Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 4:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯುಸ್ತನೆನಿಸಿಕೊಳ್ಳುವ ಯೇಸು ಸಹ ನಿಮಗೆ ವಂದನೆ ಹೇಳುತ್ತಾನೆ. ಸುನ್ನತಿಯವರೊಳಗೆ ಇವರು ಮಾತ್ರವೇ ದೇವರ ರಾಜ್ಯಕ್ಕಾಗಿ ನನ್ನ ಜೊತೆಸೇವಕರಾಗಿದ್ದಾರೆ, ಇವರಿಂದ ನನಗೆ ಆದರಣೆ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯುಸ್ತನೆನಿಸಿಕೊಳ್ಳುವ ಯೇಸು ಕೂಡ ನಿಮಗೆ ವಂದನೆಗಳನ್ನು ತಿಳಿಸಿದ್ದಾನೆ. ಕ್ರೈಸ್ತರಾದ ಯೆಹೂದ್ಯರಲ್ಲಿ ಇವರೇ ನನ್ನೊಡನೆ ದೇವರ ಸಾಮ್ರಾಜ್ಯದ ಏಳಿಗೆಗಾಗಿ ದುಡಿಯುತ್ತಿರುವವರು. ಇವರಿಂದ ನನಗೆ ತುಂಬಾ ಆದರಣೆ ದೊರಕಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೂಸ್ತನೆನಿಸಿಕೊಳ್ಳುವ ಯೇಸು ಸಹ ನಿಮಗೆ ವಂದನೆ ಹೇಳುತ್ತಾನೆ. ಸುನ್ನತಿಯವರೊಳಗೆ ಇವರು ಮಾತ್ರವೇ ದೇವರ ರಾಜ್ಯಾಭಿವೃದ್ಧಿಗಾಗಿ ನನ್ನ ಜೊತೆಗೆಲಸದವರಾಗಿದ್ದಾರೆ; ಇವರಿಂದ ನನಗೆ ಉಪಶಮನ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೇಸುವು (ಯುಸ್ತನೆಂದೂ ಅವನನ್ನು ಕರೆಯುತ್ತಾರೆ.) ಸಹ ವಂದನೆಯನ್ನು ಹೇಳುತ್ತಾನೆ. ಯೆಹೂದ್ಯರಲ್ಲಿ ವಿಶ್ವಾಸಿಗಳಾಗಿರುವ ಇವರು ಮಾತ್ರವೇ ದೇವರ ರಾಜ್ಯಕ್ಕಾಗಿ ನನ್ನ ಜೊತೆ ಕೆಲಸ ಮಾಡುತ್ತಿದ್ದಾರೆ. ಇವರೇ ನನಗೆ ಆದರಣೆಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೂಸ್ತನೆನಿಸಿಕೊಳ್ಳುವ ಯೇಸುವೂ ನಿಮ್ಮನ್ನು ವಂದಿಸುತ್ತಾನೆ. ದೇವರ ರಾಜ್ಯಕ್ಕಾಗಿ ನನ್ನ ಜೊತೆ ಕೆಲಸದವರಾಗಿದ್ದವರಲ್ಲಿ ಇವರು ಮಾತ್ರವೇ ಯೆಹೂದ್ಯರು. ಇವರು ನನಗೆ ತುಂಬಾ ಆದರಣೆಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಯುಸ್ತ್ ಮನ್ತಲ್ಯಾ ನಾವಾಚೊ ಜೊಸ್ವಾ ತುಮ್ಕಾ ನಮಸ್ಕಾರ್ ಸಾಂಗ್ತಾ ಜುದೆವಾಂತ್ನಿ ವಿಶ್ವಾಸಾನ್ ಹೊತ್ತೆ ಹೆನಿಚ್; ದೆವಾಚ್ಯಾ ರಾಜಾಸಾಟ್ನಿ ಮಾಜ್ಯಾ ವಾಂಗ್ಡಾ ಕಾಮ್ ಕರುಕ್ ಲಾಗ್ಲಾತ್, ಹೆನಿಚ್ ಮಾಕಾ ಮಜತ್ ಕರ್‍ತಲೆ ಹೊವ್ನ್ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 4:11
16 ತಿಳಿವುಗಳ ಹೋಲಿಕೆ  

ಪೇತ್ರನು ಯೆರೂಸಲೇಮಿಗೆ ಬಂದಾಗ ಸುನ್ನತಿಮಾಡಿಸಿಕೊಂಡಿದ್ದ ಯೆಹೂದ್ಯರು;


ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೂ, ಸಹೋದರನಾದ ತಿಮೊಥೆಯನೂ, ನಮಗೆ ಪ್ರಿಯನೂ ಜೊತೆ ಸೇವಕನೂ ಆಗಿರುವ ಫಿಲೆಮೋನನೆಂಬ ನಿನಗೂ,


ಅನೇಕರು, ಪ್ರಮುಖವಾಗಿ ಸುನ್ನತಿಹೊಂದಿದವರು, ಬರೀ ಮಾತುಗಾರರೂ, ಮೋಸಗಾರರೂ, ಅಧಿಕಾರಕ್ಕೆ ಒಳಪಡದವರು ಆಗಿದ್ದಾರೆ.


ಪ್ರಿಯ ಸಹೋದರನೂ, ನಂಬಿಗಸ್ತನಾದ ಸೇವಕನೂ ಮತ್ತು ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವನು.


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.


ಇದಲ್ಲದೆ ಸುನ್ನತಿಯವರಲ್ಲಿ ಸುನ್ನತಿಹೊಂದಿದ್ದವರಿಗೆ ಮಾತ್ರವಲ್ಲದೆ, ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವುದಕ್ಕೂ ಮೊದಲೇ ಇದ್ದ ನಂಬಿಕೆಯ ಕ್ರಮವನ್ನು ಅನುಸರಿಸಿ ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ.


ಅವರು ನಾನಾ ಭಾಷೆಗಳನ್ನಾಡುತ್ತಾ, ದೇವರನ್ನು ಕೊಂಡಾಡುತ್ತಾ ಇರುವುದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ನೋಡಿ,


ನನ್ನ ಜೊತೆಗೆಲಸದವರಾದ ಮಾರ್ಕ, ಅರಿಸ್ತಾರ್ಕ, ದೇಮ, ಲೂಕ ಇವರೆಲ್ಲರೂ ನಿನಗೆ ವಂದನೆ ತಿಳಿಸಿದ್ದಾರೆ.


ಸಹೋದರರೇ, ಈ ವಾರ್ತೆಯನ್ನು ಕೇಳಿ ನಮ್ಮ ಎಲ್ಲಾ ಕಷ್ಟದಲ್ಲಿಯೂ ಸಂಕಟದಲ್ಲಿಯೂ ನಿಮ್ಮ ನಂಬಿಕೆಯ ಮುಖಾಂತರ ನಮಗೆ ಸಮಾಧಾನವಾಯಿತು.


ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ಉತ್ತೇಜನಪಡಿಸುವುದಕ್ಕೂ ನಮ್ಮ ಸಹೋದರನೂ, ಕ್ರಿಸ್ತನ ಸುವಾರ್ತೆಯ ಕಾರ್ಯದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.


ನನ್ನ ನಿಜವಾದ ಜೊತೆ ಸೇವಕನೇ, ಆ ಸ್ತ್ರೀಯರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಜೊತೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿವೆ.


ಆದಕಾರಣ ಹಿಂದೊಮ್ಮೆ ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ. ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರೆನ್ನಿಸಿಕೊಳ್ಳುವವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ.


ಕ್ರಿಸ್ತ ಯೇಸುವಿನ ಸೇವೆಯಲ್ಲಿ ನನ್ನ ಜೊತೆಕೆಲಸದವರಾದ ಪ್ರಿಸ್ಕಿಲ್ಲಳಿಗೂ ಮತ್ತು ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು