ಕೊಲೊಸ್ಸೆಯವರಿಗೆ 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹೀಗಿರಲಾಗಿ, ತಿಂಡಿತೀರ್ಥದ ವಿಷಯದಲ್ಲಾಗಲಿ, ಹಬ್ಬಹುಣ್ಣಿಮೆಗಳ ವಿಚಾರದಲ್ಲಾಗಲಿ, ಸಬ್ಬತ್‍ದಿನವನ್ನು ಆಚರಿಸುವ ರೀತಿಯಲ್ಲಾಗಲಿ ನಿಮ್ಮನ್ನು ದೋಷಿಗಳೆಂದು ಯಾರೂ ದೂರದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಹೀಗಿರುವದರಿಂದ ತಿಂದು ಕುಡಿಯುವ ವಿಷಯದಲ್ಲಿಯೂ ಹಬ್ಬ ಅಮವಾಸ್ಯೆ ಸಬ್ಬತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ಎಣಿಸಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಹೀಗಿರುವುದರಿಂದ ತಿಂದು ಕುಡಿಯುವುದರ ಬಗ್ಗೆ ಇಲ್ಲವೆ ಯೆಹೂದ್ಯರ ಪದ್ಧತಿಗಳ (ಹಬ್ಬಗಳು, ಅಮಾವಾಸ್ಯೆಯ ಆಚರಣೆಗಳು, ಸಬ್ಬತ್ ದಿನಗಳು) ಬಗ್ಗೆ ನಿಮಗೆ ನಿಯಮಗಳನ್ನು ರೂಪಿಸಲು ಯಾರಿಗೂ ಅವಕಾಶ ಕೊಡಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಹೀಗಿರಲಾಗಿ, ಅನ್ನಪಾನಗಳ ವಿಷಯದಲ್ಲಿಯೂ ಹಬ್ಬ ಅಮಾವಾಸ್ಯೆ ಸಬ್ಬತ್ ದಿನ ಮುಂತಾದವುಗಳ ವಿಷಯದಲ್ಲಿಯೂ ಯಾರೂ ನಿಮ್ಮನ್ನು ತೀರ್ಪು ಮಾಡದಿರಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಅಶೆ ರಾತಾನಾ, ಖಾತಲ್ಯಾ ಅನಿ ಫಿತಲ್ಯಾ ವಿಶಯಾತ್, ನಾತರ್ ತೆಂಚ್ಯಾ ಪದ್ದತಿಯಾಂಚಿ ಸನಾ, ಆಂವ್ಸೆಚೆ ಕಾರೆವ್, ಸಬ್ಬತಾಚಿ ದಿಸಾ, ಹ್ಯಾ ನಿಯಮಾ ಘೆವ್ನ್ ಕೊನ್ಬಿ ಝಡ್ತಿ ಕರುಚ್ ನ್ಹಯ್. ಅಧ್ಯಾಯವನ್ನು ನೋಡಿ |
ಉತ್ಸವಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮ ಪಶು, ಧಾನನೈವೇದ್ಯ ಪಾನನೈವೇದ್ಯ, ಇವುಗಳನ್ನು ಒದಗಿಸುವುದು ಅರಸನ ಕರ್ತವ್ಯವಾಗಿದೆ; ಇಸ್ರಾಯೇಲ್ ವಂಶದ ದೋಷ ನಿವಾರಣೆಗಾಗಿ ಅವನು ದೋಷಪರಿಹಾರಕ ಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮ ಪಶು, ಸಮಾಧಾನ ಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.
ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪು ಮಾಡಿದ ಹಾಗಾಗುವುದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ.