Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮನಿಂದ ನಿಮ್ಮೊಂದಿಗಿದ್ದು ನೀವು ಕ್ರಮಬದ್ಧವಾಗಿ ನಡೆಯುವುದನ್ನು ಮತ್ತು ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವುದನ್ನೂ ನೋಡಿ ಸಂತೋಷಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಾನು ಶಾರೀರಿಕವಾಗಿ ನಿಮ್ಮಿಂದ ದೂರವಿದ್ದರೂ ಆತ್ಮಿಕವಾಗಿ ನಿಮ್ಮೊಂದಿಗಿದ್ದೇನೆ. ನಿಮ್ಮ ಕ್ರಮಬದ್ಧ ನಡತೆಯನ್ನೂ ಕ್ರಿಸ್ತಯೇಸುವಿನಲ್ಲಿ ನಿಮಗಿರುವ ಸ್ಥಿರವಿಶ್ವಾಸವನ್ನೂ ನೋಡುವಾಗ ನನಗೆ ಅಮಿತಾನಂದವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮದಿಂದ ನಿಮ್ಮೊಂದಿಗಿದ್ದು ನೀವು ಕ್ರಮವಾಗಿ ನಡೆಯುವದನ್ನೂ ಕ್ರಿಸ್ತನಂಬಿಕೆಯಲ್ಲಿ ದೃಢವಾಗಿ ನಿಂತಿರುವದನ್ನೂ ನೋಡಿ ಸಂತೋಷಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅಲ್ಲಿ ನಾನು ನಿಮ್ಮೊಡನೆ ಇರದಿದ್ದರೂ ನನ್ನ ಮನಸ್ಸು ನಿಮ್ಮೊಡನಿರುತ್ತದೆ. ನಿಮ್ಮ ಕ್ರಮಬದ್ಧವಾದ ನಡತೆಯನ್ನು ನೋಡಲು ಮತ್ತು ಕ್ರಿಸ್ತನಲ್ಲಿ ಇಟ್ಟಿರುವ ದೃಢನಂಬಿಕೆಯನ್ನು ಅರಿಯಲು ಬಹಳ ಸಂತೋಷಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನು ಶಾರೀರಿಕವಾಗಿ ನಿಮ್ಮಿಂದ ದೂರವಾಗಿದ್ದರೂ ಆತ್ಮದಲ್ಲಿ ನಿಮ್ಮೊಂದಿಗಿದ್ದು ನೀವು ಎಷ್ಟು ಕ್ರಮವುಳ್ಳವರೆಂಬುದನ್ನೂ, ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಶ್ವಾಸ ಎಷ್ಟು ದೃಢವಾಗಿದೆ ಎಂಬುದನ್ನೂ, ನೋಡಿ ನನಗೆ ಆನಂದವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಮಿಯಾ ತುಮ್ಚ್ಯಾ ವಾಂಗ್ಡಾ ರ್‍ಹಾಯ್ ನಸ್ಲ್ಯಾರ್ಬಿ; ಮಾಜೊ ಆತ್ಮೊ ತುಮ್ಚ್ಯಾ ವಾಂಗ್ಡಾ ರ್‍ಹಾತಾ, ತುಮಿ ಕ್ರಿಸ್ತಾಚ್ಯಾ ವಿಶ್ವಾಸಾತ್ ಘಟ್ಟ್ ಇಬೆ ಹೊತ್ತೆ ಬಗುನ್ ಲೈ ಮಿಯಾ ಕುಶಿ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:5
19 ತಿಳಿವುಗಳ ಹೋಲಿಕೆ  

ಸಹೋದರರೇ, ನಾವಂತೂ ಸ್ವಲ್ಪಕಾಲ ಮಾತ್ರ ನಿಮ್ಮಿಂದ ದೂರವಾಗಿದ್ದರೂ ಹೃದಯದಲ್ಲಿ ಅಗಲದೆ ನಿಮ್ಮನ್ನು ಮುಖಾಮುಖಿಯಾಗಿ ನೋಡುವುದಕ್ಕೆ ಅತಿಯಾದ ಆಸೆಯಿಂದ ಬಹಳ ಪ್ರಯತ್ನಿಸಿದೆವು.


ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ.


ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.


ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ.


ಆದರೆ ಎಲ್ಲವೂ ಯೋಗ್ಯವಾಗಿಯೂ ಹಾಗೂ ಕ್ರಮದಿಂದಲೂ ನಡೆಯಲಿ.


ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ವಿಶ್ವಾಸಾರ್ಹವಾದದ್ದೂ ಸ್ಥಿರವಾದದ್ದೂ ಆದ ಲಂಗರವಾಗಿದೆ. ಅದು ಅತಿ ಪರಿಶುದ್ಧ ಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದಾಗಿದೆ.


ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಮಗೆ ಜೀವಕಳೆ.


ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.


ಅವರ ಹೃದಯವು ಆತನಲ್ಲಿ ನೆಲೆಗೊಳ್ಳಲಿಲ್ಲ; ಅವರು ಆತನ ನಿಬಂಧನೆಯನ್ನು ನಿಷ್ಠೆಯಿಂದ ಕೈಗೊಳ್ಳಲಿಲ್ಲ.


ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ.


ಇದಲ್ಲದೆ ಯಾಜಕರೂ ಯೆಹೋವನಿಗೆ ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನ ಯಜ್ಞಗಳ ಕೊಬ್ಬು ಹಾಗು ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು.


ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಹಾಗೂ ನನ್ನನ್ನು ಮುಖಾಮುಖಿಯಾಗಿ ನೋಡದಿರುವವರೆಲ್ಲರಿಗಾಗಿಯೂ,


ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ ನೀವು ಸೇರಿಬಂದದ್ದು ನ್ಯಾಯ ತೀರ್ಪಿಗೊಳಗಾಗುವುದಕ್ಕೆ ಕಾರಣವಾಗಬಾರದು. ಇನ್ನುಳಿದಿರುವ ಸಂಗತಿಗಳನ್ನು ನಾನು ಬಂದ ನಂತರ ಆದೇಶಿಸುತ್ತೇನೆ.


ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.


ಆಕೆಯು ತನ್ನ ಜೊತೆಯಲ್ಲಿ ಬರುವುದಕ್ಕೆ ನಿರ್ಧರಿಸಿದ್ದಾಳೆಂದು ನವೊಮಿಯು ತಿಳಿದು ಸುಮ್ಮನಾದಳು.


ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.


ಆಗ ಯೆಹೋವನು ಮೋಶೆಗೆ, “ಒಬ್ಬೊಬ್ಬ ಕುಲಾಧಿಪತಿಯು ತನಗೆ ನೇಮಕವಾದ ದಿನದಲ್ಲಿ ಯಜ್ಞವೇದಿಯ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಬೇಕು” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು