Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರ ಹೃದಯಗಳು ಉತ್ತೇಜನಗೊಂಡು, ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇದರಿಂದ ಅವರು ಅಂತರಂಗದಲ್ಲಿ ಉತ್ತೇಜನಗೊಂಡು ಪ್ರೀತಿಯಲ್ಲಿ ಒಂದಾಗಬೇಕು; ನೈಜ ಅರಿವಿನಿಂದ ಅವರಿಗೆ ಪೂರ್ಣಜ್ಞಾನ ಲಭಿಸಬೇಕು ಎಂಬುದೇ ನನ್ನ ಆಶಯ. ಆಗ ಅವರು ದೇವರ ರಹಸ್ಯವನ್ನು, ಅಂದರೆ ಕ್ರಿಸ್ತಯೇಸುವನ್ನು ಅರಿತುಕೊಳ್ಳಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2-3 ಹೇಗಂದರೆ ನೀವೆಲ್ಲರು ಪ್ರೀತಿಯಿಂದ ಹೊಂದಿಕೆಯಾಗಿದ್ದು ಬುದ್ಧಿಪೂರ್ವಕ ನಿಶ್ಚಯವೆಂಬ ಭಾಗ್ಯವನ್ನು ಪಡೆದು ದೇವರು ತಿಳಿಸಿರುವ ಮರ್ಮವನ್ನು ಅಂದರೆ ತನ್ನಲ್ಲೇ ಜ್ಞಾನವಿದ್ಯಾಸಂಬಂಧವಾದ ನಿಕ್ಷೇಪಗಳನ್ನೆಲ್ಲಾ ಅಡಗಿಸಿಕೊಂಡಿರುವ ಕ್ರಿಸ್ತನನ್ನು ತಿಳುಕೊಂಡವರಾಗಿ ಹೃದಯದಲ್ಲಿ ದೃಢವಾಗಿರಬೇಕೆಂಬ ಕುತೂಹಲವು ನನಗುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವರೆಲ್ಲರೂ ಆಂತರ್ಯದಲ್ಲಿ ಉತ್ತೇಜಿತರಾಗಿ ಪ್ರೀತಿಯಿಂದ ಒಂದಾಗಿರಬೇಕೆಂದು ಮತ್ತು ತಿಳುವಳಿಕೆಯಿಂದ ಬರುವ ದೃಢನಂಬಿಕೆಯಲ್ಲಿ ಶ್ರೀಮಂತರಾಗಿರಬೇಕೆಂದು ಆಶಿಸುತ್ತೇನೆ. ಅಂದರೆ ದೇವರ ನಿಗೂಢ ಸತ್ಯವನ್ನು ಅವರು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ಸ್ವತಃ ಕ್ರಿಸ್ತನೇ ಆ ಸತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ಹೃದಯದಲ್ಲಿ ಉತ್ತೇಜನಗೊಂಡು, ಪ್ರೀತಿಯಲ್ಲಿ ಒಂದಾಗಿ, ದೇವರ ರಹಸ್ಯವಾಗಿರುವ ಕ್ರಿಸ್ತ ಯೇಸುವನ್ನು ತಿಳಿದುಕೊಳ್ಳುವಂತೆ ಪೂರ್ಣಜ್ಞಾನದ ಸರ್ವ ಐಶ್ವರ್ಯವನ್ನು ದೃಢವಾಗಿ ಹೊಂದಬೇಕೆಂಬುದೇ ನನ್ನ ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕಶೆ ಮಟ್ಲ್ಯಾರ್, ತೆನಿ ಸಗ್ಳೆ ಭುತ್ತುರ್‍ಲ್ಯಾ ಮನಾತ್ ಉಮ್ಮೆದಿನ್ ಭುರುನ್ ಪ್ರೆಮಾನ್ ಎಕ್ ಹೊವ್ಚೆ ಅನಿ ಖರ್ಯಾ ಸಮ್ಜನಿಕ್ನಾ ಯೆತಲ್ಯಾ ಘಟ್ಟ್ ವಿಶ್ವಾಸಾತ್ ಸಾವ್ಕಾರ್ ಹೊವ್ಚೆ ಮನುನ್ ಆಶಾ ಕರ್‍ತಾ, ಮಟ್ಲ್ಯಾರ್, ದೆವಾಚೆ ಮೊಟೆ ಖರೆ ತೆನಿ ಫುರಾ ಕಳ್ವುನ್ ಘೆವ್ಚೆ; ಕ್ರಿಸ್ತುಚ್ ತೆ ಖರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:2
58 ತಿಳಿವುಗಳ ಹೋಲಿಕೆ  

ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.


ನೀವು ನಮ್ಮ ಕುರಿತು ತಿಳಿದುಕೊಳ್ಳುವಂತೆ, ಅವನು ನಿಮ್ಮ ಹೃದಯಗಳನ್ನು ಉರಿದುಂಬಿಸುವಂತೆ,


ನೀವು ನಮ್ಮ ಸಂಗತಿಗಳನ್ನು ತಿಳಿದುಕೊಳ್ಳುವಂತೆಯೂ, ಅವನು ನಿಮ್ಮ ಹೃದಯಗಳನ್ನು ಸಂತೈಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.


ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ.


ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,


ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.


ಕ್ರಿಸ್ತನಿಂದ ಪ್ರೋತ್ಸಾಹ, ಪ್ರೀತಿಯ ಸಾಂತ್ವನ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವುದಾದರೆ,


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು.


ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.


ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ” ಎಂದನು.


ನೀನು ದೇವರಿಂದ ಬಂದ ಅತಿಪರಿಶುದ್ಧನೆಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ” ಎಂದನು.


ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ನಿರೀಕ್ಷೆಯ ಸಂಪೂರ್ಣ ನಿಶ್ಚಯತ್ವವನ್ನು ಹೊಂದುವುದಕ್ಕಾಗಿ ಅಂತ್ಯದವರೆಗೂ ನೀವು ಅದೇ ಶ್ರದ್ಧೆಯನ್ನು ತೋರಿಸಬೇಕೆಂದು ನಾನು ಬಹಳವಾಗಿ ಅಪೇಕ್ಷಿಸುತ್ತೇವೆ.


ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.


ನಾವು ಇಹಲೋಕದ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವ ವರಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದವರಾಗಿದ್ದೇವೆ.


ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.


ತಂದೆಗೆ ಇರುವುದೆಲ್ಲಾ ನನ್ನದು. ಆದುದರಿಂದಲೇ ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಸುವನೆಂದು ನಾನು ಹೇಳಿದೆನು.


ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದೆ ಇದ್ದರೂ, ಈ ಕಾರ್ಯಗಳನ್ನಾದರೂ ನಂಬಿರಿ. ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ, ತಂದೆಯಲ್ಲಿ ನಾನು ಇದ್ದೇನೆಂತಲೂ ನಿಮಗೆ ತಿಳಿಯುವುದು ಮತ್ತು ಮನದಟ್ಟಾಗುವುದು” ಎಂದನು.


ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು.


ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯು ಇಂದಿನವರೆಗೂ ಕೆಲಸ ಮಾಡುತ್ತಿದ್ದಾನೆ, ನಾನೂ ಕೆಲಸ ಮಾಡುತ್ತೇನೆ” ಎಂದು ಹೇಳಿದನು.


ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.


ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು, ನಾನು ಲೋಕದಲ್ಲಿ ಪ್ರೀತಿ, ನೀತಿ ಮತ್ತು ನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬುವುದಕ್ಕೇ ಹೆಚ್ಚಳಪಡಲಿ; ಪ್ರೀತಿ, ನೀತಿ ಮತ್ತು ನ್ಯಾಯಗಳೇ ನನಗೆ ಆನಂದ” ಎಂದು ಯೆಹೋವನು ನುಡಿಯುತ್ತಾನೆ.


“ನನ್ನ ಸಂತೈಸಿರಿ, ಸಂತೈಸಿರಿ” ಎಂದು ನಿಮ್ಮ ದೇವರು ಹೇಳುತ್ತಾನೆ.


ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು.


ಆಹಾ, ಸಹೋದರರು ಒಂದಾಗಿರುವುದು, ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು!


ಇದಲ್ಲದೆ ಸಾಕ್ಷಿ ಕೊಡುವವರು ಮೂವರಿದ್ದಾರೆ.


ನಾವು ಸತ್ಯಕ್ಕೆ ಸೇರಿದವರೆಂಬುದು ಇದರಿಂದಲೇ ನಮಗೆ ತಿಳಿಯುತ್ತದೆ, ನಮ್ಮ ಹೃದಯವು ದೇವರ ಸಮಕ್ಷಮದಲ್ಲಿ ದೋಷರಹಿತವಾಗಿರುತ್ತದೆ.


ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.


ಆದ್ದರಿಂದ ಸಹೋದರರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ಉತ್ತೇಜನಪಡಿಸುವುದಕ್ಕೂ ನಮ್ಮ ಸಹೋದರನೂ, ಕ್ರಿಸ್ತನ ಸುವಾರ್ತೆಯ ಕಾರ್ಯದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.


ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಮತ್ತು ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ.


ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.


ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.


ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.


ಸನ್ಮಾನ್ಯನಾದ ಥೆಯೊಫಿಲನೇ, ನಮ್ಮ ಮಧ್ಯೆ ನೆರವೇರಿರುವ ಘಟನೆಗಳನ್ನು ಕ್ರಮವಾಗಿ ಬರೆಯುವುದಕ್ಕೆ ಅನೇಕರು ಪ್ರಯತ್ನಿಸಿದ್ದಾರೆ.


ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?


ನೀವೆಲ್ಲರೂ ಒಬ್ಬೊಬ್ಬರಾಗಿ ಪ್ರವಾದಿಸಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಪ್ರೋತ್ಸಾಹ ಹೊಂದುವರು.


ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.


ಆತನು ಮರ್ಮವನ್ನು ಪ್ರಕಟಣೆಯಿಂದ ನನಗೆ ತಿಳಿಯಪಡಿಸಿದನೆಂದು ಅದನ್ನು ಕುರಿತು ನಾನು ಮೊದಲೇ ನಿಮಗೆ ಸಂಕ್ಷಿಪ್ತವಾಗಿ ಬರೆದಿದ್ದೇನೆ.


ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ,


ಈ ರಹಸ್ಯವಾದ ಸತ್ಯವಾಕ್ಯವು ಹಿಂದಿನ ಯುಗಯುಗಗಳಿಂದಲೂ, ತಲತಲಾಂತರಗಳಿಂದಲೂ ಮರೆಯಾಗಿತ್ತು, ಆದರೆ ಈಗ ದೇವರು ಅದನ್ನು ತನ್ನ ದೇವಜನರಿಗೆ ಪ್ರಕಟಿಸಿದ್ದಾನೆ.


ಇಂಥವನು ಕ್ರಿಸ್ತನೆಂಬ ತಲೆಯೊಂದಿಗೆ ಸಂಬಂಧ ಕಳೆದುಕೊಂಡವನಾಗಿದ್ದಾನೆ, ತಲೆಯಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಪೋಷಣೆಯನ್ನು ಹೊಂದಿ, ಒಂದಾಗಿ ಜೋಡಿಸಲ್ಪಟ್ಟ ದೇಹವಾಗಿ, ದೇವರು ಕೊಡುವ ಅಭಿವೃದ್ಧಿಯಿಂದ ಬೆಳೆಯುತ್ತಾ ಬರುತ್ತದೆ.


ಕ್ರಿಸ್ತನ ಮರ್ಮವನ್ನು ಅಂದರೆ ಸುರ್ವಾತೆಯನ್ನು ನಾವು ಸಾರುವುದಕ್ಕೆ ದೇವರು ನಮಗೆ ಬಾಗಿಲನ್ನು ತೆರೆದು ಕೊಡುವುದಕ್ಕಾಗಿ ನಮಗೋಸ್ಕರವಾಗಿ ಪ್ರಾರ್ಥಿಸಿರಿ. ಈ ಸುರ್ವಾತೆಯ ನಿಮಿತ್ತವೇ ನಾನು ಸೆರೆಯಲ್ಲಿದ್ದೇನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು