Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 3:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನುಡಿಯಲ್ಲಾಗಲೀ ನಡೆಯಲ್ಲಾಗಲೀ ನೀವು ಏನು ಮಾಡಿದರೂ ಯೇಸುಸ್ವಾಮಿಯ ಹೆಸರಿನಲ್ಲಿಯೇ ಮಾಡಿರಿ. ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀವು ನುಡಿಯಿಂದಾಗಲಿ, ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಿಮ್ಮ ಪ್ರಭುವಾದ ಯೇಸುವಿಗಾಗಿ ಮಾಡಿರಿ. ನೀವು ಏನು ಮಾಡಿದರೂ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀವು ಮಾತಿನಿಂದಾಗಲಿ, ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ, ಕ್ರಿಸ್ತ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತುಮಿ ಬೊಲ್ತಲೆ, ಚಲ್ತಲೆ, ಕಾಯ್ ಕರ್ಲ್ಯಾಬಿ, ತೆ ಸಗ್ಳೆ ತುಮ್ಚ್ಯಾ ಧನಿಯಾ ಜೆಜುಸಾಟ್ನಿ ಕರಾ, ತುಮಿ ಕಾಯ್ ಕರ್ಲ್ಯಾಬಿ, ಜೆಜುಚ್ಯಾ ವೈನಾ ದೆವಾ ಬಾಬಾಕ್ ಧನ್ಯಾವಾದ್ ದಿವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 3:17
29 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.


ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ.


ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.


ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.


ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.


ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.


ನನ್ನ ಪ್ರಿಯ ಮಕ್ಕಳೇ, ನೀವು ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತವೆ. ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಯುಗಯುಗಾಂತದವರೆಗೆ ನಡೆಯುವೆವು.


ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು.


ನಿನ್ನ ಕೈಚಾಚುತ್ತಿರುವಲ್ಲಿ, ನಿನ್ನ ದಾಸರು, ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು” ಅಂದರು.


ಸಕಲ ಸತ್ಕಾರ್ಯದಲ್ಲಿಯೂ, ಸದ್ವಾಕ್ಯದಲ್ಲಿಯೂ ದೃಢಪಡಿಸಲಿ.


ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.


ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ, ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರೂ ಭಯಭೀತರಾದರು. ಮತ್ತು ಕರ್ತನಾದ ಯೇಸುವಿನ ಹೆಸರು ಪ್ರಖ್ಯಾತಿಗೆ ಬಂದಿತು.


ದೇವಭಕ್ತರಿಗಾಗಿ ಬೆಳಕಿನಲ್ಲಿರುವ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಯಾದ ದೇವರಿಗೆ ಆನಂದಪೂರ್ವಕವಾಗಿ ಕೃತಜ್ಞತಾಸ್ತುತಿಯನ್ನು ಸಲ್ಲಿಸುವವರಾಗಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇನೆ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.


ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ.


ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.


ಯಾರು ದೇವರ ಮಗನನ್ನು ಅಲ್ಲಗಳೆಯುವನೋ ಅವನು ದೇವರಿಗೆ ಸೇರಿದವನಲ್ಲ. ಯಾರು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಯಾದ ದೇವರಿಗೆ ಸೇರಿದವನಾಗಿದ್ದಾನೆ.


ಮೊದಲು ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಮಾಡುತ್ತೇನೆ.


ಹೇಗೆಂದರೆ, ದೇವರು ತನ್ನ ದೇವದೂತರೊಳಗೆ ಯಾರಿಗಾದರೂ ಎಂದಾದರೂ ಈ ರೀತಿಯಾಗಿ ಹೇಳಿದ್ದುಂಟೋ?, “ನೀನು ನನ್ನ ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.” “ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು.”


ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದ ಸಭೆಗೆ ಪೌಲ ಸಿಲ್ವಾನ, ತಿಮೊಥೆಯ ಎಂಬ ನಾವು ಬರೆಯುವುದೇನಂದರೆ, ನಿಮಗೆ ಕೃಪೆಯೂ ಶಾಂತಿಯೂ ಉಂಟಾಗಲಿ.


ಯೆಹೋವನ ಹೆಸರಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿ, ಅದರ ಸುತ್ತಲೂ ಇಪ್ಪತ್ತು ಸೇರು ಬೀಜಬಿತ್ತುವಷ್ಟು ನೆಲವನ್ನು ಅಗೆಸಿ ಕಾಲುವೆ ಮಾಡಿಸಿದನು.


ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು