Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ಕರ್ತನಾದ ಯೇಸು ಕ್ರಿಸ್ತನನ್ನು ಸ್ವೀಕರಿಸಿದಂತೆಯೇ ಆತನಲ್ಲಿದ್ದವರಾಗಿ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀವು ಕ್ರಿಸ್ತಯೇಸುವನ್ನು ಪ್ರಭುವಾಗಿ ಸ್ವೀಕರಿಸಿರುವುದರಿಂದ, ಅವರೊಡನೆ ಐಕ್ಯತೆಯಿಂದ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದದರಿಂದ ನೀವು ಕರ್ತನಾದ ಯೇಸುವೆಂಬ ಕ್ರಿಸ್ತನನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪ್ರಭುವಾದ ಕ್ರಿಸ್ತ ಯೇಸುವನ್ನು ನೀವು ಸ್ವೀಕರಿಸಿಕೊಂಡಿರುವುದರಿಂದ ಆತನಲ್ಲಿ ನೆಲೆಗೊಂಡಿದ್ದು ಜೀವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದ್ದರಿಂದ ನೀವು ಕ್ರಿಸ್ತ ಯೇಸುವನ್ನು ಕರ್ತ ಎಂದು ಅಂಗೀಕರಿಸಿದಂತೆಯೇ ಅವರಲ್ಲಿ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಧನಿ ಕ್ರಿಸ್ತ್ ಜೆಜುಕ್ ತುಮಿ ಜೆಜು ಕ್ರಿಸ್ತಾಕ್ ಧನಿ ಮನುನ್ ಘೆಟಲ್ಲ್ಯಾಸಾಟ್ನಿ ತೆಚ್ಯಾಕ್ಡೆ ಎಕ್ ಹೊವ್ನ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:6
22 ತಿಳಿವುಗಳ ಹೋಲಿಕೆ  

ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,


ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವುದಕ್ಕೆ ಬದ್ಧನಾಗಿದ್ದಾನೆ.


ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.


ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.


ನಾವು ನೋಡುತ್ತಾ ನಡೆಯದೇ, ನಂಬುವವರಾಗಿಯೇ ನಡೆಯುತ್ತೇವೆ.


ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.


ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.


ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.


ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ.


ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಹೊರಟುಬಂದ ಬಹು ದೇಶಗಳವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವವು.


ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.”


“ನಿಮ್ಮನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುವವನಾಗಿದ್ದಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವೀಕರಿಸುವವನಾಗಿದ್ದಾನೆ.


ಯಾಕೋಬಿನ ವಂಶದವರೇ ಬನ್ನಿರಿ, ಯೆಹೋವನ ಜ್ಞಾನದ ಬೆಳಕಿನಲ್ಲಿ ನಡೆಯೋಣ.


ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.


ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು