Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರಲ್ಲಿ ಸ್ಥಿರವಾಗಿರಿ. ಅವರನ್ನೇ ಅವಲಂಬಿಸಿ ನಿಮ್ಮ ಬಾಳೆಂಬ ಸೌಧವನ್ನು ನಿರ್ಮಿಸಿರಿ. ನೀವು ಕಲಿತುಕೊಂಡಿರುವಂತೆ ನಿಮ್ಮ ವಿಶ್ವಾಸ ಅವರಲ್ಲಿ ದೃಢವಾಗಿರಲಿ. ಕೃತಜ್ಞತೆಯು ನಿಮ್ಮಲ್ಲಿ ಉಕ್ಕೇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆತನಲ್ಲಿ ಬೇರೂರಿಕೊಂಡು ಭಕ್ತಿವೃದ್ಧಿಯನ್ನು ಹೊಂದಿ ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರಮಾಡುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕ್ರಿಸ್ತನನ್ನು ಮಾತ್ರ ನೀವು ಅವಲಂಬಿಸಬೇಕು. ಜೀವವೂ ಶಕ್ತಿಯೂ ಆತನಿಂದಲೇ ಬರುತ್ತವೆ. ನಿಮಗೆ ಸತ್ಯವನ್ನು ಉಪದೇಶಿಸಲಾಗಿದೆ. ನೀವು ಆ ಸತ್ಯ ಬೋಧನೆಯಲ್ಲಿ ದೃಢವಾಗಿ ನೆಲೆಗೊಂಡಿರಬೇಕು ಮತ್ತು ದೇವರಿಗೆ ಸಲ್ಲತಕ್ಕ ಕೃತಜ್ಞತಾಸ್ತುತಿಯಿಂದ ತುಂಬಿದವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀವು ಕ್ರಿಸ್ತ ಯೇಸುವಿನಲ್ಲಿ ಬೇರೂರಿದವರಾಗಿಯೂ ಕಟ್ಟಲಾದವರಾಗಿಯೂ ಇದ್ದು, ನಿಮಗೆ ಬೋಧನೆ ನೀಡಿದ ಪ್ರಕಾರ ನಿಮ್ಮ ವಿಶ್ವಾಸದಲ್ಲಿ ಬಲಹೊಂದಿ ಕೃತಜ್ಞತೆಯಿಂದ ತುಂಬಿ ಪ್ರವಾಹಿಸುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಕ್ರಿಸ್ತಾತ್ ತುಮಿ ಖೊಲಾತ್ ಮುಳಾ ಸೊಡುನ್, ತೆಚ್ಯಾ ಭುತ್ತುರ್ ತುಮ್ಚೆ ಜಿವನ್ ಭಾಂದುನ್ ಘೆವಾ. ಅನಿ ತುಮ್ಕಾ ಸಾಂಗಲ್ಲ್ಯಾ ಶಿಕಾಪಾಚ್ಯಾ ಸಾರ್ಕೆ ಕ್ರಿಸ್ತಾಚ್ಯಾ ವಿಶ್ವಾಸಾತ್ ಘಟ್ಟ್ ರ್‍ಹಾವ್ನ್ ದೆವಾಕ್ ಲೈ ಧನ್ಯಾವಾದ್ ದಿತಲೆ ಹೊವ್ನ್ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:7
31 ತಿಳಿವುಗಳ ಹೋಲಿಕೆ  

ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ.


ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ, ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ, ಕ್ಷಾಮದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಅವರು ಸಮಾನವಾಗಿರುವರು.”


ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.


ಸಕಲ ಸತ್ಕಾರ್ಯದಲ್ಲಿಯೂ, ಸದ್ವಾಕ್ಯದಲ್ಲಿಯೂ ದೃಢಪಡಿಸಲಿ.


ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.


ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.


ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,


ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.


ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.


ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,


ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.


ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.


ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.


ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.


ಅವನು ಆಳವಾಗಿ ಅಗೆದು, ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು. ಹೊಳೆಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಚೆನ್ನಾಗಿ ಕಟ್ಟಿರುವುದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು.


ಆತನಿಂದಲೇ ಕೇಳಿ ಆತನಲ್ಲಿಯೇ ಉಪದೇಶವನ್ನು ಹೊಂದಿದ್ದೀರಲ್ಲಾ.


ಪ್ರಿಯರೇ, ನೀವಾದರೋ ನಿಮಗಿರುವ ಅತಿ ಪರಿಶುದ್ಧವಾದ ಕ್ರಿಸ್ತ ನಂಬಿಕೆಯನ್ನು ಆಧಾರವಾಗಿಟ್ಟುಕೊಂಡು ಅಭಿವೃದ್ಧಿಹೊಂದುತ್ತಾ, ಪವಿತ್ರಾತ್ಮಪ್ರೇರಿತರಾಗಿ ಪ್ರಾರ್ಥನೆ ಮಾಡಿರಿ.


ನಮ್ಮನ್ನು ಅಭಿಷೇಕಿಸಿ ಕ್ರಿಸ್ತನ ಅನ್ಯೋನ್ಯತೆಯಲ್ಲಿ ಸೇರಿಸಿ ನಮ್ಮನ್ನು ನಿಮ್ಮೊಂದಿಗೆ ಸ್ಥಿರಪಡಿಸುವವನು ದೇವರೇ.


ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, ನಿಮ್ಮ ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, ಸಂಪೂರ್ಣವಾಗಿ ಸತ್ತ, ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು ಕಡೆಯವರೆಗೂ ದೃಢಪಡಿಸುವನು.


ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು