ಕೊಲೊಸ್ಸೆಯವರಿಗೆ 4:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನನ್ನ ಜೊತೆ ಸೆರೆಯವನಾದ ಅರಿಸ್ತಾರ್ಕನೂ ಮತ್ತು ಬಾರ್ನಬನ ಸೋದರಸಂಬಂಧಿಯಾಗಿರುವ ಮಾರ್ಕನೂ ನಿಮಗೆ ವಂದನೆ ಹೇಳುತ್ತಾರೆ. ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ. ಅವನ ವಿಷಯದಲ್ಲಿ ಅಪ್ಪಣೆಗಳನ್ನು ಹೊಂದಿದ್ದೀರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನನ್ನೊಡನೆ ಸೆರೆಯಾಳಾಗಿರುವ ಅರಿಸ್ತಾರ್ಕನೂ ಬಾರ್ನಬನಿಗೆ ಹತ್ತಿರದ ನೆಂಟನಾದ ಮಾರ್ಕನೂ ನಿಮಗೆ ಶುಭಾಶಯಗಳನ್ನು ಕಳುಹಿಸಿದ್ದಾರೆ. ಮಾರ್ಕನು ನಿಮ್ಮ ಬಳಿಗೆ ಬಂದಾಗ ಅವನನ್ನು ಸ್ವಾಗತಿಸಿರಿ. ಅವನ ವಿಷಯದಲ್ಲಿ ನಿಮಗೆ ಸಲಹೆಗಳನ್ನು ಕೊಡಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನನ್ನ ಜೊತೆಸೆರೆಯವನಾದ ಅರಿಸ್ತಾರ್ಕನೂ ಬಾರ್ನಬನಿಗೆ ದಾಯಾದನಾಗಿರುವ ಮಾರ್ಕನೂ ನಿಮಗೆ ವಂದನೆ ಹೇಳುತ್ತಾರೆ. ಮಾರ್ಕನನ್ನು ಕುರಿತು ಅಪ್ಪಣೆಗಳನ್ನು ಹೊಂದಿದಿರಲ್ಲಾ; ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅರಿಸ್ತಾರ್ಕನು ವಂದನೆ ತಿಳಿಸಿದ್ದಾನೆ. ಅವನೂ ನನ್ನೊಡನೆ ಸೆರೆಯಲ್ಲಿದ್ದಾನೆ. ಬಾರ್ನಬನಿಗೆ ಸೋದರ ಬಾಂಧ್ಯವ್ಯವುಳ್ಳ ಮಾರ್ಕನೂ ವಂದನೆಯನ್ನು ಹೇಳುತ್ತಾನೆ. (ಮಾರ್ಕನ ಬಗ್ಗೆ ನೀವು ಏನು ಮಾಡಬೇಕೆಂಬುದನ್ನು ನಾನು ಈಗಾಗಲೇ ಹೇಳಿದ್ದೇನೆ. ಅವನು ಬಂದರೆ ಅವನನ್ನು ಸ್ವಾಗತಿಸಿರಿ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನನ್ನ ಜೊತೆ ಸೆರೆಯಾಳಾದ ಅರಿಸ್ತಾರ್ಕ, ಬಾರ್ನಬನ ಸಹೋದರಿಯ ಮಗನಾದ ಮಾರ್ಕನು ನಿಮಗೆ ವಂದನೆ ಹೇಳುತ್ತಾರೆ. ಮಾರ್ಕನ ವಿಷಯದಲ್ಲಿ ನೀವು ಮಾರ್ಗದರ್ಶನ ಹೊಂದಿದ್ದೀರಲ್ಲಾ, ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಅರಿಸ್ತಾರ್ಕ್ ಮನ್ತಲ್ಯಾನ್ಬಿ ನಮಸ್ಕಾರ್ ಕಳ್ವುಲಾ, ತೊಬಿ ಮಾಜ್ಯಾ ವಾಂಗ್ಡಾ ಬಂಧಿಖಾನ್ಯಾತ್ ಹಾಯ್, ಬಾರ್ನಾಬಾಸಾಚ್ಯಾ ವಾಂಗ್ಡಾ ಸಂಮದಿಕ್ ಹೊವ್ನ್ ಹೊತ್ತ್ಯಾ ಮಾರ್ಕಾನ್ಬಿ ತುಮ್ಕಾ ನಮಸ್ಕಾರ್ ಸಾಂಗ್ಲಾ, ಮಾರ್ಕಾಚ್ಯಾ ವಿಶಯಾತ್ ತುಮಿ ಕಾಯ್ ಕರುಚೆ ಮನುನ್ ಮಿಯಾ ಅತ್ತಾ ಅತ್ತಾ ಸಾಂಗ್ಲಾ. ತೊ ಯೆಲ್ಯಾರ್ ತೆಕಾ ಸ್ವಾಗತ್ ಕರಾ. ಅಧ್ಯಾಯವನ್ನು ನೋಡಿ |