ಕೊಲೊಸ್ಸೆಯವರಿಗೆ 2:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಪ್ರಪಂಚದ ಪ್ರಬಲ ಶಕ್ತಿಗಳಿಂದಲೂ ಮಾನವ ವಿವೇಚನೆಯ ಶುಷ್ಕತರ್ಕ ಸಿದ್ಧಾಂತಗಳಿಂದಲೂ ಯಾರೂ ನಿಮ್ಮನ್ನು ಮೋಸಗೊಳಿಸಿ ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಇವುಗಳು ಪ್ರಾಪಂಚಿಕ ಪಾರಂಪರ್ಯಕ್ಕೆ ಮತ್ತು ವಿಶ್ವದ ಮೂಲಭೂತ ಶಕ್ತಿಗಳಿಗೆ ಸಂಬಂಧಿಸಿದವುಗಳೇ ಹೊರತು ಯೇಸುಕ್ರಿಸ್ತರಿಗಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನಬೋಧೆಯಿಂದ ನಿಮ್ಮ ಮನಸ್ಸನ್ನು ಕೆಡಿಸಿ ನಿಮ್ಮನ್ನು ವಶಮಾಡಿಕೊಂಡಾರು, ಎಚ್ಚರಿಕೆಯಾಗಿರ್ರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯಾರೂ ನಿಮ್ಮನ್ನು ಮೋಸಕರವಾದ ಮತ್ತು ನಿರರ್ಥಕವಾದ ತತ್ವಜ್ಞಾನ ಬೋಧನೆಯಿಂದ ತಪ್ಪು ದಾರಿಗೆ ನಡೆಸದಂತೆ ಜಾಗ್ರತೆಯಿಂದಿರಿ. ಆ ತತ್ವಜ್ಞಾನಗಳು ಜನರಿಂದ ಬಂದುವೇ ಹೊರತು ಕ್ರಿಸ್ತನಿಂದಲ್ಲ. ಅವು ಈ ಲೋಕದ ಜನರ ನಿರರ್ಥಕ ತತ್ವಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ತತ್ವಜ್ಞಾನವೂ ನಿರರ್ಥಕವೂ ವಂಚನೆಯೂ ಆಗಿರುವ ಮನುಷ್ಯರ ಸಂಪ್ರದಾಯದಿಂದ ನಿಮ್ಮಲ್ಲಿ ಯಾರಾದರೂ ಬಂದು ನಿಮ್ಮನ್ನು ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಅಂಥವರು ಕ್ರಿಸ್ತ ಯೇಸುವನ್ನು ಅನುಸರಿಸದೆ, ಪ್ರಾಪಂಚಿಕ ಬಾಲಬೋಧನೆಗಳನ್ನೂ ಅನುಸರಿಸುವವರಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತುಮ್ಕಾ ಕೊನ್‍ತರಬಿ ಪಸ್ವುನ್ ಫಾಯ್ದ್ಯಾಕ್ ನಸಲ್ಲ್ಯಾ ತತ್ವಜ್ಞಾನಾಂಚ್ಯಾ ಶಿಕಾಪಾಚ್ಯಾ ವಾಟೆಕ್ ಚಲ್ವಿನಸಿ ಸಾರ್ಕೆ ಉಶಾರ್ಕಿನ್ ರ್‍ಹಾವಾ. ತಿ ಹ್ಯಾ ಜಗಾತ್ಲಿ ಫಾಯ್ದ್ಯಾಕ್ ಪಡಿನಸಲ್ಲಿ ಶಿಕಾಪಾ, ಮಾನ್ಸಾಂಚ್ಯಾಕ್ನಾ ಯೆಲ್ಲಿ; ಕ್ರಿಸ್ತಾಕ್ನಾ ನ್ಹಯ್. ಅಧ್ಯಾಯವನ್ನು ನೋಡಿ |
ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.