Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿನದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟಂತೆ ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೇವಾನುಗ್ರಹದ ಸತ್ಯಾರ್ಥವನ್ನು ನೀವು ತಿಳಿದ ದಿನದಿಂದಲೂ ನಿಮ್ಮಲ್ಲಿ ಶುಭಸಂದೇಶವು ಹೇಗೆ ಫಲಭರಿತವಾಗುತ್ತಿದೆಯೋ ಹಾಗೆ ಈ ಶುಭಸಂದೇಶವು ಜಗತ್ತಿನ ಎಲ್ಲೆಡೆಯೂ ಹಬ್ಬಿಹರಡುತ್ತಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವು ದೇವರ ಕೃಪೆಯನ್ನು ಕುರಿತು ಸತ್ಯಾರ್ಥವನ್ನು ಕೇಳಿ ತಿಳುಕೊಂಡ ದಿವಸದಿಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟು ವೃದ್ಧಿಯಾಗುತ್ತಾ ಬಂದ ಪ್ರಕಾರ ಲೋಕದಲ್ಲೆಲ್ಲಾ ಹಬ್ಬಿ ಫಲಕೊಟ್ಟು ವೃದ್ಧಿಯಾಗುತ್ತಾ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ಸುವಾರ್ತೆಯು ಲೋಕದಲ್ಲೆಲ್ಲಾ ಹರಡಿದಂತೆ, ನಿಮಗೂ ತಲುಪಲು ನೀವು ಸಹ ಅದನ್ನು ಕೇಳಿ ದೇವರ ಕೃಪೆಯನ್ನು ನಿಜವಾಗಿಯೂ ತಿಳಿದುಕೊಂಡ ದಿವಸದಿಂದ ನಿಮ್ಮಲ್ಲಿಯೂ ಫಲಕೊಟ್ಟು ವೃದ್ಧಿಯಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತುಮಿ ಖರೆಪಾನಾತ್ ದೆವಾಚಿ ಕಾಮಾ ಆಯ್ಕುನ್ ಕಳ್ವುನ್ ಘೆಟಲ್ಲ್ಯಾ ದಿಸಾಕ್ನಾ, ತುಮ್ಚ್ಯಾತ್ ಕಶೆ ಫಳ್ ದಿತಾ ತಸೆ ಸಗ್ಳ್ಯಾ ಜಗಾತ್ಬಿ ಫಳ್ ದಿಯ್ತ್ ವಾಡ್ವಳ್ಕಿ ಹೊವ್ಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:6
36 ತಿಳಿವುಗಳ ಹೋಲಿಕೆ  

ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.


ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.


ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.


ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.


ಪ್ರಿಯರೇ, ನನ್ನ ಕೆಲಸವು ಇತರ ಅನ್ಯಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂಬುದು ನೀವು ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.


ಅದಕ್ಕಿಂತ ಹೆಚ್ಚಾಗಿ, ನಿಜವಾದ ಆರಾಧಕರು ತಂದೆಯನ್ನು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ, ಅದುದರಿಂದ, ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾನೆ.


ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.


ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ಬೆಳೆದು ಬಂದು ಫಲಕೊಟ್ಟವು; ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರುವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.”


ಇದಲ್ಲದೆ ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.


ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ, ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ.


ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.


ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.


ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಮತ್ತು ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ.


ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,


ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ, ನಿಮ್ಮ ಲೆಕ್ಕಕ್ಕೆ ಸಮೃದ್ಧಿಯುಂಟಾಗುವ ಫಲವನ್ನೇ ಅಪೇಕ್ಷಿಸುತ್ತೇನೆ.


ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.


ನೀವು ನಿಮ್ಮ ಹೃನ್ಮನಗಳನ್ನು ನವೀಕರಿಸಿ, ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ.


ಆತನಿಂದಲೇ ಕೇಳಿ ಆತನಲ್ಲಿಯೇ ಉಪದೇಶವನ್ನು ಹೊಂದಿದ್ದೀರಲ್ಲಾ.


ನಾವು ಕ್ರಿಸ್ತನ ಸುವಾರ್ತೆಯನ್ನು ಸಾರುತ್ತಾ ಇತರರಿಗಿಂತ ಮೊದಲು ನಿಮ್ಮ ಬಳಿಗೆ ಬಂದದ್ದರಿಂದ ನಿಮ್ಮ ಮೇಲೆ ಅಧಿಕಾರವಿಲ್ಲದವರಂತೆ ಮೇರೆಯನ್ನು ಅತಿಕ್ರಮಿಸಿಹೋಗುತ್ತಿಲ್ಲ.


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.


ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಸುತ್ತಮುತ್ತ ಪ್ರಯಾಣಿಸಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ಪೂರೈಸಿದ್ದೇನೆ.


ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.


ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂದಿತು.


ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.


ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.


ನಿಮಗೋಸ್ಕರ ನಿರ್ವಹಿಸುವುದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕಾರ್ಯಭಾರವನ್ನು ನೀವು ಕೇಳಿದ್ದೀರಿ,


ನಾನು ಈ ಕೆಲಸವನ್ನು ಮುಗಿಸಿಕೊಂಡು ಈ ಪ್ರೀತಿಯ ಫಲವನ್ನು ಅಲ್ಲಿಯವರ ವಶಕ್ಕೆ ಸಂಪೂರ್ಣವಾಗಿ ಕೊಟ್ಟ ಮೇಲೆ ನಿಮ್ಮ ಮಾರ್ಗವಾಗಿ ಸ್ಪೇನ್ ದೇಶಕ್ಕೆ ಹೋಗುವೆನು.


ಇವರು ನಿಜವಾಗಿ ಪ್ರತಿಷ್ಠಿರಾಗಬೇಕೆಂದು, ನನ್ನನ್ನು ನಾನೇ ಇವರಿಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು