್ಥಾನಹೊಂದುವರು ಎಂಬ ನಿರೀಕ್ಷೆಯ ನಿಮಿತ್ತವಾಗಿ ನಾನು ವಿಚಾರಣೆಮಾಡಲ್ಪಡುತ್ತಿದ್ದಾನೆ” ಎಂದು ಕೂಗಿದನು.


ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ.


ಹೀಗಿರುವುದರಿಂದ, ನಂಬಿಕೆ, ನಿರೀಕ್ಷೆ, ಪ್ರೀತಿ ಈ ಮೂರೇ ನಿಲ್ಲುತ್ತದೆ. ಇವುಗಳಲ್ಲಿ ದೊಡ್ಡದು ಪ್ರೀತಿಯೇ.


ಇದಲ್ಲದೆ ನೀತಿವಂತರಿಗೂ ಮತ್ತು ಅನೀತಿವಂತರಿಗೂ ಪುನರುತ್ಥಾನವಾಗುವುದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ.


ಸದ್ಭಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ, ಆಶ್ರಿತರಿಗೋಸ್ಕರ ನೀನು ಎಲ್ಲರ ಮುಂದೆ ಮಾಡಿದ ಉಪಕಾರಗಳೂ ಎಷ್ಟೋ ವಿಶೇಷವಾಗಿವೆ.


ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು.


ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,


ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.


“ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ, ನಿನ್ನ ಹೃದಯದಲ್ಲಿಯೂ ಇದೆ.” ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.


ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.


ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.


“ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.


ಸತ್ಯವಾಕ್ಯ, ದೇವರ ಮಹತ್ವ ಇವುಗಳಿಂದ ಕೂಡಿದವರಾಗಿ, ಎಡಬಲಗೈಗಳಲ್ಲಿ ನೀತಿಯೆಂಬ ಆಯುಧಗಳನ್ನು ಧರಿಸಿಕೊಂಡಿದ್ದೇವೆ.


ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರ ಅಧೀನಕ್ಕೆ ಒಂದು ಗಳಿಗೆಯೂ ಒಳಪಡಲಿಲ್ಲ.


ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, “ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?”


ಆತನಿಂದಲೇ ಕೇಳಿ ಆತನಲ್ಲಿಯೇ ಉಪದೇಶವನ್ನು ಹೊಂದಿದ್ದೀರಲ್ಲಾ.


ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ನಿಮಗೆ ದೊರೆತಿರುವ ಸತ್ಯದಲ್ಲಿ ಸ್ಥಿರವಾಗಿದ್ದರೂ ಅವುಗಳನ್ನು ನಿಮಗೆ ನೆನಪಿಸಿಕೊಡುವುದಕ್ಕೆ ನಾನು ಯಾವಾಗಲೂ ಸಿದ್ಧವಾಗಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು