ಕೊಲೊಸ್ಸೆಯವರಿಗೆ 2:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ ಪಾಪಸ್ವಭಾವವನ್ನು ತೆಗೆದುಹಾಕುವುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಕ್ರಿಸ್ತಯೇಸುವಿನಲ್ಲಿಯೇ ನೀವು ಸುನ್ನತಿಯನ್ನು ಪಡೆದಿದ್ದೀರಿ. ಇದು ಶಾರೀರಿಕ ಸುನ್ನತಿಯಲ್ಲ, ಪಾಪಮಯ ಸ್ವಭಾವವನ್ನು ಕಿತ್ತೊಗೆಯುವ ಸುನ್ನತಿ. ಸ್ವಯಂ ಕ್ರಿಸ್ತಯೇಸುವೆ ಯೋಜಿಸಿದ ಸುನ್ನತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆತನು ಎಲ್ಲಾ ದೊರೆತನಗಳಿಗೂ ಅಧಿಕಾರಿಗಳಿಗೂ ಶಿರಸ್ಸು. ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದಿರಿ; ಈ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಇದು ಪಾಪಾಧೀನಸ್ವಭಾವವನ್ನು ವಿಸರ್ಜಿಸುವದೇ; ಇದೇ ಕ್ರಿಸ್ತೀಯ ಸುನ್ನತಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಕ್ರಿಸ್ತನಲ್ಲಿ ನೀವು ಬೇರೊಂದು ಸುನ್ನತಿಯನ್ನು ಪಡೆದಿರುವಿರಿ. ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ. ಅಂದರೆ ನಿಮ್ಮ ಪಾಪಾಧೀನಸ್ವಭಾವದಿಂದ ನಿಮಗೆ ಬಿಡುಗಡೆಯಾಯಿತು. ಇದುವೇ ಕ್ರಿಸ್ತನು ಮಾಡುವ ಸುನ್ನತಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನೀವು ಕ್ರಿಸ್ತ ಯೇಸುವಿನಲ್ಲಿ ಸ್ವೀಕರಿಸಿದ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಅದು ನಿಮ್ಮ ಮಾಂಸಭಾವವನ್ನು ಆಳುವ ಇಡೀ ಸ್ವಾರ್ಥವನ್ನೇ ಬಿಟ್ಟುಬಿಡುವ ಆತ್ಮಿಕ ಸುನ್ನತಿಯಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಕ್ರಿಸ್ತಾಕ್ಡೆ ತುಮಿ ದುಸ್ರಿ ಸುನ್ನತ್ ಘೆಟ್ಲ್ಯಾಶಿ. ತಿ ಸುನ್ನತ್ ಹಾತಿನ್ ಕರಲ್ಲಿ ನ್ಹಯ್; ಕ್ರಿಸ್ತಾನ್ ಕರಲ್ಲಿ ಸುನ್ನತ್ ಮಟ್ಲ್ಯಾರ್, ತುಮ್ಚ್ಯಾ ಪಾಪಾಚ್ಯಾ ಅದಿಕಾರಾತ್ನಾ ಸುಟ್ಕಾ. ಅಧ್ಯಾಯವನ್ನು ನೋಡಿ |